CSK vs KKR Head to Head: ಚೊಚ್ಚಲ ಪಂದ್ಯದಲ್ಲಿ ಸೆಣಸಾಡಲಿರುವ ಸಿಎಸ್‌ಕೆ, ಕೆಕೆಆರ್ ತಂಡಗಳಲ್ಲಿ ಯಾರು ಬಲಿಷ್ಠರು?

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಲಿದ್ದು, ಟೂರ್ನಿಯ ಚೊಚ್ಚಲ ಪಂದ್ಯ ಮಾರ್ಚ್ 26ರ ಶನಿವಾರದಂದು ಸಂಜೆ 7.30ಕ್ಕೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಕಳೆದ ಬಾರಿಯ ಐಪಿಎಲ್ ಟೂರ್ನಿಯ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳೇ ಈ ಬಾರಿಯ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದು, ಕಳೆದ ಬಾರಿ ತಂಡವನ್ನು ಮುನ್ನಡೆಸಿದ್ದ ನಾಯಕರು ಈ ಬಾರಿ ತಂಡಗಳನ್ನು ಮುನ್ನಡೆಸದೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನೂತನ ನಾಯಕ ರವೀಂದ್ರ ಜಡೇಜಾ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ನೂತನ ನಾಯಕ ಶ್ರೇಯಸ್ ಐಯ್ಯರ್ ಮುನ್ನಡೆಸುತ್ತಿದ್ದಾರೆ.
ಹೌದು, ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಸ್ಥಾನದಿಂದ ಕೆಳಗಿಳಿದಿದ್ದು, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತಂಡವನ್ನು ರವೀಂದ್ರ ಜಡೇಜಾ ತಂಡವನ್ನು ಮುನ್ನಡೆಸಲಿರುವುದು ವಿಶೇಷವಾಗಿರಲಿದ್ದು, ರವೀಂದ್ರ ಜಡೇಜಾ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಯಾವ ರೀತಿಯ ಪ್ರದರ್ಶನ ನೀಡಬಹುದು ಎಂಬ ಕುತೂಹಲ ತಂಡದ ಅಭಿಮಾನಿಗಳಲ್ಲಿ ಹಾಗೂ ಐಪಿಎಲ್ ವೀಕ್ಷಕರಲ್ಲಿ ಹೆಚ್ಚಾಗಿದೆ. ಇನ್ನು ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಇತ್ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ಎಷ್ಟು ಮುಖಾಮುಖಿ ಪಂದ್ಯಗಳು ನಡೆದಿವೆ ಹಾಗೂ ಈ ಪಂದ್ಯಗಲ ಪೈಕಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಜಯ ಸಾಧಿಸಿದೆ ಎಂಬ ಚರ್ಚೆಗಳು ನಡೆಯುತ್ತಿದ್ದು, ಈ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.
ಇತ್ತಂಡಗಳ ನಡುವಿನ ಮುಖಾಮುಖಿ ಫಲಿತಾಂಶ
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಇದುವರೆಗೂ ಒಟ್ಟು ಇದುವರೆಗೂ ಒಟ್ಟು 26 ಮುಖಾಮುಖಿ ಪಂದ್ಯಗಳು ನಡೆದಿದ್ದು, ಈ ಪಂದ್ಯಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 17 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ 8 ಪಂದ್ಯಗಳಲ್ಲಿ ಜಯ ಸಾಧಿಸಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಮೂಲಕ ಇತ್ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದ್ದು, ಬಲಿಷ್ಟ ತಂಡ ಎನಿಸಿಕೊಂಡಿದೆ.
ಅಧಿಕ ರನ್ ಹಾಗೂ ಕನಿಷ್ಟ ರನ್
ಇನ್ನು ಇತ್ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಬಾರಿಸಿರುವ ಗರಿಷ್ಟ ರನ್ 220 ರನ್ ಆಗಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ಬಾರಿಸಿರುವ ಗರಿಷ್ಟ ರನ್ 202 ರನ್ ಆಗಿದೆ. ಇನ್ನು ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಬಾರಿಸಿರುವ ಕನಿಷ್ಟ ರನ್ 114 ರನ್ ಆಗಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ಬಾರಿಸಿರುವ ಕನಿಷ್ಟ ರನ್ 108 ರನ್ ಆಗಿದೆ.
ಸಂಭಾವ್ಯ ಆಡುವ ಬಳಗಗಳು
ಮಾರ್ಚ್ 26ರ ಶನಿವಾರದಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಇತ್ತಂಡಗಳ ನಡುವಿನ ಸಂಭಾವ್ಯ ಆಡುವ ಬಳಗ ಈ ಕೆಳಕಂಡಂತಿದೆ.
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ಶಿವಂ ದುಬೆ, ಡ್ವೇನ್ ಬ್ರಾವೋ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್ / ಮಹೇಶ್ ತೀಕ್ಷಣ, ಆಡಮ್ ಮಿಲ್ನೆ
ಕೋಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಆಂಡ್ರೆ ರಸೆಲ್, ಮೊಹಮ್ಮದ್ ನಬಿ / ಟಿಮ್ ಸೌಥಿ, ಸುನಿಲ್ ನರೈನ್, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications