ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022 ರಿಟೆನ್ಷನ್: ಸಿಎಸ್‌ಕೆಯಿಂದ ರೈನಾ ಔಟ್; ಈ 4 ಆಟಗಾರರು ಮಾತ್ರ ಸೇಫ್

IPL 2022: CSK Likely to Retain MS Dhoni, Ruturaj Gaikwad, Ravindra Jadeja And Faf du Plessis ahead of Mega Auction

ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಳ್ಳುವುದರ ಮೂಲಕ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಈ ವರ್ಷ ನಡೆದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಟ್ರೋಫಿ ಎತ್ತಿ ಹಿಡಿದು ಚಾಂಪಿಯನ್ಸ್ ಆಗಿ ಹೊರಹೊಮ್ಮುವ ಮೂಲಕ ದೊಡ್ಡ ಮಟ್ಟದಲ್ಲಿ ಯಶಸ್ಸಿನ ಹಾದಿಗೆ ಮರಳಿತು. ಅಂತಿಮವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ನಾಲ್ಕನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ಆಗಿ ಹೊರಹೊಮ್ಮಿದ ಚೆನ್ನೈ ಸೂಪರ್ ಕಿಂಗ್ಸ್ ಕಳೆದ ಬಾರಿಯ ಐಪಿಎಲ್ ಟೂರ್ನಿಯ ಸೋಲಿನ ನಂತರ ಕೊಟ್ಟ ಮಾತನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಭಾರತ vs ಪಾಕ್ ಸರಣಿ ಆಯೋಜನೆಗೆ ಈ ದೇಶದಿಂದ ಸಿಕ್ತು ಗ್ರೀನ್ ಸಿಗ್ನಲ್, ಶೀಘ್ರದಲ್ಲೇ ಮಾತುಕತೆಭಾರತ vs ಪಾಕ್ ಸರಣಿ ಆಯೋಜನೆಗೆ ಈ ದೇಶದಿಂದ ಸಿಕ್ತು ಗ್ರೀನ್ ಸಿಗ್ನಲ್, ಶೀಘ್ರದಲ್ಲೇ ಮಾತುಕತೆ

ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ಸಿನ ಹಾದಿಗೆ ಮರಳುವಲ್ಲಿ ಮೈದಾನಕ್ಕಿಳಿದು ಶ್ರಮವಹಿಸಿದ ಆಟಗಾರರು ಮುಂದಿನ ಬಾರಿಯ ಐಪಿಎಲ್ ಆವೃತ್ತಿಗೂ ಮುಂಚೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತೊರೆಯಲಿದ್ದಾರೆ. ಹೌದು, ಮುಂದಿನ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 10 ತಂಡಗಳು ಕಣಕ್ಕಿಳಿಯಲಿದ್ದು, ಇದಕ್ಕೂ ಮುಂಚೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಅಸ್ತಿತ್ವದಲ್ಲಿರುವ ತಂಡಗಳು 4 ಆಟಗಾರರನ್ನು ಉಳಿಸಿಕೊಂಡು ಉಳಿದ ತಂಡದ ಎಲ್ಲ ಆಟಗಾರರನ್ನು ಹರಾಜಿಗೆ ಕಳುಹಿಸಬೇಕಾಗಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡು ಯಾವ ಆಟಗಾರರನ್ನು ತಂಡದಿಂದ ಮೆಗಾ ಹರಾಜಿಗೆ ಬಿಡಲಿವೆ ಎಂಬ ಲೆಕ್ಕಾಚಾರಗಳು ಆರಂಭವಾಗಿವೆ.

ಧನಶ್ರೀ ನಿರ್ದೇಶನದಲ್ಲಿ ಎಬಿಡಿ, ಕೊಹ್ಲಿ ನಟನೆ; ಹೊರಬಿತ್ತು ಎಬಿಡಿ ಆರ್‌ಸಿಬಿಯಲ್ಲೇ ಉಳಿದುಕೊಳ್ಳುವ ಸುಳಿವು!ಧನಶ್ರೀ ನಿರ್ದೇಶನದಲ್ಲಿ ಎಬಿಡಿ, ಕೊಹ್ಲಿ ನಟನೆ; ಹೊರಬಿತ್ತು ಎಬಿಡಿ ಆರ್‌ಸಿಬಿಯಲ್ಲೇ ಉಳಿದುಕೊಳ್ಳುವ ಸುಳಿವು!

ಮುಂಬರುವ ಐಪಿಎಲ್ ಟೂರ್ನಿ ಆರಂಭವಾಗುವ ಮುನ್ನ ನಡೆಯಲಿರುವ ಆಟಗಾರರ ಹರಾಜು ಪ್ರಕ್ರಿಯೆ ಕ್ರಿಕೆಟ್ ಪ್ರೇಕ್ಷಕರಲ್ಲಿ ಕುತೂಹಲವನ್ನು ಹುಟ್ಟು ಹಾಕಿದ್ದರೆ, ಫ್ರಾಂಚೈಸಿ ಮಾಲೀಕರಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಯಾವ ಆಟಗಾರರನ್ನು ತಂಡದಿಂದ ಹೊರ ಹಾಕಬೇಕು ಎನ್ನುವ ತಲೆನೋವು ಶುರುವಾಗಿದೆ. ಅದರಲ್ಲಿಯೂ ಹಲವಾರು ವರ್ಷಗಳಿಂದ ಆಟಗಾರರನ್ನು ಹೆಚ್ಚು ಬದಲಾಯಿಸದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳಿಗೆ ಇದು ತುಸು ಹೆಚ್ಚಿನ ತಲೆನೋವಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.

ಟೆಸ್ಟ್‌ನಿಂದ ವಿಶ್ರಾಂತಿಗೆಂದು ಹೊರಗುಳಿದ ರೋಹಿತ್ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗಟೆಸ್ಟ್‌ನಿಂದ ವಿಶ್ರಾಂತಿಗೆಂದು ಹೊರಗುಳಿದ ರೋಹಿತ್ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ

ಸದ್ಯ ಮುಂದಿನ ಐಪಿಎಲ್ ಆವೃತ್ತಿಯ ಕುರಿತಾಗಿ ಸುದ್ದಿಯೊಂದು ಹೊರಬಿದ್ದಿದ್ದು ಟೂರ್ನಿಯ ಉದ್ಘಾಟನಾ ಪಂದ್ಯ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ ಎನ್ನಲಾಗುತ್ತಿದೆ. ಇತ್ತ ಯಾವ ಆಟಗಾರರನ್ನು ಉಳಿಸಿಕೊಳ್ಳಲಿದ್ದೇವೆ ಎಂಬುದನ್ನು ತಿಳಿಸಲು ಇನ್ನು 6 ದಿನಗಳು ಮಾತ್ರ ಬಾಕಿ ಉಳಿದಿದ್ದು ಚೆನ್ನೈ ಸೂಪರ್ ಕಿಂಗ್ಸ್ ಈ ಕೆಳಕಂಡ 4 ಆಟಗಾರರನ್ನು ಉಳಿಸಿಕೊಳ್ಳಲಿದೆ ಎನ್ನಲಾಗುತ್ತಿದೆ.

ಚೆನ್ನೈ ಉಳಿಸಿಕೊಳ್ಳಬಹುದಾದ 4 ಆಟಗಾರರು

ಚೆನ್ನೈ ಉಳಿಸಿಕೊಳ್ಳಬಹುದಾದ 4 ಆಟಗಾರರು

ಮುಂದಿನ ವಾರದೊಳಗೆ ಯಾವ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಲಿದ್ದೇವೆ ಎಂಬ ಮಾಹಿತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಎಲ್ಲಾ ತಂಡಗಳು ಸಲ್ಲಿಸಬೇಕಾಗಿದ್ದು, ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉಳಿಸಿಕೊಳ್ಳಬಹುದಾದ 4 ಆಟಗಾರರ ಹೆಸರುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮೂಲಗಳ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಂಎಸ್ ಧೋನಿ, ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ ಮತ್ತು ಫಾಫ್ ಡು ಪ್ಲೆಸಿಸ್ ಈ 4 ಆಟಗಾರರನ್ನು ತಂಡದಲ್ಲಿಯೇ ಉಳಿಸಿಕೊಳ್ಳಲಿದೆ ಎನ್ನಲಾಗುತ್ತಿದೆ.

ತಂಡದಿಂದ ಮಿಸ್ಟರ್ ಐಪಿಎಲ್ ಹೊರಕ್ಕೆ

ತಂಡದಿಂದ ಮಿಸ್ಟರ್ ಐಪಿಎಲ್ ಹೊರಕ್ಕೆ

ಚೆನ್ನೈ ಸೂಪರ್ ಕಿಂಗ್ಸ್ ಈ ಮೇಲ್ಕಂಡ 4 ಆಟಗಾರರನ್ನು ಉಳಿಸಿಕೊಳ್ಳಲಿದೆ ಎನ್ನಲಾಗುತ್ತಿದ್ದು, ಐಪಿಎಲ್ ಆರಂಭವಾದಾಗಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿದು ಶ್ರಮಿಸಿರುವ ಸುರೇಶ್ ರೈನಾರನ್ನು ಈ ಬಾರಿಯ ಮೆಗಾ ಹರಾಜಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಮೂಲಕ ಸುರೇಶ್ ರೈನಾ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬೇರೆ ತಂಡವೊಂದರ ಪರ ಕಣಕ್ಕಿಳಿಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

KL Rahul ಹಾಗು Pandya ಇಬ್ಬರು ಮುಂದಿನ IPLಗೆ ಹೊಸ ತಂಡ ಸೇರಲಿದ್ದಾರೆ | Oneindia Kannada
ಸುರೇಶ್ ರೈನಾ ಐಪಿಎಲ್ ಸಾಧನೆ

ಸುರೇಶ್ ರೈನಾ ಐಪಿಎಲ್ ಸಾಧನೆ

ಇದುವರೆಗೂ ಒಟ್ಟು 205 ಐಪಿಎಲ್ ಪಂದ್ಯಗಳನ್ನಾಡಿರುವ ಸುರೇಶ್ ರೈನಾ 5528 ರನ್ ಕಲೆಹಾಕಿದ್ದು, 1 ಶತಕ ಮತ್ತು 39 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಬಾರಿಸಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ನಂತರ ಸುರೇಶ್ ರೈನಾ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

Story first published: Wednesday, November 24, 2021, 16:59 [IST]
Other articles published on Nov 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X