
ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ತಂಡದ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗದಿಂದಲೂ ಅದ್ಭುತ ಪ್ರದರ್ಶನಗಳು ಬರುತ್ತಿದ್ದು ತಂಡದ ಯಶಸ್ಸಿಗೆ ಕಾರಣವಾಗುತ್ತಿದೆ. ಗುಜರಾತ್ ಟೈಟನ್ಸ್ ತಂಡದ ಈ ಯಶಸ್ಸಿಗೆ ನಾಯಕ ಹಾರ್ದಿಕ್ ಪಾಂಡ್ಯ ಅವರ ಪ್ರದರ್ಶನ ಕೂಡ ಕಾರಣವಾಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಪಾಂಡ್ಯ ಅಮೋಘ ಪ್ರದರ್ಶನ ನೀಡುತ್ತಿದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ತಂಡದ ಗೆಲುವಿಗೆ ಪಾಂಡ್ಯ ಕಾರಣವಾಗಿದ್ದಾರೆ.
ಈ ಗೆಲುವಿನ ಬಳಿಕ ಮಾತನಾಡಿರುವ ಹಾರ್ದಿಕ್ ಪಾಂಡ್ಯ ತಂಡದ ಪ್ರದರ್ಶನದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಗುರುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದ ನಂತರ ಅಂಕಪಟ್ಟಿಯಲ್ಲಿ ಗುಜರಾತ್ ಟೈಟನ್ಸ್ ತಂಡ ಅಗ್ರಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ 52 ಎಸೆತಗಳನ್ನು ಎದುರಸಿದ ಹಾರ್ದಿಕ್ ಪಾಂಡ್ಯ 87 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ. ನಾಯಕತ್ವವನ್ನು ತಾನು ಆನಂದಿಸುತ್ತಿದ್ದು ಮುಂದೆ ನಿಂತು ಹಾದಿತೋರಲು ಅವಕಾಶ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ ಹಾರ್ದಿಕ್ ಪಾಂಡ್ಯ.
"ನಾಯಕತ್ವ ಬಹಳ ಮಜವಾಗಿದೆ. ಇದು ನನಗೆ ಹೆಚ್ಚಿನ ಜವಾಬ್ದಾರಿವಹಿಸಿಕೊಳ್ಳಲು ಅವಕಾಶ ನೀಡಿದೆ. ಹೀಗಾಗಿ ಮುಂದೆ ನುಂತು ಮುನ್ನಡೆಸಲು ಸಾಧ್ಯವಾಗಿದೆ. ತಂಡವಾಗಿ ನಾವು ಒಬ್ಬರಿಗೊಬ್ಬರು ಬೆಂಬಲ ನೀಡುತ್ತಾ ಸಾಗುತ್ತಿದ್ದೇವೆ. ನನ್ನ ಉದ್ದೇಶವೆಂದರೆ ಎಲ್ಲರೂ ಕೂಡ ಸಂತೋಷದಿಂದ ಇರಬೇಕು" ಎಂದು ಪಂದ್ಯದ ಮುಕ್ತಾಯದ ಬಳಿಕ ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯಿಸಿದ್ದಾರೆ.
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡುಸೆನ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ರಿಯಾನ್ ಪರಾಗ್, ಜೇಮ್ಸ್ ನೀಶಮ್, ಕುಲದೀಪ್ ಸೇನ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್
ಬೆಂಚ್: ನವದೀಪ್ ಸೈನಿ, ನಾಥನ್ ಕೌಲ್ಟರ್-ನೈಲ್, ಕರುಣ್ ನಾಯರ್, ಕೆಸಿ ಕಾರಿಯಪ್ಪ, ಡೇರಿಲ್ ಮಿಚೆಲ್, ಓಬೇದ್ ಮೆಕಾಯ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಅನುನಯ್ ಸಿಂಗ್, ಧ್ರುವ ಜುರೆಲ್, ಶುಭಂ ಗರ್ವಾಲ್, ಟ್ರೆಂಟ್ ಬೌಲ್ಟ್
ಗುಜರಾತ್ ಟೈಟನ್ಸ್: ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಭಮನ್ ಗಿಲ್, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ಯಶ್ ದಯಾಲ್
ಬೆಂಚ್:ವೃದ್ಧಿಮಾನ್ ಸಹಾ, ಪ್ರದೀಪ್ ಸಾಂಗ್ವಾನ್, ವರುಣ್ ಆರೋನ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಲ್ಜಾರಿ ಜೋಸೆಫ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ನೂರ್ ಅಹ್ಮದ್, ದರ್ಶನ್ ನಲ್ಕಂಡೆ, ಸಾಯಿ ಸುದರ್ಶನ್