ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಎಬಿಡಿ ಈ ತಂಡದ ಪರ ಮೈದಾನಕ್ಕಿಳಿಯಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ

IPL 2022: AB de Villiers likely to play a coaching role for RCB team says Aakash Chopra

ಕಳೆದ ವರ್ಷ ಎಬಿ ಡಿವಿಲಿಯರ್ಸ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ವಿದಾಯವನ್ನು ಘೋಷಿಸುವುದರ ಮೂಲಕ ತಮ್ಮ ಅಪಾರ ಅಭಿಮಾನಿಗಳಿಗೆ ದಿಢೀರ್ ಬೇಸರ ಸುದ್ದಿಯೊಂದನ್ನು ನೀಡಿದ್ದರು. ಅದರಲ್ಲಿಯೂ ಎಬಿ ಡಿವಿಲಿಯರ್ಸ್ ನಿವೃತ್ತಿ ಹೊಂದಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಪಾಲಿಗೆ ದೊಡ್ಡ ಮಟ್ಟದಲ್ಲಿಯೇ ನಿರಾಸೆಯನ್ನು ಮೂಡಿಸಿತ್ತು. ಹಲವಾರು ವರ್ಷಗಳಿಂದ ತಮ್ಮ ನೆಚ್ಚಿನ ತಂಡದ ಪರ ಆಡುತ್ತಾ ಬಂದಿದ್ದ ಎಬಿ ಡಿವಿಲಿಯರ್ಸ್ ಈ ರೀತಿಯ ಹಠಾತ್ ನಿರ್ಧಾರವನ್ನು ಯಾಕೆ ಕೈಗೊಂಡರು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಬೇಸರವನ್ನು ಹೊರಹಾಕಿದ್ದರು.

Ind vs SA: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ, ಕೊಹ್ಲಿ, ಉಮೇಶ್ ಯಾದವ್ ಕಂಬ್ಯಾಕ್ LIVE SCOREInd vs SA: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ, ಕೊಹ್ಲಿ, ಉಮೇಶ್ ಯಾದವ್ ಕಂಬ್ಯಾಕ್ LIVE SCORE

ಹೀಗೆ ನಿವೃತ್ತಿಯನ್ನು ಘೋಷಿಸಿರುವ ಎಬಿ ಡಿವಿಲಿಯರ್ಸ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುವುದರ ಕುರಿತು ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಎಬಿ ಡಿವಿಲಿಯರ್ಸ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ಕೋಚ್ ಅಥವಾ ಮೆಂಟರ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಳ್ಳಬಹುದು ಎಂದು ಹಲವಾರು ಕ್ರಿಕೆಟ್ ಅಭಿಮಾನಿಗಳು ಹಾಗೂ ಕ್ರೀಡಾ ಪಂಡಿತರು ಊಹಿಸಿದ್ದರು.

ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಈ ವಿಷಯದ ಕುರಿತಾಗಿ ಇದೀಗ ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿಯೇ ಇರಲಿದ್ದು ಯಾವ ಪಾತ್ರವನ್ನು ನಿರ್ವಹಿಸಬಹುದು ಎಂಬುದನ್ನು ಈ ಕೆಳಕಂಡಂತೆ ಊಹಿಸಿದ್ದಾರೆ.

ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿಯೇ ಇರಲಿದ್ದಾರೆ

ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿಯೇ ಇರಲಿದ್ದಾರೆ

ಎಬಿ ಡಿವಿಲಿಯರ್ಸ್ ಐಪಿಎಲ್ ಭವಿಷ್ಯದ ಕುರಿತು ಮಾತನಾಡಿರುವ ಆಕಾಶ್ ಚೋಪ್ರಾ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಎಬಿಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿಯೇ ಇರಲಿದ್ದು ಮಾರ್ಗದರ್ಶಕನಾಗಿ ಅಥವಾ ಬ್ಯಾಟಿಂಗ್ ವಿಭಾಗದ ಕೋಚ್ ಆಗಿ ಆಟಗಾರರ ಜೊತೆ ಕಾಣಿಸಿಕೊಳ್ಳಲಿದ್ದಾರೆ ಎಂದಿದ್ದಾರೆ. ಸಂಜಯ್ ಬಂಗಾರ್ ಪ್ರಮುಖ ಕೋಚ್ ಆಗಿರಬಹುದು ಆದರೆ ಎಬಿ ಡಿವಿಲಿಯರ್ಸ್ ಕೂಡ ಆಟಗಾರರಿಗೆ ಮಾರ್ಗದರ್ಶನವನ್ನು ನೀಡುತ್ತಾ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದು ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಕೋಚ್ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದ ಎಬಿಡಿ

ಇತ್ತೀಚೆಗಷ್ಟೇ ಕೋಚ್ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದ ಎಬಿಡಿ

ಇನ್ನು ನಿವೃತ್ತಿ ಹೊಂದಿದ ನಂತರ ಎಲ್ಲಿಯೂ ಕೂಡ ಮಾತನಾಡದೇ ಇದ್ದ ಎಬಿ ಡಿವಿಲಿಯರ್ಸ್ ಇತ್ತೀಚಿಗಷ್ಟೆ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿ ತಾನು ಮುಂದಿನ ದಿನಗಳಲ್ಲಿ ಮಾರ್ಗದರ್ಶಕನಾಗಿ ಅಥವಾ ಕೋಚ್ ಆಗಿ ದಕ್ಷಿಣ ಆಫ್ರಿಕಾ ಅಂತರರಾಷ್ಟ್ರೀಯ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕೆಲಸ ನಿರ್ವಹಿಸುವ ಆಸೆಯನ್ನು ಬಿಚ್ಚಿಟ್ಟಿದ್ದರು.

ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎಬಿಡಿ ಜತೆ ಮಾತುಕತೆ ನಡೆಸಿದೆ

ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎಬಿಡಿ ಜತೆ ಮಾತುಕತೆ ನಡೆಸಿದೆ

ಎಬಿ ಡಿವಿಲಿಯರ್ಸ್ ಕುರಿತು ಇನ್ನೂ ಮುಂದುವರಿದು ಮಾತನಾಡಿರುವ ಆಕಾಶ್ ಚೋಪ್ರಾ ಎಬಿ ಡಿವಿಲಿಯರ್ಸ್ ಅವರನ್ನು ತಂಡದಲ್ಲಿಯೇ ಉಳಿಸಿಕೊಳ್ಳುವುದರ ಕುರಿತಾಗಿ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎಬಿಡಿ ಜತೆ ಮಾತುಕತೆಯನ್ನು ನಡೆಸಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Story first published: Tuesday, January 11, 2022, 14:55 [IST]
Other articles published on Jan 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X