For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಅರ್ಧಶತಕ ಸಿಡಿಸಿ ಚೆನ್ನೈಗೆ ಆಸರೆಯಾದ ಧೋನಿ; ಕೆಕೆಆರ್‌ಗೆ 132 ರನ್ ಗುರಿ

IPL 2022, CSK vs KKR: Dhonis half century carries CSK to 131 for 5

ವಿಶ್ವದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಟೂರ್ನಮೆಂಟ್ ಎಂದೇ ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮರಳಿ ಬಂದಿದ್ದು, ಐಪಿಎಲ್‌ನ ಹದಿನೈದನೇ ಆವೃತ್ತಿ ಇಂದಿನಿಂದ ( ಮಾರ್ಚ್ 26 ) ಆರಂಭವಾಗುತ್ತಿದೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು ಹತ್ತು ತಂಡಗಳು ಸೆಣಸಾಟ ನಡೆಸುತ್ತಿದ್ದು, ಟೂರ್ನಿಯ ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಈ ಲೀಗ್ ಹಂತದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಳೆದ ಬಾರಿಯ ಐಪಿಎಲ್ ಟೂರ್ನಿಯ ರನ್ನರ್ ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸುತ್ತಿದ್ದು, ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಪ್ರಸಿದ್ಢ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 131 ರನ್ ಕಲೆಹಾಕಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 132 ರನ್‌ಗಳ ಗುರಿಯನ್ನು ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಆರಂಭಿಕ ಆಟಗಾರರಾಗಿ ರುತುರಾಜ್ ಗಾಯಕ್ವಾಡ್ ಮತ್ತು ಡಿವೋನ್ ಕಾನ್ವೆ ಕಣಕ್ಕಿಳಿದರು. ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರೆಂಜ್ ಕ್ಯಾಪ್ ವಿಜೇತರಾಗಿ ಹೊರಹೊಮ್ಮಿದ್ದ ರುತುರಾಜ್ ಗಾಯಕ್ವಾಡ್ ಈ ಪಂದ್ಯದಲ್ಲಿ ಮುಗ್ಗರಿಸಿದ್ದು, ಪಂದ್ಯದ ಮೊದಲನೇ ಓವರ್‌ನಲ್ಲಿಯೇ ಶೂನ್ಯಕ್ಕೆ ಔಟ್ ಆದರು. ಹಾಗೂ ಮತ್ತೋರ್ವ ಆರಂಭಿಕ ಆಟಗಾರ ಡಿವೋನ್ ಕಾನ್ವೆ ಕೂಡ 3 ರನ್ ಗಳಿಸಿ ಉಮೇಶ್ ಯಾದವ್ ಎಸೆತದಲ್ಲಿ ಶ್ರೇಯಸ್ ಐಯ್ಯರ್‌ಗೆ ಕ್ಯಾಚ್ ನೀಡಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಬಿನ್ ಉತ್ತಪ್ಪ 21 ಎಸೆತಗಳಲ್ಲಿ 28 ರನ್ ಗಳಿಸಿ ಔಟ್ ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಂಬಟಿ ರಾಯುಡು 17 ಎಸೆತಗಳಿಗೆ 15 ರನ್ ನೀಡಿ ಔಟ್ ಆದರು ಹಾಗೂ ತಂಡದ ಆಲ್‌ರೌಂಡರ್ ಶಿವಮ್ ದುಬೆ 6 ಎಸೆತಗಳಲ್ಲಿ 3 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ಬೇಗನೇ ತನ್ನ ಮೊದಲ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ ತಂಡಕ್ಕೆ ಆಸರೆಯಾದದ್ದು ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಂಎಸ್ ಧೋನಿ. ಹೌದು, ಆರಂಭದಲ್ಲಿ ನಿಧಾನವಾಗಿ ಬ್ಯಾಟ್ ಬೀಸಿದ ಎಂಎಸ್ ಧೋನಿ ನೆಲಕಚ್ಚಿ ನಿಂತ ನಂತರ 7 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 38 ಎಸೆತಗಳಲ್ಲಿ ಅಜೇಯ 50 ರನ್ ಬಾರಿಸಿದರು. ಇನ್ನು ಧೋನಿಗೆ ಸಾಥ್ ನೀಡಿದ ನಾಯಕ ರವೀಂದ್ರ ಜಡೇಜಾ 28 ಎಸೆತಗಳಲ್ಲಿ ಅಜೇಯ 26 ರನ್‌ ಬಾರಿಸಿದರು.

ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಪರ ಉಮೇಶ್ ಯಾದವ್ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ ಹಾಗೂ ಆಂಡ್ರೆ ರಸೆಲ್ ತಲಾ ಒಂದೊಂದು ವಿಕೆಟ್ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಆಂಡ್ರೆ ರಸೆಲ್, ಸುನಿಲ್ ನರೈನ್, ಶೆಲ್ಡನ್ ಜಾಕ್ಸನ್, ಉಮೇಶ್ ಯಾದವ್, ಶಿವಂ ಮಾವಿ, ವರುಣ್ ಚಕ್ರವರ್ತಿ

Story first published: Saturday, March 26, 2022, 23:38 [IST]
Other articles published on Mar 26, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+