For Quick Alerts
ALLOW NOTIFICATIONS  
For Daily Alerts
 

CSK vs MI Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

IPL 2022: CSK vs MI Preview, Predicted Playing 11, Pitch Report, And Weather Forecast

ಐಪಿಎಲ್ ಅಂಗಳದಲ್ಲಿ ಗುರುವಾರ ಪ್ರಮುಖ ಪಂದ್ಯ ನಡೆಯಲಿದೆ. ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಬಾರಿಯ ಟೂರ್ನಿಯಲ್ಲಿ ಈ ಎರಡು ತಂಡಗಳು ಕೂಡ ಹೀನಾಯ ಪ್ರದರ್ಶನ ನೀಡುತ್ತಿದ್ದು ಅಂಕಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳಲ್ಲಿದೆ. ಹೀಗಾಗಿ ಈ ಎರಡು ತಮಡಗಳ ಮುಖಾಮುಖಿಯಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕಾದು ನೋಡಬೇಕಿದೆ.

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳು. ಕಳೆದ 14 ಆವೃತ್ತಿಯ ಐಪಿಎಲ್‌ನಲ್ಲಿ 9 ಬಾರಿ ಟ್ರೋಫಿಯನ್ನು ಈ ಎರಡು ತಂಡಗಳು ಹಂಚಿಕೊಂಡಿದೆ. ಅದರಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಎನಿಸಿಕೊಂಡಿದ್ದರೆ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಆದರೆ ಈ ಬಾರಿಯ ಟೂರ್ನಿಯಲ್ಲಿ ಈ ನೆರಡು ತಮಡಗಳಿಂದಲೂ ನಿರೀಕ್ಷಿತ ಪ್ರದರ್ಶನ ಬಾರದಿರುವುದು ನಿರಾಸೆ ಮೂಡಿಸಿದೆ. ಮುಂಬೈ ಇಂಡಿಯನ್ಸ್ ಆಡಿದ ಆರು ಪಂದ್ಯಗಳಲ್ಲಿ ಒಂದೂ ಗೆಲುವು ಸಾಧಿಸಲು ವಿಫಲವಾಗಿದದೆ. ಸಿಎಸ್‌ಕೆ ಕೂಡ ಇಷ್ಟೇ ಪಂದ್ಯಗಳನ್ನು ಆಡಿದ್ದು 1 ಗೆಲುವು ಕಂಡಿದೆ.

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಕೆಲ ಪ್ರಮುಖ ಮಾಹಿತಿಗಳು ಇಲ್ಲಿದೆ.

ಸ್ಕ್ವಾಡ್‌ಗಳು: ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ಸಿ), ಶಿವಂ ದುಬೆ, ಎಂಎಸ್ ಧೋನಿ (ಡಬ್ಲ್ಯೂ), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಮೊಯಿನ್ ಅಲಿ, ಡ್ವೈನ್ ಪ್ರಿಟೋರಿಯಸ್

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 21 ರಂದು ಗುರುವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಬ್ಯಾಟರ್‌ಗಳಿಗೆ ಉತ್ತಮ ಸಹಕಾರಿಯಾಗಿದೆ. ಹೀಗಾಗಿ ಮತ್ತೊಂದು ಹೈಸ್ಕೋರ್ ಪಂದ್ಯ ನಡೆದರೆ ಅಚ್ಚರಿಯಿಲ್ಲ. ಪಿಚ್ ಹಸಿರಿನಿಂದ ಕೂಡಿದ್ದ ಸ್ಪಿನ್ನರ್‌ಗಳಿಗೆ ನೆರವು ನೀಡುವ ಸಾಧ್ಯತೆ ಕಡಿಮೆಯಿದೆ. ಆದರೆ ವೇಗಿಗಳಿಗೆ ಈ ಪಿಚ್ ಲಾಭದಾಯಕವಾಗಿರಲಿದೆ.

IPL 2022: 5 ವರ್ಷಗಳ ಬಳಿಕ ಗೋಲ್ಡನ್ ಡಕೌಟ್ ಆದ ವಿರಾಟ್ ಕೊಹ್ಲಿ
ಸಂಭಾವ್ಯ ಆಡುವ ಬಳಗ: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಕೀರಾನ್ ಪೊಲಾರ್ಡ್, ಫ್ಯಾಬಿಯನ್ ಅಲೆನ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಶಿವಂ ದುಬೆ, ಅಂಬಾಟಿ ರಾಯುಡು, ಎಂಎಸ್ ಧೋನಿ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ನಾಯಕ), ಡ್ವೇನ್ ಬ್ರಾವೋ, ಡ್ವೈನ್ ಪ್ರಿಟೋರಿಯಸ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

Story first published: Wednesday, April 20, 2022, 19:24 [IST]
Other articles published on Apr 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+