For Quick Alerts
ALLOW NOTIFICATIONS  
For Daily Alerts
 

CSK vs GT Playing 11: ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ಪ್ಲೇಯಿಂಗ್ XI

IPL 2022: CSK vs GT Preview, Playing 11, Weather Forecast and Pitch Report details

ಇಂಡಿಯನ್ ಪ್ರೀಮಿಯರ್ ಲೀಗ್‌ನ 15ನೇ ಆವೃತ್ತಿಯ 62ನೇ ಲೀಗ್ ಪಂದ್ಯ ಭಾನುವಾರ ನಡೆಯಲಿದ್ದು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ಎರಡೂ ತಂಡಗಳಿಗೂ ಹೆಚ್ಚಿನ ಮಹತ್ವವಿಲ್ಲದ ಪಂದ್ಯ ಎಂಬುದು ಗಮನಾರ್ಹ. ಆದರೆ ಗುಜರಾತ್ ಟೈಟನ್ಸ್ ಈ ಪಂದ್ಯವನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಭದ್ರಪಡಿಸುವ ಅವಕಾಶವಿದೆ. ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದು ಈ ಪಂದ್ಯದ ಫಲಿತಾಂಶ ಹೆಚ್ಚಿನ ಯಾವುದೇ ಬದಲಾವಣೆ ಮಾಡಲಾರದು.

ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನಿಡಿಕೊಮಡು ಬಂದಿದೆ. ಆಡಿರುವ 12 ಪಂದ್ಯಗಳ ಪೈಕಿ ಜಿಟಿ 9 ಗೆಲುವು ಸಂಪಾದಿಸಿದ್ದು ಟೂರ್ನಿಯಲ್ಲಿ 10 ಗೆಲುವು ಪಡೆದ ಮೊದಲ ತಂಡ ಎನಿಸಿಕೊಳ್ಳುವ ಉತ್ಸಾಹದಲ್ಲಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ 12 ಪಂದ್ಯಗಳಲ್ಲಿ 4 ಗೆಲುವು ಮಾತ್ರವೇ ಪಡೆದುಕೊಂಡಿದ್ದು 8 ಸೋಲು ಅನುಭವಿಸಿದೆ. 8 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಈ ಬಾರಿಯ ಐಪಿಎಲ್‌ನಲ್ಲಿ ಲೀಗ್ ಹಂತದಿಂದ ಹೊರಬಿದ್ದ ಎರಡನೇ ತಂಡವಾಗಿದೆ.

ಸ್ಕ್ವಾಡ್‌ಗಳು: ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಮೊಯಿನ್ ಅಲಿ, ಡ್ವೈನ್ ಪ್ರಿಟೋರಿಯಸ್

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

IPL 2022: CSK vs GT Preview, Playing 11, Weather Forecast and Pitch Report details

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಮೇ 15 ರಂದು ಭಾನುವಾರ ನಡೆಯಲಿದ್ದು ಮಧ್ಯಾಹ್ನ 3:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಸಿಎಸ್‌ಕೆ ಹಾಗೂ ಜಿಟಿ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ದೊಡ್ಡ ಮೊತ್ತವನ್ನು ಇಲ್ಲಿ ನಿರೀಕ್ಷಿಸಲಾಗುತ್ತಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು.

ಸಂಭಾವ್ಯ ಆಡುವ ಬಳಗ: ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ಎಂಎಸ್ ಧೋನಿ (ಸಿ & ವಿಕೆ), ಡ್ವೇನ್ ಬ್ರಾವೋ, ಸಿಮರ್ಜೀತ್ ಸಿಂಗ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆ), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ಸಿ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಮೊಹಮ್ಮದ್ ಶಮಿ

Story first published: Saturday, May 14, 2022, 19:28 [IST]
Other articles published on May 14, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+