ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ಮೆಗಾ ಹರಾಜು: ಈ 5 ಬಲಿಷ್ಠ ಆರಂಭಿಕ ಆಟಗಾರರ ಮೇಲೆ ಕಣ್ಣಿಟ್ಟಿದೆ ಚೆನ್ನೈ ಸೂಪರ್ ಕಿಂಗ್ಸ್

IPL 2022: Chennai Super Kings franchise may target these 5 openers in Mega auction

ಮುಂಬರುವ ಏಪ್ರಿಲ್ ತಿಂಗಳಿನಲ್ಲಿ ಶುರುವಾಗಲಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತಾದ ಚಟುವಟಿಕೆಗಳು ಈಗಾಗಲೇ ಗರಿಗೆದರಿವೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಸೇರ್ಪಡೆಯಾಗುತ್ತಿರುವುದರಿಂದ ಟ್ರೋಫಿಗಾಗಿ ಒಟ್ಟು ಹತ್ತು ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ವಿಶೇಷತೆಗಳಿಂದ ಕೂಡಿದ್ದು, ಇದೇ ತಿಂಗಳ 12 ಮತ್ತು 13ರಂದು ಬೆಂಗಳೂರಿನಲ್ಲಿ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಕೂಡ ನಡೆಯಲಿದೆ.

ಭಾರತ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ಮೂವರ ಹೆಸರು: ರೋಹಿತ್ ನಾಯಕನಾಗಲು ಇದೊಂದೇ ಅಡ್ಡಿ!ಭಾರತ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ಮೂವರ ಹೆಸರು: ರೋಹಿತ್ ನಾಯಕನಾಗಲು ಇದೊಂದೇ ಅಡ್ಡಿ!

ಈ ಮೆಗಾ ಹರಾಜು ಪ್ರಕ್ರಿಯೆಗೆ ಕೇವಲ ಮೂರು ದಿನಗಳು ಬಾಕಿ ಉಳಿದಿದ್ದು, ಯಾವ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲಿವೆ ಎಂಬ ಕುತೂಹಲಗಳು ಹೆಚ್ಚಾಗುತ್ತಲೇ ಇವೆ. ಅದರಲ್ಲಿಯೂ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ಹೆಚ್ಚು ಯಶಸ್ಸು ಸಾಧಿಸಿರುವ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಯಾವ ಆಟಗಾರರನ್ನು ಖರೀದಿಸಲಿದೆ ಎಂಬ ಕಾತುರತೆ ಅಭಿಮಾನಿಗಳ ಪಾಲಿಗೆ ಹೆಚ್ಚಿದೆ. ಇನ್ನು ಈ ಬಾರಿಯ ಆಟಗಾರರ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ ಮತ್ತು ಋತುರಾಜ್ ಗಾಯಕ್ವಾಡ್ ಈ 4 ಆಟಗಾರರನ್ನು ರಿಟೇನ್ ಮಾಡಿಕೊಂಡಿದ್ದು, ತಂಡದಿಂದ ಹೊರಬಿದ್ದಿರುವ ಪ್ರಮುಖ ಆಟಗಾರರನ್ನು ಮೆಗಾ ಹರಾಜಿನಲ್ಲಿ ಹೇಗಾದರೂ ಮಾಡಿ ಖರೀದಿಸಿ ತನ್ನ ಹಳೆಯ ತಂಡವನ್ನು ಬಹುತೇಕ ಮರಳಿ ಪಡೆಯುವ ಯತ್ನವನ್ನು ಮಾಡಲಿದೆ ಎನ್ನಲಾಗುತ್ತಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಪರ ಸದ್ಯ ಆರಂಭಿಕ ಆಟಗಾರನಾಗಿ ರುತುರಾಜ್ ಗಾಯಕ್ವಾಡ್ ಮಾತ್ರ ಇದ್ದು, ಈ ಬಾರಿಯ ಮೆಗಾ ಹರಾಜಿನಲ್ಲಿ ಇನ್ನಷ್ಟು ಅಗತ್ಯ ಆರಂಭಿಕ ಆಟಗಾರರನ್ನು ಖರೀದಿಸಬೇಕಾಗಿದ್ದು ಈ ಕೆಳಕಂಡ 5 ಆರಂಭಿಕ ಆಟಗಾರರ ಮೇಲೆ ಕಣ್ಣಿಟ್ಟಿದೆ.

1. ಫಾಫ್ ಡು ಪ್ಲೆಸಿಸ್

1. ಫಾಫ್ ಡು ಪ್ಲೆಸಿಸ್

ಮೊದಲೇ ಹೇಳಿದಂತೆ ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಹಳೆಯ ಆಟಗಾರರನ್ನು ಮರಳಿ ತಂಡಕ್ಕೆ ಸೆಳೆದುಕೊಳ್ಳುವ ಪ್ರಯತ್ನವನ್ನು ಮಾಡಲಿದೆ. ಆಡುವ ಬಳಗದಲ್ಲಿ ಹೆಚ್ಚು ಬದಲಾವಣೆ ಮಾಡಿಕೊಳ್ಳದೇ ನಿರ್ದಿಷ್ಟ ಆಟಗಾರರನ್ನು ಬಳಸುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ತಮ್ಮ ತಂಡಕ್ಕೆ ಹಲವು ಆವೃತ್ತಿಗಳಲ್ಲಿ ಆಪದ್ಬಾಂಧವನಾಗಿ ಹಲವಾರು ಗೆಲುವನ್ನು ತಂದು ಕೊಟ್ಟಿರುವ ಆರಂಭಿಕ ಆಟಗಾರನಾದ ಫಾಫ್ ಡು ಪ್ಲೆಸಿಸ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಖರೀದಿಸಿ ಮತ್ತೆ ತನ್ನ ತೆಕ್ಕೆಗೆ ಹಾಕಿಕೊಳ್ಳಲು ಯತ್ನಿಸಲಿದೆ. ಅದರಲ್ಲಿಯೂ ಫಾಫ್ ಡು ಪ್ಲೆಸಿಸ್ ಕಳೆದ ಬಾರಿಯ ಆವೃತ್ತಿಯಲ್ಲಿ 633 ರನ್ ಕಲೆ ಹಾಕುವುದರ ಮೂಲಕ ತಂಡದ ಮತ್ತೋರ್ವ ಆಟಗಾರ ರುತುರಾಜ್ ಗಾಯಕ್ವಾಡ್ ನಂತರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು.

2. ಡೇವಿಡ್ ವಾರ್ನರ್

2. ಡೇವಿಡ್ ವಾರ್ನರ್

ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯಿಂದ ಹೊರಬಿದ್ದಿರುವ ಡೇವಿಡ್ ವಾರ್ನರ್ ಮೇಲೆ ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಹಲವು ಫ್ರಾಂಚೈಸಿಗಳು ಬಿಡ್ ಮಾಡುವುದು ಖಚಿತ. ಚುಟುಕು ಪಂದ್ಯಗಳಿಗೆ ಬೇಕಾದ ವೇಗದ ಇನಿಂಗ್ಸ್ ಕಟ್ಟಬಲ್ಲ ಸಾಮರ್ಥ್ಯವಿರುವ ಡೇವಿಡ್ ವಾರ್ನರ್ ಅವರನ್ನು ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಟಾರ್ಗೆಟ್ ಮಾಡುವ ಸಾಧ್ಯತೆಗಳು ಹೆಚ್ಚಿವೆ.

3. ಶಿಖರ್ ಧವನ್

3. ಶಿಖರ್ ಧವನ್

ಎಂಎಸ್ ಧೋನಿ ನಾಯಕತ್ವದಲ್ಲಿ ಆಡಿರುವಂಥ ಅನುಭವವಿರುವ ಶಿಖರ್ ಧವನ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಟಾರ್ಗೆಟ್ ಮಾಡಬಹುದು. ಧೋನಿ ನೇತೃತ್ವದಲ್ಲಿ ಆಡಿರುವ ಅಭ್ಯಾಸವಿರುವ ಕಾರಣ ತಂಡಕ್ಕೆ ಶಿಖರ್ ಧವನ್ ಹೊಂದಿಕೊಳ್ಳುತ್ತಾರೆ ಎಂಬ ಕಾರಣ ಒಂದಾದರೆ, ಮತ್ತೊಂದು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಶಿಖರ್ ಧವನ್ ಆರಂಭಿಕನಾಗಿ ಸ್ಪೋಟಕ ಇನ್ನಿಂಗ್ಸ್ ಕಟ್ಟಿರುವುದು. ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಲ್ಲಿ ಆರಂಭಿಕ ಆಟಗಾರನಾಗಿ ಅಬ್ಬರಿಸಿರುವ ಶಿಖರ್ ಧವನ್ ಕಳೆದ ಬಾರಿಯ ಆವೃತ್ತಿಯಲ್ಲಿ 587 ರನ್ ಚಚ್ಚುವುದರ ಮೂಲಕ ಉತ್ತಮ ಫಾರ್ಮ್ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

4. ಇಶಾನ್ ಕಿಶನ್

4. ಇಶಾನ್ ಕಿಶನ್

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಿಂದ ಹೊರಬಿದ್ದಿರುವ ಇಶಾನ್ ಕಿಶಾನ್ ಮೇಲೆ ಈ ಬಾರಿಯ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಣ್ಣಿಡಲಿದೆ. ತಂಡದಲ್ಲಿ ಈಗಾಗಲೇ ಇರುವ ಯುವ ಆಟಗಾರನಾದ ಋತುರಾಜ್ ಗಾಯಕ್ವಾಡ್ ಜತೆ ಮತ್ತೋರ್ವ ಯುವ ಆಟಗಾರ ಇಶಾನ್ ಕಿಶನ್ ಕೈಜೋಡಿಸಿದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂದ್ಯಗಳಲ್ಲಿ ಉತ್ತಮ ಆರಂಭ ಪಡೆದುಕೊಳ್ಳಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಇನ್ನು ಅಂತರರಾಷ್ಟ್ರೀಯ ಪಂದ್ಯಗಳಿಗೆ ಪದಾರ್ಪಣೆ ಮಾಡಿರುವ ಇಶಾನ್ ಕಿಶನ್ ಮೇಲೆ ವಿವಿಧ ಫ್ರಾಂಚೈಸಿಗಳು ಈ ಬಾರಿಯ ಮೆಗಾ ಹರಾಜಿನಲ್ಲಿ ಹಣದ ಹೊಳೆ ಹರಿಸುವುದು ಖಚಿತ.

Surya Kumar Yadaw , ಇತಿಹಾಸದಲ್ಲೇ ಯಾರೂ ಮಾಡದ ಸಾಧನೆ ಮಾಡಿದ್ದಾರೆ | Oneindia Kannada
5. ಏಡನ್ ಮಾರ್ಕ್ರಮ್

5. ಏಡನ್ ಮಾರ್ಕ್ರಮ್

ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ ಫಾಫ್ ಡು ಪ್ಲೆಸಿಸ್ ಅವರನ್ನು ಬೇರೆ ಫ್ರಾಂಚೈಸಿ ಖರೀದಿಸಿದರೆ ಅಥವಾ ಚೆನ್ನೈ ಸೂಪರ್ ಕಿಂಗ್ಸ್ ಭವಿಷ್ಯಕ್ಕಾಗಿ ಆರಂಭಿಕ ಆಟಗಾರರನ್ನು ಹುಡುಕುತ್ತಿದ್ದರೆ ದಕ್ಷಿಣ ಆಫ್ರಿಕಾದ ಮತ್ತೋರ್ವ ಸ್ಫೋಟಕ ಆಟಗಾರ ಏಡನ್ ಮರ್ಕ್ರಮ್ ಅವರನ್ನು ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಖರೀದಿಸಬಹುದಾಗಿದೆ. ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಕಣಕ್ಕಿಳಿದಿದ್ದ ಏಡನ್ ಮಾರ್ಕ್ರಮ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರೂ ಸಹ ತನ್ನ ಅಂತರರಾಷ್ಟ್ರೀಯ ಕ್ರಿಕೆಟ್ ಅಂಕಿ ಅಂಶಗಳಿಂದ ಈ ಬಾರಿಯ ಮೆಗಾ ಹರಾಜಿನಲ್ಲಿ ಸದ್ದು ಮಾಡುವುದಂತೂ ಖಚಿತ.

Story first published: Thursday, February 10, 2022, 10:00 [IST]
Other articles published on Feb 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X