ಆರ್‌ಸಿಬಿಯ ಈ ಆಟಗಾರನ ರೀತಿ ಸಿಎಸ್‌ಕೆ ಆಡಿದ್ದರೆ ಕೆಕೆಆರ್ ವಿರುದ್ಧ ಗೆಲ್ಲುತ್ತಿದ್ದರು ಎಂದ ಮ್ಯಾಥ್ಯೂ ಹೇಡನ್!

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಚಾಲನೆಯನ್ನು ಪಡೆದುಕೊಂಡಿದೆ. ಇತ್ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್‌ಗೆ ಕೋಲ್ಕತ್ತಾ ನೈಟ್ ರೈಡರ್ಸ್ ಸೋಲುಣಿಸಿದ್ದು, ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 131 ರನ್ ಕಲೆಹಾಕಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 132 ರನ್‌ಗಳ ಗುರಿಯನ್ನು ನೀಡಿತ್ತು. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಸಾಮಾನ್ಯ ಗುರಿಯನ್ನು ಬೆನ್ನತ್ತಿದ ಕೋಲ್ಕತ್ತಾ ನೈಟ್ ರೈಡರ್ಸ್ 6 ವಿಕೆಟ್‌ಗಳ ಗೆಲುವನ್ನು ಸಾಧಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಆರಂಭಿಕ ಆಟಗಾರರಾಗಿ ರುತುರಾಜ್ ಗಾಯಕ್ವಾಡ್ ಮತ್ತು ಡಿವೋನ್ ಕಾನ್ವೆ ಕಣಕ್ಕಿಳಿದು ಮುಗ್ಗರಿಸಿದರು. ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರೆಂಜ್ ಕ್ಯಾಪ್ ವಿಜೇತರಾಗಿ ಹೊರಹೊಮ್ಮಿದ್ದ ರುತುರಾಜ್ ಗಾಯಕ್ವಾಡ್ ಈ ಪಂದ್ಯದ ಮೊದಲನೇ ಓವರ್‌ನಲ್ಲಿಯೇ ಶೂನ್ಯಕ್ಕೆ ಔಟ್ ಆದರು. ಹಾಗೂ ಮತ್ತೋರ್ವ ಆರಂಭಿಕ ಆಟಗಾರ ಡಿವೋನ್ ಕಾನ್ವೆ ಕೂಡ 3 ರನ್ ಗಳಿಸಿ ಔಟ್ ಆದರು. ಹೀಗೆ ಪವರ್‌ಪ್ಲೇ ಸಮಯದಲ್ಲಿಯೇ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಆರಂಭಿಕ ಆಟಗಾರರ ವಿಕೆಟ್ ಕಳೆದುಕೊಂಡು ಆರಂಭದಲ್ಲಿಯೇ ಆಘಾತವನ್ನು ಅನುಭವಿಸಿ ಹಿನ್ನಡೆಯನ್ನು ಅನುಭವಿಸುವಂತಾಯಿತು. ಹಾಗೂ ನಂತರ ಕಣಕ್ಕಿಳಿದ ರಾಬಿನ್ ಉತ್ತಪ್ಪ ಮತ್ತು ಅಂಬಾಟಿ ರಾಯುಡು ಉತ್ತಮ ಇನ್ನಿಂಗ್ಸ್ ಕಟ್ಟುವ ಯತ್ನ ಮಾಡಿದರಾದರೂ ದೊಡ್ಡ ರನ್ ಗಳಿಸುವಲ್ಲಿ ಯಶಸ್ವಿಯಾಗಲಿಲ್ಲ. ನಂತರ ಬಂದ ಶಿವಮ್ ದುಬೆ 3 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರೆ ಎಂಎಸ್ ಧೋನಿ ಹಾಗೂ ರವೀಂದ್ರ ಜಡೇಜಾರ ಅಜೇಯ 70 ರನ್ ಜತೆಯಾಟ ತಂಡವನ್ನು ತುಸು ಮೇಲೆತ್ತಿತು. ಹೀಗೆ ಬ್ಯಾಟಿಂಗ್ ವಿಭಾಗ ನೀಡಿದ ಕಳಪೆ ಪ್ರದರ್ಶನ ತಂಡಕ್ಕೆ ಮೊದಲ ಪಂದ್ಯದಲ್ಲಿಯೇ ಸೋಲನ್ನು ನೀಡಿದ್ದು, ರವೀಂದ್ರ ಜಡೇಜಾ ತಮ್ಮ ನಾಯಕತ್ವದ ಮೊದಲ ಪಂದ್ಯದಲ್ಲಿಯೇ ಹಿನ್ನಡೆ ಅನುಭವಿಸಿದ್ದಾರೆ. ಇನ್ನು ರವೀಂದ್ರ ಜಡೇಜಾ ನಾಯಕತ್ವದ ಕುರಿತು ಹಲವಾರು ಮಾಜಿ ಕ್ರಿಕೆಟಿಗರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಕೂಡ ಈ ಕೆಳಕಂಡಂತೆ ಜಡೇಜಾ ನಾಯಕತ್ವದ ಬಗ್ಗೆ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.

ರವೀಂದ್ರ ಜಡೇಜಾ ನಾಯಕತ್ವದ ಸಿಎಸ್‌ಕೆ ಒತ್ತಡಕ್ಕೊಳಗಾಗಿತ್ತು
ಹೊಸ ನಾಯಕನನ್ನು ಪಡೆದು ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಒತ್ತಡಕ್ಕೊಳಗಾಗಿತ್ತು ಎಂದು ಮ್ಯಾಥ್ಯೂ ಹೇಡನ್ ಹೇಳಿಕೆ ನೀಡಿದ್ದಾರೆ. ಈ ಸಿಎಸ್‌ಕೆ ತಂಡವನ್ನು ನೋಡಿದರೆ ನನಗೆ ಒತ್ತಡ ಹೆಚ್ಚಾಗುತ್ತಿದೆ ಎಂದಿರುವ ಮ್ಯಾಥ್ಯೂ ಹೇಡನ್ ತಂಡದಲ್ಲಿ ಹಿರಿಯ ಆಟಗಾರರಿದ್ದರೂ ಸಹ ತಂಡ ಇನ್ನೂ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ, ಅದರಲ್ಲಿಯೂ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನೀಡಿದ ಪ್ರದರ್ಶನ ನೋಡಿದ ನಂತರ ಬದಲಾವಣೆಯ ಅಗತ್ಯತೆ ಹೆಚ್ಚಿದೆ ಎಂದು ಮ್ಯಾಥ್ಯೂ ಹೇಡನ್ ಸಲಹೆ ನೀಡಿದ್ದಾರೆ.

ಫಾಫ್ ಡು ಪ್ಲೆಸಿಸ್ ಉದಾಹರಣೆ ನೀಡಿದ ಹೇಡನ್
ಇನ್ನೂ ಮುಂದುವರೆದು ಮಾತನಾಡಿರುವ ಮ್ಯಾಥ್ಯೂ ಹೇಡನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಜೋಡಿ ಸುಧಾರಿಸಬೇಕು ಎಂದಿದ್ದಾರೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ಅವರನ್ನು ಉದಾಹರಣೆಯನ್ನಾಗಿ ತೆಗೆದುಕೊಂಡಿರುವ ಹೇಡನ್ ಕಳೆದ ಬಾರಿ ಸಿಎಸ್‌ಕೆ ಪರ ರುತುರಾಜ್ ಗಾಯಕ್ವಾಡ್ ಹಾಗೂ ಫಾಫ್ ಡು ಪ್ಲೆಸಿಸ್ ಜೋಡಿ ನೀಡುತ್ತಿದ್ದ ಆರಂಭದ ರೀತಿ ಈ ಬಾರಿಯೂ ಸಹ ಆರಂಭವನ್ನು ನೀಡಬೇಕಿದೆ ಎಂದಿದ್ದಾರೆ. ಈ ಮೂಲಕ ಫಾಫ್ ಡು ಪ್ಲೆಸಿಸ್ ರೀತಿಯ ಆರಂಭಿಕ ಆಟಗಾರನ ಅಗತ್ಯತೆ ತಂಡಕ್ಕಿದೆ ಎಂದು ಮ್ಯಾಥ್ಯೂ ಹೇಡನ್ ಹೇಳಿದ್ದಾರೆ.

ರಾಬಿನ್ ಉತ್ತಪ್ಪ ಆಡಬೇಕು
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಬದಲಾವಣೆಗಳಾಗಬೇಕು ಎಂದಿರುವ ಹೇಡನ್ ರಾಬಿನ್ ಉತ್ತಪ್ಪ ಆಗಾಗ ಕಣಕ್ಕಿಳಿಯದೇ ಎಲ್ಲಾ ಪಂದ್ಯಗಳಲ್ಲಿಯೂ ಕಣಕ್ಕಿಳಿಯಬೇಕು ಎಂದು ಹೇಡನ್ ಹೇಳಿಕೆ ನೀಡಿದ್ದಾರೆ. ರಾಬಿನ್ ಉತ್ತಪ್ಪ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಗತ್ಯವಿದ್ದ ಸಮಯದಲ್ಲಿ ರನ್ ಕಲೆಹಾಕಬಲ್ಲ ಆಟಗಾರನಾಗಿದ್ದಾರೆ ಎಂದಿರುವ ಹೇಡನ್ ಸಾಕಷ್ಟು ಬದಲಾವಣೆಯ ಅಗತ್ಯವಿರುವ ಸಿಎಸ್‌ಕೆಗೆ ಇದು ಸವಾಲಿನ ಸಮಯ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications