ಐಪಿಎಲ್: ಧೋನಿ ನಾಯಕತ್ವ ತ್ಯಜಿಸುವ ತೀರ್ಮಾನ ತೆಗೆದುಕೊಂಡದ್ದು ಇವರೇ; ಸತ್ಯ ಬಿಚ್ಚಿಟ್ಟ ಸಿಎಸ್‌ಕೆ ಸಿಇಒ!

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ಟೂರ್ನಿಯ ಪ್ರಥಮ ಪಂದ್ಯ ಇದೇ ವಾರಾಂತ್ಯದ ಶನಿವಾರದಂದು ( ಮಾರ್ಚ್ 26 ) ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಲಿದೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡು ನೂತನ ತಂಡಗಳ ಸೇರ್ಪಡೆಯಾಗುವುದರ ಜೊತೆಗೆ ಮಯಾಂಕ್ ಅಗರ್ವಾಲ್ ಹಾಗೂ ಹಾರ್ದಿಕ್ ಪಾಂಡ್ಯ ಆಟಗಾರರಿಂದ ನಾಯಕನ ಸ್ಥಾನಕ್ಕೆ ಬಡ್ತಿಯನ್ನು ಪಡೆದಿದ್ದರು. ಇದರ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಫಾಫ್ ಡು ಪ್ಲೆಸಿಸ್ ಅವರನ್ನು ನೂತನ ನಾಯಕನನ್ನಾಗಿ ನೇಮಿಸಿತ್ತು. ಈ ಸಾಲಿಗೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕೂಡ ಸೇರ್ಪಡೆಗೊಂಡಿದ್ದು, ಎಂಎಸ್ ಧೋನಿ ನಾಯತ ಸ್ಥಾನದಿಂದ ಕೆಳಗಿಳಿದಿದ್ದು ರವೀಂದ್ರ ಜಡೇಜಾ ನೂತನ ನಾಯಕನಾಗಿ ಆಯ್ಕೆಯಾಗಿದ್ದಾರೆ. ಹೌದು, ಯಾರೂ ಊಹಿಸಿರದ ಘೋಷಣೆಯೊಂದನ್ನು ಇಂದು ( ಮಾರ್ಚ್ 24 ) ಹೊರಡಿಸಿದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಎಂಎಸ್ ಧೋನಿ ನಾಯಕತ್ವವನ್ನು ತ್ಯಜಿಸಿದ್ದು, ತಂಡದ ಪ್ರಮುಖ ಆಲ್‌ರೌಂಡರ್ ಆಟಗಾರ ರವೀಂದ್ರ ಜಡೇಜಾಗೆ ನಾಯಕತ್ವವನ್ನು ಹಸ್ತಾಂತರಿಸಿದ್ದಾರೆ.
ಹೀಗೆ ಎಂಎಸ್ ಧೋನಿ ನಾಯಕತ್ವವನ್ನು ತ್ಯಜಿಸಿದ ಸುದ್ದಿ ಕೇಳಿದ ಧೋನಿ ಅಭಿಮಾನಿಗಳು ಹಾಗೂ ಕ್ರಿಕೆಟ್ ಪ್ರೇಕ್ಷಕರು ಚೆನ್ನೈ ಸೂಪರ್ ಕಿಂಗ್ಸ್ ಈ ದಿಢೀರ್ ನಿರ್ಧಾರವನ್ನು ಯಾಕೆ ತೆಗೆದುಕೊಂಡಿತು ಎಂಬ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಹಾಗೂ ಇನ್ನೂ ಕೆಲ ಅಭಿಮಾನಿಗಳು ಧೋನಿ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರವನ್ನು ತೆಗೆದುಕೊಂಡಿದ್ದು ಯಾರು ಎಂಬ ಗೊಂದಲದಲ್ಲಿಯೂ ಇದ್ದಾರೆ. ಈ ಗೊಂದಲ ಹಾಗೂ ಪ್ರಶ್ನೆಗೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್‌ನ ಸಿಇಒ ಕಾಶಿ ವಿಶ್ವನಾಥನ್ ಉತ್ತರವನ್ನು ನೀಡಿದ್ದು, ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

ಇದು ಅವರದ್ದೇ ನಿರ್ಧಾರ
ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ತ್ಯಜಿಸುವ ತೀರ್ಮಾನವನ್ನು ಸ್ವತಃ ಅವರೇ ತೆಗೆದುಕೊಂಡರು ಎಂದು ಹೇಳಿಕೆ ನೀಡಿರುವ ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಯಾರೂ ಸಹ ಅವರನ್ನು ನಾಯಕತ್ವದಿಂದ ತೆಗೆದು ಹಾಕಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದ್ದಾರೆ. "ಇದು ಎಂಎಸ್ ಧೋನಿ ಅವರ ನಿರ್ಧಾರವಾಗಿತ್ತು. ಅವರು ಆಡಳಿತ ಮಂಡಳಿಯೊಂದಿಗೆ ಮಾತನಾಡಿ ಅರ್ಧ ಗಂಟೆಯ ಹಿಂದೆಯೇ ನಿರ್ಧಾರ ತೆಗೆದುಕೊಂಡರು" ಎಂದು ಕಾಶಿ ವಿಶ್ವನಾಥನ್ ಹೇಳಿಕೆ ನೀಡಿದ್ದಾರೆ.

ಧೋನಿ ನಿರ್ಧಾರವನ್ನು ನಾವು ಗೌರವಿಸುತ್ತೇವೆ
ಇನ್ನೂ ಮುಂದುವರೆದ ಮಾತನಾಡಿದ ಕಾಶಿ ವಿಶ್ವನಾಥನ್ ಎಂಎಸ್ ಧೋನಿ ನಿರ್ದಾರವನ್ನು ನಾವು ಯಾವಾಗಲೂ ಗೌರವಿಸುತ್ತೇವೆ ಎಂದು ಹೇಳಿದ್ದಾರೆ. " ಎಂಎಸ್ ನಿರ್ಧಾರವನ್ನು ನಾವು ಯಾವಾಗಲೂ ಗೌರವಿಸುತ್ತೇವೆ. ಅವರು ಫ್ರಾಂಚೈಸಿಗೆ ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ ಮತ್ತು ತಂಡದ ಪ್ರಮುಖ ಸದಸ್ಯರಾಗಿದ್ದಾರೆ" ಎಂದು ಕಾಶಿ ವಿಶ್ವನಾಥನ್ ಹೇಳಿಕೆ ನೀಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ
ರವೀಂದ್ರ ಜಡೇಜಾ ( ನಾಯಕ ), ಎಂಎಸ್ ಧೋನಿ, ಮೊಯಿನ್ ಅಲಿ, ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಡ್ವೇನ್ ಬ್ರಾವೋ, ಅಂಬಟಿ ರಾಯುಡು, ದೀಪಕ್ ಚಹಾರ್, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಶಿವಂ ದುಬೆ, ಮಹೇಶ್ ತೀಕ್ಷಣ, ರಾಜವರ್ಧನ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ದೇವೋನ್ ಪಿ ಕಾನ್ವೇ , ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಸುಭ್ರಾಂಶು ಸೇನಾಪತಿ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಸಿ ಹರಿ ನಿಶಾಂತ್, ಎನ್ ಜಗದೀಸನ್, ಕ್ರಿಸ್ ಜೋರ್ಡಾನ್, ಕೆ ಭಗತ್ ವರ್ಮಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications