
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ತಾನು ಇನ್ನೂ ಗ್ರೇಟ್ ಫಿನಿಷರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲಿನತ್ತ ಬಹುತೇಕ ಮುಖಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಊಹಿಸಲಾರದ ರೀತಿಯಲ್ಲಿ ಧೋನಿ ಗೆಲ್ಲಿಸಿದ್ದಾರೆ. ಈ ಮೂಲಕ ತನ್ನ ಬ್ಯಾಟಿಂಗ್ ಸಾಮರ್ಥ್ಯವನ್ನು ಮಾಹಿ ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ 156 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮುಗ್ಗರಿಸುತ್ತಾ ಸಾಗಿತ್ತು. ಆದರೆ ಅಂಬಾಟಿ ರಾಯಿಡು ರಾಬಿನ್ ಉತ್ತಪ್ಪ ಹೋರಾಟ ಸಿಎಸ್‌ಕೆಯನ್ನು ಪಂದ್ಯದಲ್ಲಿ ಮುಂದುವರಿಯುವಂತೆ ಮಾಡಿತ್ತು. ಆದರೆ ಅಂತಿಮ ಹಂತದಲ್ಲಿ ಎಂಎಸ್ ಧೋನಿ ಹಾಗೂ ಡ್ವೇಯ್ನ್ ಪ್ರಿಟೋರಿಯಸ್ ಹೋರಾಟ ತಂಡಕ್ಕೆ ಗೆಲುವಿನ ಸಾಧ್ಯತೆಯನ್ನು ತೆರೆದಿಟ್ಟಿತ್ತು. ಅಂತಿಮ ಓವರ್‌ನಲ್ಲಿ ಎಂಎಸ್ ಧೋನಿ ಗೆಲುವಿಗೆ ಅಗತ್ಯವಿದ್ದ 17 ರನ್‌ಗಳನ್ನು ಕಲೆ ಹಾಕಿವ ಮೂಲಕ ಮುಂಬೈ ಇಂಡಿಯನ್ಸ್‌ಗೆ ಟೂರ್ನಿಯಲ್ಲಿ ಸತತ 7ನೇ ಬಾರಿಗೆ ಸೋಲಿನ ರುಚಿ ತೋರಿಸಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ನಲ್ಲಿ ಮೊದಲ ಏಳು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಸೋತ ಏಕೈಕ ತಂಡವಾಗಿದೆ.
ಮುಂಬೈ ಅಗ್ರ ಕ್ರಮಾಂಕದ ಹೀನಾಯ ಪ್ರದರ್ಶನ: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಮುಂಬೈ ಇಂಡಿಯನ್ಸ್ ತಂಡದ ಅಗ್ರ ಕ್ರಮಾಂಕ ಹೀನಾಯ ಪ್ರದರ್ಶನ ನೀಡಿತು. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಇಬ್ಬರೂ ಶೂನ್ಯ ಸುತ್ತಿ ಮೊದಲ ಓವರ್‌ನಲ್ಲಿಯೇ ಪೆವಿಲಿಯನ್ ಸೇರಿಕೊಂಡರು. ನಂತರ ಬಂದ ಡೆವಾಲ್ಡ್ ಬ್ರೆವಿಸ್ ಕೂಡ ನಾಲ್ಕು ರನ್‌ಗಳಿಗೆ ಔಟಾಗಿ ಹೊರನಡೆದರು. ಆದರೆ ಮುಂಬೈ ಇಮಡಿಯನ್ಸ್ ತಂಡದ ಮಧ್ಯಮ ಕ್ರಮಾಂಕ ಈ ಪಂದ್ಯದಲ್ಲಿ ತಂಡಕ್ಕೆ ಬಲ ತುಂಬುವಲ್ಲಿ ಯಶಸ್ವಿಯಾಯಿತು. ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಹೃತಿಕ್ ಶೊಕೀನ್ ಹಾಗೂ ಅಂತಿಮ ಹಂತದಲ್ಲಿ ಜೈದೇವ್ ಉನಾದ್ಕಟ್ ಅವರ ಮಹತ್ವದ ಕೊಡುಗೆಯ ಕಾರಣದಿಂದಾಗಿ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 155 ರನ್‌ಗಳಿಸುವಲ್ಲಿ ಯಶಸ್ವಿಯಾಯಿತು.
ಭಿನ್ನವಾಗಿರಲಿಲ್ಲ ಸಿಎಸ್‌ಕೆ ಸ್ಥಿತಿ: ಇನ್ನು 156 ರನ್‌ಗಳ ಸವಾಲಿನ ಗುರಿ ಸ್ವೀಕರಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭ ಕೂಡ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಭಿನ್ನವಾಗಿರಲಿಲ್ಲ. ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಹಾಗೂ ಮಿಚೆಲ್ ಸ್ಯಾಂಟ್ನರ್ ವಿಕೆಟ್‌ಅನ್ನು ಶೀಘ್ರವಾಗಿ ಕಳೆದುಕೊಂಡಿತು. ಆ್ದರೆ ನಂತರ ರಾಬಿನ್ ಉತ್ತಪ್ಪ ಹಾಗೂ ಅಂಬಾಟಿ ರಾಯುಡು ಅವರಿಂದು ಉತ್ತಮ ಪ್ರದರ್ಶನ ಬಂದಿತು. ಆದರೆ ನಂತರ ಬಂದ ನಾಯಕ ರವೀಂದ್ರ ಜಡೇಜಾ ಹಾಗೂ ಶಿವಂ ದುಬೆಯಿಂದ ಉತ್ತಮ ಮೊತ್ತ ಬರಲಿಲ್ಲ.
ಪಂದ್ಯ ಗೆಲ್ಲಿಸಿದ ಧೋನಿ: ಇನ್ನು ಅಂತಿಮ ಹಂತದಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಡ್ವೇಯ್ನ್ ಪ್ರಿಟೋರಿಯಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಪ್ರಿಟೋರಿಯಸ್ ಅಂತಿಮ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್ ಕಳೆದುಕೊಂಡರು. ಆದರೆ ಉಳಿದ ಐದು ಎಸೆತಗಳಲ್ಲಿ ಎಂಎಸ್ ಧೋನಿ ಅಬ್ಬರದ ಪ್ರದರ್ಶನ ನೀಡಿದ್ದು ತಂಡಕ್ಕೆ ಅಗತ್ಯವಿದ್ದ 17 ರನ್‌ಗಳನ್ನು ಗಳಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ತನ್ನ ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ
ಬೆಂಚ್: ಫ್ಯಾಬಿಯನ್ ಅಲೆನ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಸಂಜಯ್ ಯಾದವ್, ಟಿಮ್ ಡೇವಿಡ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಾಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ರಾಹುಲ್ ಬುದ್ಧಿ, ಅರ್ಷದ್ ಖಾನ್
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೈನ್ ಪ್ರಿಟೋರಿಯಸ್, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ
ಬೆಂಚ್: ಮೊಯಿನ್ ಅಲಿ, ಕ್ರಿಸ್ ಜೋರ್ಡಾನ್, ತುಷಾರ್ ದೇಶಪಾಂಡೆ, ಹರಿ ನಿಶಾಂತ್, ಎನ್ ಜಗದೀಸನ್, ಡೆವೊನ್ ಕಾನ್ವೇ, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಮಥೀಶ ಪಥಿರಣ