CSK vs MI: ಇತ್ತಂಡಗಳ ನಡುವಿನ 32 ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದು ಬೀಗಿರುವ ಬಲಿಷ್ಠ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಯಾರೂ ಕೂಡ ಊಹಿಸಿರದ ರೀತಿ ಕಳಪೆ ಪ್ರದರ್ಶನವನ್ನು ನೀಡುತ್ತಿವೆ. ಹೌದು, ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಹೆಚ್ಚು ಬಾರಿ ಟ್ರೋಫಿಗಳನ್ನು ಮುಡಿಗೇರಿಸಿಕೊಂಡಿರುವ ತಂಡಗಳು ಎಂಬ ಖ್ಯಾತಿಯನ್ನು ಹೊಂದಿರುವಂತಹ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸಾಲು ಸಾಲು ಸೋಲುಗಳನ್ನು ಕಂಡು ಈ ಬಾರಿಯ ಟೂರ್ನಿಯಲ್ಲಿ ಮಕಾಡೆ ಮಲಗಿವೆ.
ಈ ಬಾರಿಯ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಡಿ ಸೋಲುವುದರ ಮೂಲಕ ಕಳಪೆ ಆರಂಭವನ್ನು ಪಡೆದುಕೊಂಡ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 6 ಪಂದ್ಯಗಳನ್ನಾಡಿ 1 ಪಂದ್ಯದಲ್ಲಿ ಮಾತ್ರ ಗೆದ್ದು, ಉಳಿದ 5 ಪಂದ್ಯಗಳಲ್ಲಿ ಸೋಲುವುದರ ಮೂಲಕ ಕೇವಲ 2 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಇನ್ನು ಈ ಬಾರಿಯ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ ಯಾವುದೇ ಪಂದ್ಯದಲ್ಲಿಯೂ ಗೆಲುವು ಸಾಧಿಸದೇ ಎಲ್ಲಾ ಪಂದ್ಯಗಳಲ್ಲಿಯೂ ಹೀನಾಯವಾಗಿ ಸೋತು ಗೆಲುವಿನ ಖಾತೆ ತೆರೆಯಲಾಗದೆ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ಹೀಗೆ ಈ ಬಾರಿ ಸಾಲು ಸಾಲು ಪಂದ್ಯಗಳಲ್ಲಿ ಸೋತು ಮುಗ್ಗರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಟೂರ್ನಿಯ 33ನೇ ಪಂದ್ಯದಲ್ಲಿ ಇಂದು ( ಏಪ್ರಿಲ್ 21 ) ಪರಸ್ಪರ ಸೆಣಸಾಟ ನಡೆಸುತ್ತಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿ ತನ್ನ ಎರಡನೇ ಜಯ ಕಾಣುತ್ತಾ ಅಥವಾ ಮುಂಬೈ ಇಂಡಿಯನ್ಸ್ ಗೆದ್ದು ಗೆಲುವಿನ ಖಾತೆ ತೆರೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಐಪಿಎಲ್ ಇತಿಹಾಸದ ಈ ಬಲಿಷ್ಠ ತಂಡಗಳ ನಡುವೆ ನಡೆದಿರುವ ಮುಖಾಮುಖಿಯಲ್ಲಿ ಯಾವ ತಂಡ ಎಷ್ಟು ಪಂದ್ಯದಲ್ಲಿ ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಒಟ್ಟಾರೆ ಐಪಿಎಲ್ ಮುಖಾಮುಖಿ
ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 32 ಪಂದ್ಯಗಳು ನಡೆದಿವೆ. ಈ ಪಂದ್ಯಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಮುಂಬೈ ಇಂಡಿಯನ್ಸ್ 19 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಈ ಮೂಲಕ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸ್ಪಷ್ಟ ಮೇಲುಗೈ ಸಾಧಿಸಿ ಬಲಿಷ್ಠ ಎನಿಸಿಕೊಂಡಿದೆ.

ಕೊನೆಯ 5 ಪಂದ್ಯಗಳ ಮುಖಾಮುಖಿ
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಐಪಿಎಲ್ ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ 3 ಪಂದ್ಯಗಳಲ್ಲಿ ಗೆದ್ದಿದ್ದು, ಚೆನ್ನೈ ಸೂಪರ್ ಕಿಂಗ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಕೂಡ ಮುಂಬೈ ಇಂಡಿಯನ್ಸ್ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳ ನಡುವೆ ನಡೆದ 2 ಪಂದ್ಯಗಳ ಪೈಕಿ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 4 ವಿಕೆಟ್‍ಗಳ ಜಯ ಸಾಧಿಸಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 20 ರನ್‌ಗಳ ಗೆಲುವನ್ನು ಕಂಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications