CSK vs RR: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

ಕಳೆದ ಮಾರ್ಚ್ ಅಂತ್ಯದಲ್ಲಿ ಆರಂಭವಾಗಿದ್ದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, 68ನೇ ಪಂದ್ಯದಲ್ಲಿ ನಾಳೆ ( ಮೇ 20 ) ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಎರಡೂ ತಂಡಗಳಿಗೂ ಸಹ ಲೀಗ್ ಹಂತದ ಅಂತಿಮ ಪಂದ್ಯವಾಗಿದ್ದು ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಇಲ್ಲಿಯವರೆಗೂ ತಾನಾಡಿರುವ 13 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಮಾತ್ರ ಗೆದ್ದಿದ್ದು 8 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದು ಈಗಾಗಲೇ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡು ಎಲಿಮಿನೇಟ್ ಆಗಿದೆ. ಇತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ 13 ಪಂದ್ಯಗಳನ್ನಾಡಿದ್ದು 8 ಪಂದ್ಯಗಳಲ್ಲಿ ಗೆದ್ದು 16 ಅಂಕಗಳನ್ನು ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆದ್ದರೆ 18 ಅಂಕಗಳನ್ನು ಪಡೆದುಕೊಳ್ಳಲಿದ್ದು, ಅಷ್ಟೇ ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್‌ಗಿಂತ ತಂಡವನ್ನು ನೆಟ್ ರನ್ ರೇಟ್‌ನಲ್ಲಿ ಹಿಂದಿಕ್ಕಲಿದ್ದು, ಪ್ಲೇಆಫ್ ಸುತ್ತಿಗೆ ಅಧಿಕೃತ ಪ್ರವೇಶ ಪಡೆದುಕೊಳ್ಳುವುದರ ಜೊತೆಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿಕೆ ಕಾಣಲಿದೆ.
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಿಂತ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಈ ಪಂದ್ಯ ಹೆಚ್ಚು ಮುಖ್ಯದ್ದಾಗಿದ್ದು, ಗೆಲ್ಲುವತ್ತ ಕಣ್ಣಿಟ್ಟಿದೆ. ಒಂದುವೇಳೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದರೆ ಲಕ್ನೋ ಸೂಪರ್ ಜೈಂಟ್ಸ್ ಎರಡನೇ ಸ್ಥಾನದಲ್ಲಿಯೇ ಉಳಿದುಕೊಳ್ಳಲಿದ್ದು, ಪ್ಲೇಆಫ್ ಹಂತದಲ್ಲಿ ಫೈನಲ್ ಪ್ರವೇಶಿಸಲು ಎರಡು ಅವಕಾಶಗಳನ್ನು ಹೊಂದಲಿದೆ. ಹೀಗೆ ಕುತೂಹಲ ಮೂಡಿಸಿರುವ ಈ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಐಪಿಎಲ್ ಇತಿಹಾಸದಲ್ಲಿ ನಡೆದಿರುವ ಐಪಿಎಲ್ ಮುಖಾಮುಖಿಯಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಒಟ್ಟಾರೆ ಐಪಿಎಲ್ ಮಖಾಮುಖಿ
ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 25 ಪಂದ್ಯಗಳು ನಡೆದಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 10 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಡೆದಿರುವ ಒಟ್ಟಾರೆ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಕೊನೆಯದಾಗಿ ನಡೆದಿರುವ 5 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ 3 ಪಂದ್ಯಗಳಲ್ಲಿ ಗೆದ್ದಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮುನ್ನಡೆ ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ
ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಲೀಗ್ ಹಂತದ ಎರಡು ಪಂದ್ಯಗಳಲ್ಲಿ ಎದುರಿಸಿತ್ತು. ಈ ಪೈಕಿ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದಿತ್ತು ಹಾಗೂ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಜಯ ಸಾಧಿಸಿತ್ತು. ಈ ಮೂಲಕ ಕಳೆದ ಆವೃತ್ತಿಯಲ್ಲಿ ನಡೆದ ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ಎರಡೂ ತಂಡಗಳೂ ಸಹ ಸಮಬಲ ಸಾಧಿಸಿದ್ದವು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications