ಐಪಿಎಲ್ 2022, ಸಿಎಸ್‌ಕೆ vs ಕೆಕೆಆರ್: ಟೂರ್ನಿಯ ಚೊಚ್ಚಲ ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ XI

ವಿಶ್ವದ ಶ್ರೀಮಂತ ಹಾಗೂ ಜನಪ್ರಿಯ ಫ್ರಾಂಚೈಸಿ ಕ್ರಿಕೆಟ್ ಟೂರ್ನಮೆಂಟ್ ಎಂದೇ ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮರಳಿ ಬಂದಿದ್ದು, ಐಪಿಎಲ್‌ನ ಹದಿನೈದನೇ ಆವೃತ್ತಿ ಇಂದಿನಿಂದ ( ಮಾರ್ಚ್ 26 ) ಆರಂಭವಾಗುತ್ತಿದೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು ಹತ್ತು ತಂಡಗಳು ಸೆಣಸಾಟ ನಡೆಸುತ್ತಿದ್ದು, ಟೂರ್ನಿಯ ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಈ ಲೀಗ್ ಹಂತದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಳೆದ ಬಾರಿಯ ಐಪಿಎಲ್ ಟೂರ್ನಿಯ ರನ್ನರ್ ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸುತ್ತಿದ್ದು, ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಪ್ರಸಿದ್ಢ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ.
ಇನ್ನು ಈ ಪಂದ್ಯ ಎರಡೂ ತಂಡಗಳಿಗೂ ವಿಶೇಷವಾಗಿದ್ದು, ಎರಡೂ ತಂಡಗಳೂ ನೂತನ ನಾಯಕರ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿವೆ. ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ನೂತನ ನಾಯಕ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಕಣಕ್ಕಿಳಿದಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ನೂತನ ನಾಯಕ ಶ್ರೇಯಸ್ ಐಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ಆಯ್ದುಕೊಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಆಂಡ್ರೆ ರಸೆಲ್, ಸುನಿಲ್ ನರೈನ್, ಶೆಲ್ಡನ್ ಜಾಕ್ಸನ್, ಉಮೇಶ್ ಯಾದವ್, ಶಿವಂ ಮಾವಿ, ವರುಣ್ ಚಕ್ರವರ್ತಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications