
ಜಗತ್ತಿನ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಎಂದೇ ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನೈದನೇ ಆವೃತ್ತಿ ನಡೆಯುತ್ತಿದ್ದು, ಲೀಗ್ ಹಂತದ 29ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿವೆ.
ಇತ್ತಂಡಗಳ ನಡುವಿನ ಈ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ರಶೀದ್ ಖಾನ್ ಫೀಲ್ಡಿಂಗ್ ಆಯ್ದುಕೊಂಡಿದ್ದು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ. ಈ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹೊರಗುಳಿದಿರುವ ಕಾರಣ ರಶೀದ್ ಖಾನ್ ಗುಜರಾತ್ ಟೈಟನ್ಸ್ ತಂಡದ ನಾಯಕತ್ವದ ಹೊಣೆಯನ್ನು ಹೊತ್ತಿದ್ದಾರೆ.
ಆಡುವ ಬಳಗಗಳು
ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್ (ನಾಯಕ), ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ