ಈ ತ್ಯಾಗ ಸುಲಭದ ನಿರ್ಧಾರವಲ್ಲ: ಮಯಾಂಕ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಕೋಚ್ ಕುಂಬ್ಳೆ

ನಿರ್ಣಾಯಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಆರ್‌ಸಿಬಿಯನ್ನು ಭಾರೀ ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಪ್ಲೇಆಫ್ ಸ್ಪರ್ಧೆಯಲ್ಲಿ ಪಂಜಾಬ್ ಕಿಂಗ್ಸ್ ಒಂದು ಹಂತದ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಆರ್‌ಸಿಬಿ ವಿರುದ್ಧ ಎಲ್ಲಾ ವಿಭಾಗದಲ್ಲಿಯೂ ಸಂಪೂರ್ಣವಾಗಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿದ ಜಾನಿ ಬೈರ್‌ಸ್ಟೋವ್ ಅವರ ಸಿಡಿಸಲಬ್ಬರದ ಬ್ಯಾಟಿಂಗ್ ಪ್ರದರ್ಶನ ಆರ್‌ಸಿಬಿಯನ್ನು ಆರಂಭದಲ್ಲಿಯೇ ಹಿಮ್ಮೆಟ್ಟಿವಂತೆ ಮಾಡಿತ್ತು.

ಕೇವಲ 29 ಎಸೆತಗಳನ್ನು ಎದುರಿಸಿದ ಜಾನಿ ಬೈರ್‌ಸ್ಟೊವ್ 66 ರನ್‌ಗಳನ್ನು ಗಳಿಸಿದ್ದಾರೆ. ಏಳು ಭರ್ಜರಿ ಸಿಕ್ಸರ್ ಹಾಗೂ ನಾಲ್ಕು ಬೌಂಡರಿಗಳು ಈ ಇನ್ನಿಂಗ್ಸ್‌ನಲ್ಲಿದ್ದವು. ಈ ಭರ್ಜರಿ ಇನ್ನಿಂಗ್ಸ್‌ನ ಬಗ್ಗೆ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ಕೋಚ್ ಅನಿಲ್ ಕುಂಬ್ಳೆ ಜಾನಿ ಬೈರ್‌ಸ್ಟೋವ್‌ಗಾಗಿ ಆರಂಭಿಕ ಸ್ಥಾನವನ್ನು ಬಿಟ್ಟುಕೊಡಲು ನಿರ್ಧರಿಸಿದ ನಾಯಕ ಮಯಾಂಕ್ ಅಗರ್ವಾಲ್ ನಿರ್ಧಾರಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

IPL 2022: ಈತ ಶೀಘ್ರದಲ್ಲೇ ಟೀಂ ಇಂಡಿಯಾ ಪರ 3 ಫಾರ್ಮೆಟ್ ಆಟಗಾರನಾಗುತ್ತಾನೆ: ರೋಹಿತ್ ಶರ್ಮಾIPL 2022: ಈತ ಶೀಘ್ರದಲ್ಲೇ ಟೀಂ ಇಂಡಿಯಾ ಪರ 3 ಫಾರ್ಮೆಟ್ ಆಟಗಾರನಾಗುತ್ತಾನೆ: ರೋಹಿತ್ ಶರ್ಮಾ

"ಕಾಣಿ ಬೈರ್‌ಸ್ಟೋವ್ ಓರ್ವ ವಿಶೇಷ ಆಟಗಾರ. ಅಗ್ರ ಕ್ರಮಾಂಕದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಮಯಾಂಕ್ ಅಗರ್ವಾಲ್‌ಗೆ ತನ್ನ ಸ್ಥಾನವನ್ನು ಬುಟ್ಟುಕೊಡುವುದು ನಿಜಕ್ಕೂ ಸುಲಭದ ನಿರ್ಧಾರವಾಗಿರಲಿಲ್ಲ. ಆದರೆ ಮಯಾಂಕ್ ಅದನ್ನು ಮಾಡಿ ತಾವು ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿಯುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ" ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

ನಾವು ಕೂಡ ಮಧ್ಯಮ ಕ್ರಮಾಂಕದಲ್ಲಿ ಲಿವಿಂಗ್‌ಸ್ಟೋನ್, ಜಿತೇಶ್ ಹಾಗೂ ರಿಷಿ ಜೊತೆಗೆ ಅನುಭವಿ ಆಟಗಾರನ ಅಗತ್ಯವಿದೆ ಎಂದುಕೊಂಡಿದ್ದೆವು. ಹಾಗಾಗಿ ಜಾನಿ ಅಗ್ರ ಕ್ರಮಾಂಕದಲ್ಲಿ ಇಳಿದು ಸ್ಪೋಟಕ ಪ್ರದರ್ಶನ ನೀಡುತ್ತಿದ್ದಾರೆ. ಆರ್‌ಸಿಬಿ ವಿರುದ್ಧ ಪವರ್‌ಪ್ಲೇನಲ್ಲಿ ಸ್ಪೋಟಕ ಪ್ರದರ್ಶನ ನೀಡಿ ಪಂದ್ಯವನ್ನು ತಮ್ಮ ತಂಡದ ಪರವಾಗಿ ತೆಗೆದುಕೊಂಡರು" ಎಂದು ಕೋಚ್ ಕುಂಬ್ಳೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

"ಆತ ನಮಗೆ ಅತ್ಯಂತ ಪ್ರಮುಖ ಆಟಗಾರ. ಐದು ಪಂದ್ಯಗಳ ಹಿಂದೆ ಅನುಭವಿ ಆಟಗಾರರು ಮಧ್ಯಮ ಕ್ರಮಾಂಕದ ಜವಾಬ್ಧಾರಿ ತೆಗೆದುಕೊಳ್ಳುವ ಬಗ್ಗೆ ನಿರ್ಧಾರವನ್ನು ತೆಗೆದುಕೊಂಡೆವು. ಹಾಗಾಗಿ ಆರಂಭಿಕ ಆಟಗಾರನಾಗಿ ಜಾನಿ ಕಣಕ್ಕಿಳಿದು ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ" ಎಂದಿದ್ದಾರೆ ಅನಿಲ್ ಕುಂಬ್ಳೆ.

ಟೀಮ್ ಇಂಡಿಯಾಗಿದು ಕಹಿ ಸುದ್ದಿ: ಕಳವಳ ಮೂಡಿಸಿದೆ ಈ 5 ಸ್ಟಾರ್ ಆಟಗಾರರ ಐಪಿಎಲ್ ಫಾರ್ಮ್!ಟೀಮ್ ಇಂಡಿಯಾಗಿದು ಕಹಿ ಸುದ್ದಿ: ಕಳವಳ ಮೂಡಿಸಿದೆ ಈ 5 ಸ್ಟಾರ್ ಆಟಗಾರರ ಐಪಿಎಲ್ ಫಾರ್ಮ್!

ಆರ್‌ಸಿಬಿ ಪ್ಲೇಯಿಂಗ್ ‍XI: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಡೇವಿಡ್ ವಿಲ್ಲಿ, ಆಕಾಶ್ ದೀಪ್, ಜೇಸನ್ ಬೆಹ್ರೆಂಡಾರ್ಫ್, ಚಾಮ ವಿ ಮಿಲಿಂದ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಫಿನ್ ಅಲೆನ್, ಶೆರ್ಫೇನ್ ರುದರ್ಫೋರ್ಡ್, ಅನೀಶ್ವರ್ ಗೌತಮ್

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಮಯಾಂಕ್ ಅಗರ್ವಾಲ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಅರ್ಶ್‌ದೀಪ್ ಸಿಂಗ್ ಬೆಂಚ್:
ಬೆನ್ನಿ ಹೋವೆಲ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಶಾರುಖ್ ಖಾನ್, ಪ್ರೇರಕ್ ಮಂಕಡ್, ಓಡಿಯನ್ ಸ್ಮಿತ್, ಇಶಾನ್ ಪೊರೆಲ್, ಅಥರ್ವ ಟೈಡೆ, ಪ್ರಭುಸಿಮ್ರಾನ್ ಸಿಂಗ್, ನಾಥನ್ ಎಲ್ಲಿಸ್, ವೈಭವ್ ಅರೋರಾ, ಅನ್ಶ್ ಪಟೇಲ್, ರಾಜ್ ಬಾವಾ, ಸಂದೀಪ್ ಶರ್ಮಾ

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Saturday, May 14, 2022, 9:17 [IST]
Other articles published on May 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X