For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022ಕ್ಕಾಗಿ ಕಸರತ್ತು ಆರಂಭಿಸಿದ ರೈನಾ; ಮೆಗಾ ಹರಾಜಿನಲ್ಲಿ ಯಾವ ತಂಡ ಸೇರಲಿದ್ದಾರೆ?

IPL 2022 Auction: Suresh Raina started workout and shared a photo on social media

ಮಿಸ್ಟರ್ ಐಪಿಎಲ್ ಎಂದೇ ಖ್ಯಾತಿಯನ್ನು ಪಡೆದಿರುವ ಸುರೇಶ್ ರೈನಾ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಅತ್ಯದ್ಭುತ ಪ್ರದರ್ಶನ ನೀಡುವುದರ ಮೂಲಕ ಹಲವಾರು ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಅತಿ ದೊಡ್ಡ ಪಾತ್ರವನ್ನು ನಿರ್ವಹಿಸಿದ ಖ್ಯಾತಿಯನ್ನು ಹೊಂದಿದ್ದಾರೆ. ಇನ್ನು ತಮ್ಮ ತಂಡದ ಪರ ಹಲವಾರು ಆವೃತ್ತಿಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದ ಸುರೇಶ್ ರೈನಾ ಅವರನ್ನು ಹಲವಾರು ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿತ್ತು.

ಹೌದು, ಇಷ್ಟು ವರ್ಷಗಳಲ್ಲಿ ಮೆಗಾ ಹರಾಜು ನಡೆದಾಗಲೆಲ್ಲಾ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತಾನು ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದಾಗ ಅದರಲ್ಲಿ ಮೊದಲನೆಯ ಪ್ರಾಶಸ್ತ್ಯ ಎಂಎಸ್ ಧೋನಿ ಅವರಿಗೆ ಇದ್ದರೆ, ಎರಡನೇ ಪ್ರಾಶಸ್ತ್ಯ ಸುರೇಶ್ ರೈನಾ ಅವರಿಗೆ ಕಡ್ಡಾಯವಾಗಿ ಇರುತ್ತಿತ್ತು. ಆದರೆ ಈ ಬಾರಿ ನಡೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸ್ 4 ಆಟಗಾರರನ್ನು ಉಳಿಸಿಕೊಂಡಿದ್ದು, ತಮ್ಮ ತಂಡದ ಪವರ್ ಹಿಟ್ಟರ್ ಸುರೇಶ್ ರೈನಾ ಅವರನ್ನು ರಿಟೈನ್ ಮಾಡಿಕೊಳ್ಳದೆ ತಂಡದಿಂದ ಕೈಬಿಟ್ಟಿದೆ.

ಹೌದು, ಮುಂದಿನ ವರ್ಷ ನಡೆಯಲಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ತಂಡಗಳಾದ ಲಖನೌ ಮತ್ತು ಅಹ್ಮದಾಬಾದ್ ಕೂಡ ಭಾಗವಹಿಸುವುದರಿಂದ ಒಟ್ಟು 10 ತಂಡಗಳ ನಡುವೆ ಟ್ರೋಫಿಗಾಗಿ ಹಣಾಹಣಿ ನಡೆಯಲಿದೆ. ಹೀಗಾಗಿ ಮುಂದಿನ ಐಪಿಎಲ್ ಆವೃತ್ತಿ ಆರಂಭಕ್ಕೂ ಮುನ್ನ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಜರುಗಲಿದ್ದು ಇದಕ್ಕೂ ಮುನ್ನ ಬಿಸಿಸಿಐ ಸದ್ಯ ಅಸ್ತಿತ್ವದಲ್ಲಿರುವ ತಂಡಗಳಿಗೆ 4 ಆಟಗಾರರನ್ನು ರಿಟೇನ್ ಮಾಡಿಕೊಳ್ಳುವ ಅವಕಾಶವನ್ನು ನೀಡಿತ್ತು. ಈ ನಿಯಮದಂತೆ ಚೆನ್ನೈ ಸೂಪರ್ ಕಿಂಗ್ಸ್ ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ ಮತ್ತು ರುತುರಾಜ್ ಗಾಯಕ್ವಾಡ್ ಈ 4 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ.

ಹೀಗೆ ಈ ಬಾರಿಯ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ರಿಟೆನ್ಷನ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳದೇ ಹೊರಬಿದ್ದಿರುವ ಸುರೇಶ್ ರೈನಾ ಮುಂಬರಲಿರುವ ಐಪಿಎಲ್ ಆವೃತ್ತಿಗೂ ಮುನ್ನ ನಡೆಯಲಿರುವ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನನ್ನು ರಿಟೈನ್ ಮಾಡಿಕೊಳ್ಳದೇ ಇರುವುದರ ಕುರಿತು ಇದುವರೆಗೂ ಎಲ್ಲಿಯೂ ಮಾತನಾಡದ ಸುರೇಶ್ ರೈನಾ ಮೌನ ವಹಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಸಕ್ರಿಯವಾಗಿರುವ ಸುರೇಶ್ ರೈನಾ ಈ ಬಾರಿಯ ಐಪಿಎಲ್ ರಿಟೆನ್ಷನ್ ಪ್ರಕ್ರಿಯೆ ಮುಗಿದಾಗಿನಿಂದ ಯಾವುದೇ ರೀತಿಯ ವ್ಯಾಯಾಮದ ಫೋಟೋವನ್ನಾಗಲಿ ಅಥವಾ ವಿಡಿಯೋವನ್ನಾಗಲಿ ಪೋಸ್ಟ್ ಮಾಡಿರಲಿಲ್ಲ. ಆದರೆ ಇಂದು ( ಡಿಸೆಂಬರ್ 14 ) ಸುರೇಶ್ ರೈನಾ ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಯೋಗ ಮಾಡುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದು 'ನನ್ನ ಮುಂಜಾನೆಯನ್ನು ಯೋಗದೊಂದಿಗೆ ಆರಂಭಿಸಿದ್ದೇನೆ ಹಾಗೂ ಆತ್ಮವನ್ನು ಹೆಚ್ಚು ಬಲಿಷ್ಠ ಪಡಿಸಲು ಇದು ಸಹಾಯಕಾರಿಯಾಗಿದೆ' ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ಸುರೇಶ್ ರೈನಾ ಮತ್ತೆ ವರ್ಕೌಟ್ ಆರಂಭಿಸಿದ್ದು ಮುಂಬರಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಗೆ ಸಿದ್ಧತೆ ಆರಂಭಿಸಿದ್ದಾರೆ. ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಹೊರಬಿದ್ದಿರುವ ಸುರೇಶ್ ರೈನಾ ಅವರನ್ನು ಮುಂಬರಲಿರುವ ಐಪಿಎಲ್ ಮೆಗಾ ಹರಾಜಿನಲ್ಲಿ ಯಾವ ತಂಡ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಾಗಿದ್ದು, ಇತ್ತೀಚೆಗಷ್ಟೇ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸುರೇಶ್ ರೈನಾ ಕುರಿತಾಗಿ ಮಾತನಾಡಿದ್ದು ಮುಂಬರಲಿರುವ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಖರೀದಿಸಲು ಯತ್ನಿಸಲಿರುವ ಪ್ರಥಮ ಆಟಗಾರ ಸುರೇಶ್ ರೈನಾ ಅವರೇ ಆಗಿರುತ್ತಾರೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದರು. ರಾಬಿನ್ ಉತ್ತಪ್ಪ ಅವರ ವಿಶ್ವಾಸದಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೆ ಸುರೇಶ್ ರೈನಾ ಅವರನ್ನು ಖರೀದಿಸುತ್ತಾ ಅಥವಾ ಸುರೇಶ್ ರೈನಾ ಇತರೆ ತಂಡದ ಪಾಲಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Story first published: Wednesday, December 15, 2021, 9:57 [IST]
Other articles published on Dec 15, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+