CSK vs PBKS: ಇತ್ತಂಡಗಳ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 38ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ನಾಳೆ ( ಏಪ್ರಿಲ್ 25 ) ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಈ ಪಂದ್ಯದಲ್ಲಿ ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡನೇ ಬಾರಿ ಮುಖಾಮುಖಿಯಾಗುತ್ತಿದ್ದು, ಏಪ್ರಿಲ್ 3ರಂದು ನಡೆದಿದ್ದ ಹನ್ನೊಂದನೇ ಪಂದ್ಯದಲ್ಲಿ ಮೊದಲ ಬಾರಿಗೆ ಸೆಣಸಾಡಿದ್ದವು. ಹಾಗೂ ಆ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ 54 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತ್ತು.
ಹೌದು, ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 181 ರನ್‌ಗಳ ಪೈಪೋಟಿಯುತ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತಲು ಯತ್ನಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ 18 ಓವರ್‌ಗಳಲ್ಲಿ 126 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಹೀನಾಯ ಸೋಲನ್ನು ಅನುಭವಿಸಿತ್ತು. ಇನ್ನು ಈ ಪಂದ್ಯ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿತ್ತು ಹಾಗೂ ಮತ್ತೊಮ್ಮೆ ಇದೀಗ ಅದೇ ಕ್ರೀಡಾಂಗಣದಲ್ಲಿ ಇತ್ತಂಡಗಳು ಕಣಕ್ಕಿಳಿಯುತ್ತಿದ್ದು, ಚೆನ್ನೈಸೂಪರ್ ಕಿಂಗ್ಸ್ ಗೆಲುವು ಸಾಧಿಸಿ ಕಳೆದ ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಳ್ಳುತ್ತಾ ಅಥವಾ ಮತ್ತೊಮ್ಮೆ ಸೋಲುಂಡು ಪ್ಲೇಆಫ್ ಪ್ರವೇಶದ ಹಾದಿಯನ್ನು ಮತ್ತಷ್ಟು ಕಠಿಣ ಮಾಡಿಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಎಂಬುದರ ಮಾಹಿತಿ ಈ ಕೆಳಕಂಡಂತಿದೆ.
ಒಟ್ಟಾರೆ ಐಪಿಎಲ್ ಮುಖಾಮುಖಿ
ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲನೇ ಹಣಾಹಣಿಯೂ ಸೇರಿದಂತೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಇದುವರೆಗೂ ಒಟ್ಟು 27 ಪಂದ್ಯಗಳು ನಡೆದಿದ್ದು, ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಪಂಜಾಬ್ ಕಿಂಗ್ಸ್ 12 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಐಪಿಎಲ್ ಇತಿಹಾಸದ ಇತ್ತಂಡಗಳ ನಡುವಿನ ಸೆಣಸಾಟದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.
ಕಳೆದ 5 ಐಪಿಎಲ್ ಪಂದ್ಯಗಳ ಮುಖಾಮುಖಿ:
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆದಿರುವ ಕಳೆದ 5 ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದ್ದರೆ, 2 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಐಪಿಎಲ್ ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದೆ.
ಕಳೆದ ಆವೃತ್ತಿಯ ಮುಖಾಮುಖಿ
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಇತ್ತಂಡಗಳ ನಡುವೆ ನಡೆದ ಪ್ರಥಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 6 ವಿಕೆಟ್‌ಗಳ ಜಯ ಸಾಧಿಸಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 6 ವಿಕೆಟ್‌ಗಳ ಜಯ ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications