Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs GT: ಪಂದ್ಯದ ಟಾಸ್ ವರದಿ ಮತ್ತು ಆಡುವ 11ರ ಬಳಗ

IPL 2022: Chennai Super Kings vs Gujarat Titans Match Toss Report And Playing XI

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 62ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಮೊದಲು ಬೌಲಿಂಗ್ ಮಾಡಲಿದೆ.

ಇತ್ತಂಡಗಳ ನಡುವಿನ ಈ ಪಂದ್ಯ ಇಂದು (ಮೇ 15) ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇನ್ನು ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲುಂಡ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿದ್ದು, ಈ ಪಂದ್ಯದ ಫಲಿತಾಂಶ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎನ್ನಬಹುದು.

IPL 2022: Chennai Super Kings vs Gujarat Titans Match Toss Report And Playing XI

ಇದೇ ವೇಳೆ ಗುಜರಾತ್ ಟೈಟನ್ಸ್ 18 ಅಂಕಗಳನ್ನು ಪಡೆದುಕೊಂಡು ಈಗಾಗಲೇ ಪ್ಲೇ ಆಫ್ ಸುತ್ತಿಗೆ ಅಧಿಕೃತವಾಗಿ ಲಗ್ಗೆ ಇಟ್ಟಿದೆ. ಈ ಪಂದ್ಯದಲ್ಲಿ ಗೆದ್ದರೆ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳಲಿದೆ.

ಹೀಗೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಈಗಾಗಲೇ ಪ್ಲೇ ಆಫ್ ಪ್ರವೇಶಿಸಿರುವ ತಂಡ ಹಾಗೂ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲವಾಗಿರುವ ತಂಡದ ನಡುವೆ ನಡೆಯಲಿರುವ ಈ ಪಂದ್ಯ ಕುತೂಹಲ ಹುಟ್ಟಿಸುವಲ್ಲಿ ವಿಫಲವಾಗಿದ್ದು, ಅನೌಪಚಾರಿಕ ಪಂದ್ಯವೆನಿಸಿದೆ. ಕ್ರಿಕೆಟ್‍ ಅಭಿಮಾನಿಗಳು ಮಾತ್ರ ಯಾವ ಆಟಗಾರ ಉತ್ತಮ ಪ್ರದರ್ಶನ ನೀಡಬಹುದು ಎಂಬುದನ್ನು ಊಹಿಸುವಲ್ಲಿ ನಿರತರಾಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಹನ್ನೊಂದರ ಬಳಗ:
ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮಿಚೆಲ್ ಸ್ಯಾಂಟ್ನೆರ್, ಮೊಯಿನ್ ಅಲಿ, ಎನ್. ಜಗದೀಶನ್, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್), ಶಿವಂ ದುಬೆ, ಪ್ರಶಾಂತ್ ಸೋಲಂಕಿ, ಮತೀಶ್ ಪತೀರಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ

ಕ್ರಿಕೆಟ್ ಜಗತ್ತಿಗೆ ಆಘಾತ:ಆಸ್ಟ್ರೇಲಿಯಾ ಕ್ರಿಕೆಟ್ ನ ದಂತಕಥೆ ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ | Oneindia Kannada

ಗುಜರಾತ್ ಟೈಟನ್ಸ್ ಆಡುವ ಹನ್ನೊಂದರ ಬಳಗ:
ವೃದ್ದಿಮಾನ್ ಸಾಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ

Story first published: Sunday, May 15, 2022, 17:16 [IST]
Other articles published on May 15, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+