Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಈ ಬಾರಿಯ ಐಪಿಎಲ್‌ನಲ್ಲಿ ಈ ತಂಡವೇ ಬಲಿಷ್ಠ ಎಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್!

IPL 2022: Chennai Super Kings is the strongest team after mega auction says England Cricket Board

ಕಳೆದ ವರ್ಷ ಲಕ್ನೋ ಹಾಗೂ ಗುಜರಾತ್ ಫ್ರಾಂಚೈಸಿಗಳನ್ನು ಬಿಸಿಸಿಐ ಘೋಷಣೆ ಮಾಡಿದಾಗಿನಿಂದ ಈ ಬಾರಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತು ಕ್ರಿಕೆಟ್ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹಾಗೂ ಕುತೂಹಲಗಳು ಹೆಚ್ಚಾಗಿವೆ. ನೂತನ ಫ್ರಾಂಚೈಸಿಗಳ ಘೋಷಣೆಯ ನಂತರ ನಡೆದ ರಿಟೆನ್ಷನ್ ಪ್ರಕ್ರಿಯೆ ಈ ಕುತೂಹಲದ ಮಟ್ಟವನ್ನು ಮತ್ತಷ್ಟು ಹೆಚ್ಚಿಸಿತ್ತು. ಈ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತನ್ನ ತಂಡದ ನಾಲ್ವರು ಆಟಗಾರರಾದ ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ರೀಟೈನ್ ಮಾಡಿಕೊಂಡು ಉಳಿದ ಆಟಗಾರರನ್ನು ಕೈಬಿಟ್ಟಿತ್ತು.

ಈ ಮೂಲಕ ಸುರೇಶ್ ರೈನಾ, ಡ್ವೇನ್ ಬ್ರಾವೊ, ಫಾಫ್ ಡು ಪ್ಲೆಸಿಸ್ ಅಂಬಾಟಿ ರಾಯುಡು, ರಾಬಿನ್ ಉತ್ತಪ್ಪ ಸೇರಿದಂತೆ ಹಲವಾರು ಪ್ರಮುಖ ಆಟಗಾರರನ್ನು ರಿಟೈನ್ ಮಾಡಿಕೊಳ್ಳಲಾಗದೇ ಚೆನ್ನೈ ಸೂಪರ್ ಕಿಂಗ್ಸ್ ಕೈಬಿಟ್ಟಿತ್ತು. ಅದರಲ್ಲಿಯೂ ತಂಡಕ್ಕೆ ದೊಡ್ಡ ಮಟ್ಟದ ಕೊಡುಗೆಯನ್ನು ನೀಡಿದ್ದ ಸುರೇಶ್ ರೈನಾ ಮತ್ತು ಫಾಫ್ ಡು ಪ್ಲೆಸಿಸ್ ಈ ಇಬ್ಬರು ಆಟಗಾರರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮೆಗಾ ಹರಾಜಿನಲ್ಲಿ ಹೇಗಾದರೂ ಮಾಡಿ ಖರೀದಿಸಲಿದೆ ಎಂಬ ವಿಶ್ವಾಸ ಹಲವಾರು ಕ್ರಿಕೆಟ್ ಅಭಿಮಾನಿಗಳಲ್ಲಿತ್ತು. ಆದರೆ ಈ ನಿರೀಕ್ಷೆಯನ್ನು ತಲುಪುವಲ್ಲಿ ವಿಫಲವಾದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮೆಗಾ ಹರಾಜಿನಲ್ಲಿ ಸುರೇಶ್ ರೈನಾರನ್ನು ಖರೀದಿಸಲಿಲ್ಲ ಹಾಗೂ ಫಾಫ್ ಡು ಪ್ಲೆಸಿಸ್ ಅವರನ್ನು ಮತ್ತೆ ತಂಡಕ್ಕೆ ಕರೆತರುವಲ್ಲಿಯೂ ವಿಫಲವಾಯಿತು.

ಆದರೆ ತನ್ನ ತಂಡದ ಆಟಗಾರರಾದ ಅಂಬಟಿ ರಾಯುಡು, ರಾಬಿನ್ ಉತ್ತಪ್ಪ ಮತ್ತು ಡ್ವೇನ್ ಬ್ರಾವೊ ಅವರನ್ನು ಮತ್ತೆ ತಂಡಕ್ಕೆ ಕರೆ ತರುವಲ್ಲಿ ಯಶಸ್ವಿಯಾದ ಚೆನ್ನೈ ಸೂಪರ್ ಕಿಂಗ್ಸ್ ಮೆಗಾ ಹರಾಜು ಮುಕ್ತಾಯವಾದ ನಂತರ ಒಟ್ಟು 25 ಆಟಗಾರರನ್ನು ಹೊಂದಿದೆ. ಹೀಗೆ ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯವಾದ ನಂತರ ಯಾವ ತಂಡ ಬಲಿಷ್ಠವಾಗಿದೆ ಎಂಬ ಚರ್ಚೆಗಳು ಆರಂಭವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ಕೆಳಕಂಡಂತೆ ಪ್ರತಿಕ್ರಿಯಿಸಿದೆ.

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಪ್ರಕಾರ ಈ ತಂಡ ಬಲಿಷ್ಠ

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಪ್ರಕಾರ ಈ ತಂಡ ಬಲಿಷ್ಠ

ಟ್ವಿಟರ್‌ನಲ್ಲಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತನ್ನ ಅನುಯಾಯಿಗಳಿಗೆ ಪ್ರಶ್ನೆ ಕೇಳುವ ಅವಕಾಶವನ್ನು ನೀಡಿತ್ತು. ಅನುಯಾಯಿಗಳು ಕೇಳುವ ಪ್ರಶ್ನೆಗಳಿಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಉತ್ತರವನ್ನು ಸಹ ನೀಡಿದೆ. ಹೀಗೆ ನಡೆದ ಪ್ರಶ್ನೋತ್ತರದಲ್ಲಿ ಅಭಿಮಾನಿಯೋರ್ವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಿಮ್ಮ ಪ್ರಕಾರ ಬಲಿಷ್ಠ ತಂಡ ಯಾವುದು ಎಂಬ ಪ್ರಶ್ನೆಯನ್ನು ಕೇಳಿದ್ದ. ಈ ಪ್ರಶ್ನೆಗೆ ಉತ್ತರಿಸಿರುವ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಚೆನ್ನೈ ಸೂಪರ್ ಕಿಂಗ್ಸ್ ಎಂದು ಟ್ವೀಟ್ ಮಾಡಿದೆ. ಈ ಮೂಲಕ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್‌ನ ನೆಚ್ಚಿನ ತಂಡವಾಗಿದೆ.

ಮೆಗಾ ಹರಾಜಿನ ನಂತರ ಚೆನ್ನೈ ಸೂಪರ್ ಕಿಂಗ್ಸ್ ಹೇಗಿದೆ?

ಮೆಗಾ ಹರಾಜಿನ ನಂತರ ಚೆನ್ನೈ ಸೂಪರ್ ಕಿಂಗ್ಸ್ ಹೇಗಿದೆ?

ಮೆಗಾ ಹರಾಜು ಮುಕ್ತಾಯವಾದ ನಂತರ ಚೆನ್ನೈ ಸೂಪರ್‌ ಕಿಂಗ್ಸ್ ಸಂಪೂರ್ಣ ತಂಡ ಹೀಗಿದೆ: ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ, ರುತುರಾಜ್ ಗಾಯಕ್ವಾಡ್, ಡ್ವೇನ್ ಬ್ರಾವೋ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ, ದೀಪಕ್ ಚಹಾರ್, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಕೆಎಂ ಆಸಿಫ್, ಶಿವಂ ದುಬೆ, ಮಹೇಶ್ ತೀಕ್ಷಣ, ರಾಜವರ್ಧನ್ ಹಂಗರ್ಗೇಕರ್, ಸಮರ್ಜಿತ್ ಸಿಂಗ್, ದ್ವಾನೆ ಸಿಂಗ್ ಮಿಚೆಲ್ ಸ್ಯಾಂಟ್ನರ್, ಸುಭ್ರಾಂಶು ಸೇನಾಪತಿ, ಆಡಮ್ ಮಿಲ್ನೆ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಸಿ ಹರಿ ನಿಶಾಂತ್, ಎನ್ ಜಗದೀಸನ್, ಕ್ರಿಸ್ ಜೋರ್ಡಾನ್, ಕೆ ಭಗತ್ ವರ್ಮಾ.

RCB ತಂಡದ ನಾಯಕ ಯಾರಾಗ್ತಾರೆ ? | Oneindia Kannada
ರೈನಾ ಬಿಟ್ಟ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಕ್ರೋಶ

ರೈನಾ ಬಿಟ್ಟ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಕ್ರೋಶ

ಒಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಲಿಷ್ಠವಾಗಿದೆ ಎಂದು ಪ್ರಶಂಸೆಗಳು ವ್ಯಕ್ತವಾಗುತ್ತಿದ್ದರೆ ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಪರ ಹಲವಾರು ವರ್ಷಗಳ ಕಾಲ ಉತ್ತಮ ಆಟವನ್ನಾಡಿದ ಸುರೇಶ್ ರೈನಾರನ್ನು ಖರೀದಿಸದ ಫ್ರಾಂಚೈಸಿ ವಿರುದ್ಧ ಅಭಿಮಾನಿಗಳೇ ತಿರುಗಿಬಿದ್ದಿದ್ದಾರೆ. ಮಿಸ್ಟರ್ ಐಪಿಎಲ್ ಎಂದೇ ಖ್ಯಾತಿಯನ್ನು ಪಡೆದಿರುವ ಸುರೇಶ್ ರೈನಾರನ್ನು ಯಾವುದೇ ಫ್ರಾಂಚೈಸಿ ಖರೀದಿಸದೇ ಇರುವುದರ ಕುರಿತು ಕ್ರಿಕೆಟ್ ಅಭಿಮಾನಿಗಳು ಸೇರಿದಂತೆ ಹಲವಾರು ಮಾಜಿ ಕ್ರಿಕೆಟಿಗರು ಬೇಸರ ವ್ಯಕ್ತಪಡಿಸಿದ್ದಾರೆ.

Story first published: Tuesday, February 15, 2022, 9:36 [IST]
Other articles published on Feb 15, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+