ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪ್ಲೇ ಆಫ್‌ನಿಂದ ಹೊರಬಿದ್ದ ಮುಂಬೈಗೆ ಮತ್ತಷ್ಟು ಆಘಾತ: ಸೂರ್ಯಕುಮಾರ್ ಯಾದವ್ ಟೂರ್ನಿಯಿಂದಲೇ ಔಟ್

Suryakumar yadav

ಈಗಾಗಲೇ ಪ್ಲೇ ಆಫ್ ಕನಸನ್ನ ಕೈ ಬಿಟ್ಟಿರುವ ಮುಂಬೈ ಇಂಡಿಯನ್ಸ್‌ ಉಳಿದಿರುವ ಪಂದ್ಯಗಳನ್ನ ಗೆದ್ದು ತನ್ನ ಗೌರವ ಉಳಿಸಿಕೊಳ್ಳಬೇಕು ಎಂದು ಯೋಜನೆ ಹಾಕಿಕೊಳ್ಳುವ ಮೊದಲೇ ಆಘಾತ ಎದುರಾಗಿದೆ. ಮುಂಬೈ ಇಂಡಿಯನ್ಸ್‌ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಗಾಯಗೊಂಡು ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಎಡಗೈ ಮಣಿಕಟ್ಟಿನ ಸ್ನಾಯುವಿನ ಗಾಯದಿಂದಾಗಿ ಸೂರ್ಯಕುಮಾರ್ ಯಾದವ್ ಐಪಿಎಲ್ 2022 ರಿಂದ ಹೊರಗುಳಿದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ವೇಳೆ ಸೂರ್ಯಕುಮಾರ್ ಯಾದವ್ ಗಾಯಗೊಂಡರು. ಹೀಗಾಗಿ ಸೋಮವಾರ ನಡೆಯುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಸೇರಿದಂತೆ ಉಳಿದ ಮೂರು ಪಂದ್ಯಗಳಿಗೆ ಸೂರ್ಯಕುಮಾರ್ ಯಾದವ್ ಅಲಭ್ಯರಾಗಿದ್ದಾರೆ.

ಆತ ನೀಡಿದ ಆ ಸಲಹೆಯೇ ಯಶಸ್ಸಿಗೆ ಕಾರಣ: ಭರ್ಜರಿ ಅರ್ಧ ಶತಕ ಸಿಡಿಸಿದ ಕಾನ್ವೆ ಹೇಳಿದ್ದಿಷ್ಟು!ಆತ ನೀಡಿದ ಆ ಸಲಹೆಯೇ ಯಶಸ್ಸಿಗೆ ಕಾರಣ: ಭರ್ಜರಿ ಅರ್ಧ ಶತಕ ಸಿಡಿಸಿದ ಕಾನ್ವೆ ಹೇಳಿದ್ದಿಷ್ಟು!

ಐಪಿಎಲ್ 2022ರ ಸೀಸನ್‌ನಲ್ಲಿ 8 ಪಂದ್ಯಗಳನ್ನ ಆಡಿರುವ ಸೂರ್ಯಕುಮಾರ್ ಯಾದವ್‌ 43.29ರ ಬ್ಯಾಟಿಂಗ್ ಸರಾಸರಿ ಜೊತೆಗೆ 145.67 ಸ್ಟ್ರೈಕ್‌ರೇಟ್‌ನಲ್ಲಿ 303 ರನ್ ಕಲೆಹಾಕಿದ್ದಾರೆ. ಮೂರು ಅರ್ಧಶತಕ ದಾಖಲಿಸಿರುವ ಸೂರ್ಯಕುಮಾರ್ ಯಾದವ್ ಅಜೇಯ 68 ಗರಿಷ್ಠ ರನ್ ಸಿಡಿಸಿದ್ದಾರೆ. ಟೂರ್ನಿಯಲ್ಲಿ 16 ಸಿಕ್ಸರ್ ಕಲೆಹಾಕಿದ್ದಾರೆ.

ಮುಂಬೈನ ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ಸೋಮವಾರ(ಮೇ. 09) ನಡೆಯುತ್ತಿರುವ ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ.
ಸೂರ್ಯಕುಮಾರ್ ಯಾದವ್ ಬದಲು ರಮಣ್‌ದೀಪ್ ಸಿಂಗ್‌ ಅವಕಾಶ ಪಡೆದಿದ್ದಾರೆ. ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಟಿಮ್ ಸೌಥಿ, ವರುಣ್ ಚಕ್ರವರ್ತಿ

ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಟಿಮ್ ಡೇವಿಡ್, ಕಿರಾನ್ ಪೊಲಾರ್ಡ್, ರಮಣದೀಪ್ ಸಿಂಗ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಕುಮಾರ್ ಕಾರ್ತಿಕೇಯ, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್

Story first published: Tuesday, May 10, 2022, 9:32 [IST]
Other articles published on May 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X