Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs RR: ಎರಡನೇ ಸ್ಥಾನದ ಮೇಲೆ ರಾಜಸ್ಥಾನ್ ಕಣ್ಣು; ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ

IPL 2022: Chennai Super Kings vs Rajasthan Royals toss report and playing 11

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಇಂದು ನಡೆಯುತ್ತಿರುವ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಪಂದ್ಯಗಳು ಮುಖಾಮುಖಿಯಾಗಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ದುಕೊಂಡಿದೆ.

ಆಡುವ ಪಂದ್ಯಗಳು:

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಅಂಬಟಿ ರಾಯುಡು, ಎನ್ ಜಗದೀಸನ್, ಎಂಎಸ್ ಧೋನಿ (ವಿಕೆಟ್ ಕೀಪರ್ / ನಾಯಕ), ಮಿಚೆಲ್ ಸ್ಯಾಂಟ್ನರ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಮಥೀಶ ಪತಿರಾನ, ಮುಖೇಶ್ ಚೌಧರಿ

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ( ವಿಕೆಟ್ ಕೀಪರ್ / ನಾಯಕ), ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್

ಇನ್ನು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆದ್ದರೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿಕೆ ಕಾಣಲಿದ್ದು, ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲಿದೆ. ಅಷ್ಟೇ ಅಲ್ಲದೇ ಎರಡನೇ ಸ್ಥಾನಕ್ಕೆ ಏರಿಕೆ ಕಾಣಲಿರುವ ರಾಜಸ್ಥಾನ್ ರಾಯಲ್ಸ್ ಕ್ವಾಲಿಫಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಳ್ಳಲಿದ್ದು, ಫೈನಲ್ ಸುತ್ತಿಗೆ ಪ್ರವೇಶಿಸಲು ಎರಡು ಅವಕಾಶಗಳನ್ನು ಪಡೆದುಕೊಳ್ಳಲಿದೆ.

Story first published: Friday, May 20, 2022, 19:12 [IST]
Other articles published on May 20, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+