ಐಪಿಎಲ್: ಸತತ ಸೋತು ವಿಫಲವಾಗಿರುವ ಚೆನ್ನೈ ತಂಡದಿಂದ ಈ ಇಬ್ಬರನ್ನು ಹೊರ ಹಾಕದಿದ್ದರೆ ಮತ್ತೆ ಸೋಲು ಖಚಿತ!

2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರ ಬೀಳುವುದರ ಮೂಲಕ ಮುಖಭಂಗಕ್ಕೆ ಒಳಗಾಗಿದ್ದ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿ ಟೀಕಾಕಾರರಿಗೆ ಉತ್ತರವನ್ನು ನೀಡಿತ್ತು.
ಹೀಗೆ ಹಾಲಿ ಚಾಂಪಿಯನ್ಸ್ ಎನಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತಾನಾಡಿದ ಮೊದಲೆರಡೂ ಪಂದ್ಯಗಳಲ್ಲಿ ಸೋಲುವುದರ ಮೂಲಕ ಸತತವಾಗಿ ಮುಗ್ಗರಿಸಿದೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೂ ಮುನ್ನ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ತ್ಯಜಿಸಿ ತಂಡದ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾಗೆ ನಾಯಕತ್ವವನ್ನು ಹಸ್ತಾಂತರಿಸಿದ್ದರು.
ಹೀಗೆ ನೂತನ ನಾಯಕ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಸೆಣಸಾಟ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲನೇ ಸೋಲನ್ನು ಅನುಭವಿಸಿತು. ನಂತರ ನೂತನ ತಂಡವಾದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಎರಡನೇ ಪಂದ್ಯದಲ್ಲಿ ಸೆಣಸಾಟ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ 210 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದರೂ ಸಹ ಸೋಲನ್ನು ಅನುಭವಿಸಿತು. ಹೀಗೆ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಸೋತು ಗೆಲುವಿನ ಖಾತೆ ತೆರೆಯಬೇಕೆಂಬ ಯೋಜನೆಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಇಂದು ( ಏಪ್ರಿಲ್ 3 ) ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ವಿರುದ್ಧ ತನ್ನ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದು, ಈ ಪಂದ್ಯದಲ್ಲಿ ಗೆಲ್ಲಬೇಕೆಂದರೆ ತಂಡದಲ್ಲಿ ಈ ಕೆಳಕಂಡ ಪ್ರಮುಖ 3 ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ.

1. ಮುಖೇಶ್ ಚೌಧರಿ ಬದಲು ರಾಜವರ್ಧನ್
ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ 5 ವಿಕೆಟ್ ಪಡೆದು ಹಾಗೂ 52 ರನ್ ಬಾರಿಸಿ ತಂಡ ಟ್ರೋಫಿ ಗೆಲ್ಲುವಲ್ಲಿ ಪಾತ್ರ ನಿರ್ವಹಿಸಿರುವ ರಾಜವರ್ಧನ್ ಹಂಗರ್ಗೆಕರ್ ಅವರನ್ನು ಮುಖೇಶ್ ಚೌಧರಿ ಬದಲಾಗಿ ಕಣಕ್ಕಿಳಿಸಬೇಕಾಗಿದೆ. ಕಳೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ಮುಕೇಶ್ ಚೌಧರಿ 4 ಓವರ್ ಬೌಲಿಂಗ್ ಮಾಡಿ 39 ರನ್ ನೀಡಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು. ಹೀಗಾಗಿ ಮುಕೇಶ್ ಚೌಧರಿ ಬದಲು ರಾಜವರ್ಧನ್ ಕಣಕ್ಕಿಳಿಸಿದರೆ ತಂಡಕ್ಕೆ ಉಪಯೋಗವಾಗಲಿದೆ.

2. ತುಷಾರ್ ದೇಶಪಾಂಡೆ ಬದಲು ಮಹೀಶ್ ತೀಕ್ಷಣ
ದೇಸಿ ಕ್ರಿಕೆಟ್‍ನಲ್ಲಿ ಮುಂಬೈ ಪರ ಉತ್ತಮ ಪ್ರದರ್ಶನ ನೀಡಿರುವ ತುಷಾರ್ ದೇಶಪಾಂಡೆ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದು ಯಶಸ್ಸು ಕಾಣುವಲ್ಲಿ ವಿಫಲರಾಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 3 ಓವರ್ ಬೌಲಿಂಗ್ ಮಾಡಿ ಯಾವುದೇ ವಿಕೆಟ್ ಪಡೆಯದ ತುಷಾರ್ ದೇಶಪಾಂಡೆ 23 ರನ್ ನೀಡಿದ್ದರು. ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್ ಪಡೆಯುವಲ್ಲಿ ಸಫಲರಾದ ತುಷಾರ್ ದೇಶಪಾಂಡೆ 40 ರನ್ ನೀಡಿ ದುಬಾರಿಯಾದರು. ಹೀಗಾಗಿ ತುಷಾರ್ ದೇಶಪಾಂಡೆ ಬದಲು ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿಸಿದ ಎರಡನೇ ಬೌಲರ್ ಎನಿಸಿಕೊಂಡಿರುವ ಮಹೀಶ್ ತೀಕ್ಷಣಗೆ ಅವಕಾಶ ನೀಡುವುದು ಉತ್ತಮ ಆಯ್ಕೆಯಾಗಿದೆ. ಇದು ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಲು ಮಾಡಬೇಕಾದ ಎರಡನೇ ಬದಲಾವಣೆಯಾಗಿದೆ.

3. ಎಂಎಸ್ ಧೋನಿ
ಈ ಬಾರಿ ನಾಯಕತ್ವವನ್ನು ತ್ಯಜಿಸಿ ಓರ್ವ ಆಟಗಾರನಾಗಿ ಕಣಕ್ಕಿಳಿದಿರುವ ಎಂ ಎಸ್ ಧೋನಿ ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿದು ಬ್ಯಾಟ್ ಬೀಸಬೇಕಿದೆ. ನಾಯಕತ್ವದ ಹೆಚ್ಚಿನ ಒತ್ತಡವಿಲ್ಲದೇ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 38 ಎಸೆತಗಳಿಗೆ 50 ರನ್ ಬಾರಿಸಿದ್ದ ಎಂಎಸ್ ಧೋನಿ ಲಕ್ನೋ ಸೂಪರ್ ಜಯಂಟ್ಸ್ ವಿರುದ್ಧ 6 ಎಸೆತಗಳಲ್ಲಿ ಅಜೇಯ 16 ರನ್ ಬಾರಿಸಿದ್ದರು. ಹೀಗೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಎಂಎಸ್ ಧೋನಿ ಅಂತಿಮ ಹಂತದಲ್ಲಿ ಕಣಕ್ಕಿಳಿಯುವ ಬದಲು ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿದರೆ ತಂಡಕ್ಕೆ ಮತ್ತಷ್ಟು ರನ್ ಹೊಳೆ ಹರಿದುಬರಲಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪ್ರಮುಖ ಬದಲಾವಣೆಯನ್ನು ಮಾಡಿಕೊಳ್ಳಲೇಬೇಕಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications