ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

MI vs DC: ಪಂದ್ಯಕ್ಕೂ ಮುನ್ನ ಇನ್ಸ್ಟಾಗ್ರಾಂ ಸ್ಟೋರಿ ಹರಿಬಿಟ್ಟ ಅರ್ಜುನ್ ತೆಂಡೂಲ್ಕರ್; ಆರ್‌ಸಿಬಿ ಅಭಿಮಾನಿಗಳಿಗೆ ಆತಂಕ!

IPL 2022: Arjun Tendulkar hints about his IPL debut against DC via his instagram story

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಸನಿಹಕ್ಕೆ ಬಂದಿದ್ದು, ಭಾನುವಾರ ನಡೆಯಲಿರುವ ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಲೀಗ್ ಹಂತ ಅಂತ್ಯಗೊಳ್ಳಲಿದೆ. ಈಗಾಗಲೇ ಗುಜರಾತ್ ಟೈಟನ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದು, ಟಾಪ್ 2 ಸ್ಥಾನಗಳನ್ನು ಪಡೆದುಕೊಂಡಿರುವ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮೇ 24ರಂದು ನಡೆಯುವ ಒಂದನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದರೆ, ಮೇ 25ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಯಾವ ತಂಡ ಕಣಕ್ಕಿಳಿಯಲಿದೆ ಎಂಬುದು ಇದೀಗ ಕುತೂಹಲವನ್ನು ಹೆಚ್ಚಿಸಿದೆ.

IPL 2022: ಕ್ವಾಲಿಫೈಯರ್ 1 ಪಂದ್ಯ ನಿಗದಿ, ಗುಜರಾತ್ ಜೊತೆ ಸೆಣಸಾಡಲಿದೆ ಈ ತಂಡ; ಇಲ್ಲಿದೆ ವಿವರIPL 2022: ಕ್ವಾಲಿಫೈಯರ್ 1 ಪಂದ್ಯ ನಿಗದಿ, ಗುಜರಾತ್ ಜೊತೆ ಸೆಣಸಾಡಲಿದೆ ಈ ತಂಡ; ಇಲ್ಲಿದೆ ವಿವರ

ಹೌದು, ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲಿರುವ ನಾಲ್ಕನೇ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ ಸೆಣಸಾಡಲಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಥವಾ ಡೆಲ್ಲಿ ಕ್ಯಾಪಿಟಲ್ಸ್ ಈ 2 ತಂಡಗಳಲ್ಲಿ ಯಾವ ತಂಡ ಪ್ರವೇಶ ಪಡೆದುಕೊಳ್ಳಲಿದೆ ಎಂಬುದು ಇದೀಗ ಪ್ರಶ್ನೆಯಾಗಿದೆ. ಸದ್ಯ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕನೇ ಸ್ಥಾನದಲ್ಲಿದ್ದು, ಇಂದು ( ಮೇ 21 ) ನಡೆಯಲಿರುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ನಾಲ್ಕನೇ ಸ್ಥಾನಕ್ಕೆ ಏರಿಕೆ ಕಾಣಲಿದ್ದು ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲಿದೆ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಿಂದ ಹೊರ ಬೀಳಲಿದೆ.

DC vs MI Playing 11: ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ಟೀಮ್ ಹೀಗಿರಲಿ; ಈತನಿಗೆ ನಾಯಕತ್ವ ನೀಡಿDC vs MI Playing 11: ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ಟೀಮ್ ಹೀಗಿರಲಿ; ಈತನಿಗೆ ನಾಯಕತ್ವ ನೀಡಿ

ಹೀಗಾಗಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಬಲಿಷ್ಠ ಆಟಗಾರರೊಂದಿಗೆ ಕಣಕ್ಕಿಳಿದು ಗೆಲ್ಲಲಿ ಎಂದು ಆಶಿಸುತ್ತಿದ್ದಾರೆ. ಆದರೆ ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ಆಟಗಾರನಾದ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ಪೋಸ್ಟ್ ಮಾಡಿರುವ ಇನ್ಸ್ಟಾಗ್ರಾಮ್ ಸ್ಟೋರಿಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳನ್ನು ಅಕ್ಷರಶಃ ಆತಂಕಕ್ಕೆ ದೂಡಿವೆ. ಹೀಗೆ ಅರ್ಜುನ್ ತೆಂಡೂಲ್ಕರ್ ಇನ್ಸ್ಟಾಗ್ರಾಂ ಖಾತೆಯ ಸ್ಟೋರಿ ಕಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಬೇಸರಕ್ಕೊಳಗಾಗಲು ಕಾರಣವೇನೆಂಬುದರ ಕುರಿತಾದ ವಿವರ ಈ ಕೆಳಕಂಡಂತಿದೆ.

ಅಷ್ಟಕ್ಕೂ ಅರ್ಜುನ್ ತೆಂಡೂಲ್ಕರ್ ಪೋಸ್ಟ್ ಮಾಡಿರುವ ಸ್ಟೋರಿಯಲ್ಲೇನಿದೆ?

ಅಷ್ಟಕ್ಕೂ ಅರ್ಜುನ್ ತೆಂಡೂಲ್ಕರ್ ಪೋಸ್ಟ್ ಮಾಡಿರುವ ಸ್ಟೋರಿಯಲ್ಲೇನಿದೆ?

ಅರ್ಜುನ್ ತೆಂಡೂಲ್ಕರ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ತಾವು ಅಭ್ಯಾಸ ನಡೆಸುತ್ತಿರುವ ವಿಡಿಯೋ ತುಣುಕುಗಳನ್ನು ಹಂಚಿಕೊಂಡಿದ್ದಾರೆ. 8 ಸ್ಟೋರಿಗಳನ್ನು ಹರಿಬಿಟ್ಟಿರುವ ಅರ್ಜುನ್ ತೆಂಡೂಲ್ಕರ್ ಮುಂದಿನ ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಶುರು ಆತಂಕ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಶುರು ಆತಂಕ

ಅರ್ಜುನ್ ತೆಂಡೂಲ್ಕರ್ ಪೋಸ್ಟ್ ಮಾಡಿರುವ ಈ ಸ್ಟೋರಿಗಳನ್ನು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬಲಿಷ್ಠ ಆಟಗಾರರೊಂದಿಗೆ ಮುಂಬೈ ಇಂಡಿಯನ್ಸ್ ಕಣಕ್ಕಿಳಿದರೆ ಮಾತ್ರ ಜಯ ಸಾಧಿಸಲಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಪ್ರವೇಶಿಸುವುದಕ್ಕೆ ಅನುಕೂಲವಾಗಲಿದೆ. ಆದರೆ ಅನನುಭವಿ ಅರ್ಜುನ್ ತೆಂಡೂಲ್ಕರ್ ಅವರಿಗೆ ಈ ಪಂದ್ಯದಲ್ಲಿ ಅವಕಾಶ ನೀಡಿದರೆ ಮುಂಬೈ ಇಂಡಿಯನ್ಸ್ ತಂಡ ನಿರೀಕ್ಷಿಸಿದ ಗೆಲುವು ಪಡೆದುಕೊಳ್ಳಲಾಗದೇ ಸೋಲಬಹುದು ಎಂಬ ಆತಂಕವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.

ಚೆನ್ನೈ ಬಿಟ್ಟು ಎಲ್ಲೂ ಹೋಗಲ್ಲ ನಾನು! | Oneindia Kannada
ಹಿಂದೆಯೇ ಸುಳಿವು ನೀಡಿದ್ದರು ರೋಹಿತ್ ಮತ್ತು ಜಯವರ್ಧನೆ

ಹಿಂದೆಯೇ ಸುಳಿವು ನೀಡಿದ್ದರು ರೋಹಿತ್ ಮತ್ತು ಜಯವರ್ಧನೆ

ಇನ್ನು ಅರ್ಜುನ್ ತೆಂಡೂಲ್ಕರ್ ಕಳೆದೆರಡು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದು ಇಲ್ಲಿಯವರೆಗೂ ಯಾವುದೇ ಪಂದ್ಯದಲ್ಲಿಯೂ ಕಣಕ್ಕಿಳಿಯುವ ಅವಕಾಶವನ್ನು ಪಡೆದುಕೊಂಡಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಅವರಿಗೆ ಅವಕಾಶ ನೀಡುವುದರ ಕುರಿತು ಈ ಹಿಂದೆ ಜಯವರ್ಧನೆ ಮತ್ತು ರೋಹಿತ್ ಶರ್ಮಾ ಸುಳಿವನ್ನು ನೀಡಿದ್ದರು. ತಂಡದಲ್ಲಿ ಅರ್ಜುನ್ ತೆಂಡೂಲ್ಕರ್ ಇದ್ದು ಮುಂದಿನ ಪಂದ್ಯಗಳಲ್ಲಿ ಸಮಯ ನೋಡಿಕೊಂಡು ಅವಕಾಶ ನೀಡಲಿದ್ದೇವೆ ಎಂದು ಮಹೇಲಾ ಜಯವರ್ಧನೆ ಹೇಳಿಕೆ ನೀಡಿದ್ದರು ಹಾಗೂ ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಯುವ ಆಟಗಾರರಿಗೆ ಅವಕಾಶವನ್ನು ನೀಡಲಿದ್ದೇವೆ ಎಂಬ ಸುಳಿವನ್ನು ನೀಡಿದ್ದರು.

Story first published: Saturday, May 21, 2022, 14:07 [IST]
Other articles published on May 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X