IPL 2022: ಧೋನಿ, ಜಡೇಜಾ ಅಲ್ಲ, ಸಿಎಸ್‌ಕೆ ಸಾಲುಸಾಲು ಪಂದ್ಯ ಸೋಲುತ್ತಿರುವುದು ಈತನಿಂದ!

2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲೀಗ್ ಹಂತದಲ್ಲಿಯೇ ಹೊರಬೀಳುವ ಮೂಲಕ ಭಾರೀ ಹಿನ್ನಡೆಯನ್ನು ಅನುಭವಿಸಿದ ಚೆನ್ನೈ ಸೂಪರ್ ಕಿಂಗ್ಸ್ ನಂತರ ನಡೆದ 2021ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಚಾಂಪಿಯನ್ಸ್ ಆಗಿ ಹೊರಹೊಮ್ಮುವ ಮೂಲಕ ಕಮ್ ಬ್ಯಾಕ್ ಮಾಡಿತ್ತು. ಹೀಗೆ ಕಳೆದ ಆವೃತ್ತಿಯಲ್ಲಿ ಚಾಂಪಿಯನ್ಸ್ ಆಗುವುದರ ಮೂಲಕ ತಮ್ಮ ವಿರುದ್ಧ ಟೀಕೆ ನಡೆಸಿದ್ದವರಿಗೆ ಉತ್ತರ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊದಲ 4 ಪಂದ್ಯಗಳಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಹಿಂದೆಂದೂ ಕಂಡಿರದ ರೀತಿ ಕೆಟ್ಟ ಆರಂಭವನ್ನು ಪಡೆದುಕೊಂಡಿದೆ.
ಇದೇ ಮೊದಲ ಬಾರಿಗೆ ಟೂರ್ನಿಯೊಂದರ ಮೊದಲ 4 ಪಂದ್ಯಗಳಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ನೂತನ ನಾಯಕ ರವೀಂದ್ರ ಜಡೇಜಾ ನೇತೃತ್ವದಲ್ಲಿ ಕಣಕ್ಕಿಳಿದಿದ್ದು, ಹಲವಾರು ಮಾಜಿ ಕ್ರಿಕೆಟಿಗರು ಹಾಗೂ ಕ್ರಿಕೆಟ್ ಪರಿಣಿತರು ರವೀಂದ್ರ ಜಡೇಜಾ ಕಳಪೆ ನಾಯಕತ್ವವೇ ಚೆನ್ನೈ ಸೂಪರ್ ಕಿಂಗ್ಸ್ ಸತತ ಸೋಲಿಗೆ ಕಾರಣ ಎಂದಿದ್ದರೆ, ಇನ್ನೂ ಕೆಲವರು ಎಂಎಸ್ ಧೋನಿ ಓರ್ವ ಅನುಭವಿ ನಾಯಕನಾಗಿ ನೂತನ ನಾಯಕ ರವೀಂದ್ರ ಜಡೇಜಾಗೆ ಸರಿಯಾದ ಮಾರ್ಗದರ್ಶನದ ಸಾಥ್ ನೀಡದೇ ಇರುವುದರಿಂದಲೇ ಚೆನ್ನೈ ಸೂಪರ್ ಕಿಂಗ್ಸ್ ಸೋತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಾಲು ಸಾಲು ಪಂದ್ಯಗಳಲ್ಲಿ ಸೋತು ಕಳಪೆ ಆರಂಭ ಪಡೆದುಕೊಳ್ಳುವುದಕ್ಕೆ ಕಾರಣ ಯಾರು ಎಂಬ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರನೋರ್ವನ ಗಮನ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವತ್ತ ಇಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ. ಈ ಕುರಿತಾದ ಮತ್ತಷ್ಟು ಮಾಹಿತಿ ಮುಂದಿದೆ ಓದಿ..

ಗಾಯಕ್ವಾಡ್ ಚೆನ್ನೈ ಪರ ಆಡುವತ್ತ ಗಮನ ನೀಡುತ್ತಿಲ್ಲ
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಿಂಚಿದ್ದ ರುತುರಾಜ್ ಗಾಯಕ್ವಾಡ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಅಸ್ತ್ರವಾಗಿದ್ದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಳಪೆಯಾಗಿದ್ದಾರೆ. ಕಳಪೆ ಪ್ರದರ್ಶನ ನೀಡಿರುವ ರುತುರಾಜ್ ಗಾಯಕ್ವಾಡ್ ಟೀಮ್ ಇಂಡಿಯಾ ಪರ ಭವಿಷ್ಯದಲ್ಲಿ ಕಣಕ್ಕಿಳಿಯುವುದರ ಕುರಿತು ಚಿಂತಿಸುವುದನ್ನು ಬಿಟ್ಟು ಪ್ರಸ್ತುತ ಪ್ರತಿನಿಧಿಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಉತ್ತಮವಾಗಿ ಆಡುವತ್ತ ಗಮನ ಹರಿಸಬೇಕು ಎಂದು ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್ ಹೇಳಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಎಲ್ಲಾ ವಿಭಾಗಗಳಲ್ಲಿ ನೆಲಕಚ್ಚಿದೆ
ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಫೀಲ್ಡಿಂಗ್, ಬ್ಯಾಟಿಂಗ್ ಮತ್ತು ಬೌಲಿಂಗ್ ಎಲ್ಲಾ ವಿಭಾಗಗಳಲ್ಲಿಯೂ ಕೂಡ ವಿಫಲವಾಗಿದೆ ಎಂದಿರುವ ಬ್ರಾಡ್ ಹಾಗ್, ರುತುರಾಜ್ ಗಾಯಕ್ವಾಡ್ ಯಾವ ಎಸೆತಕ್ಕೆ ಯಾವ ಹೊಡೆತ ಬಾರಿಸಬೇಕು ಎಂಬ ಗೊಂದಲದೊಂದಿಗೆ ಬ್ಯಾಟ್ ಬೀಸುತ್ತಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಈ ರೀತಿಯ ಹೇಳಿಕೆ ನೀಡುವುದರ ಮೂಲಕ ರುತುರಾಜ್ ಗಾಯಕ್ವಾಡ್ ಕಳಪೆ ಪ್ರದರ್ಶನ ತಂಡದ ಸಾಲು ಸಾಲು ಸೋಲಿಗೆ ಕಾರಣ ಕೂಡ ಆಗಿದೆ ಎಂಬುದನ್ನು ಬ್ರಾಡ್ ಹಾಗ್ ಪರೋಕ್ಷವಾಗಿ ಹೇಳಿದ್ದಾರೆ.

ಕಳೆದ ಆವೃತ್ತಿಯಲ್ಲಿ ಮಿಂಚಿದ್ದ ರುತುರಾಜ್ ಗಾಯಕ್ವಾಡ್
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳ ಪೈಕಿ 18 ರನ್ ಕಲೆಹಾಕುವಲ್ಲಿ ಮಾತ್ರ ಶಕ್ತರಾಗಿರುವ ರುತುರಾಜ್ ಗಾಯಕ್ವಾಡ್ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ 16 ಪಂದ್ಯಗಳಲ್ಲಿ 635 ರನ್ ಬಾರಿಸುವ ಮೂಲಕ ಆರೆಂಜ್ ಕ್ಯಾಪ್ ವಿಜೇತರಾಗಿ ಹೊರಹೊಮ್ಮಿದ್ದರು. ಈ ಪೈಕಿ ರುತುರಾಜ್ ಗಾಯಕ್ವಾಡ್ ಶತಕವೊಂದನ್ನು ಕೂಡಾ ಸಿಡಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications