CSK vs PBKS Head to Head: ಇತ್ತಂಡಗಳ ಮುಖಾಮುಖಿಯಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಟ ತಂಡ ಯಾವುದು?

ಕ್ರಿಕೆಟ್ ಜಗತ್ತಿನಲ್ಲಿ ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯದ್ದೇ ಹೆಚ್ಚಾಗಿ ಸದ್ದು ಕೇಳಿ ಬರುತ್ತಿದ್ದು, ಟೂರ್ನಿಯ ಮೊದಲ ವಾರ 10 ಪಂದ್ಯಗಳು ಯಾವುದೇ ಅಡಚಣೆ ಇಲ್ಲದೇ ಯಶಸ್ವಿಯಾಗಿ ಮುಗಿದಿವೆ. ಇನ್ನು ಟೂರ್ನಿಯ ಹನ್ನೊಂದನೇ ಪಂದ್ಯ ಏಪ್ರಿಲ್ 03ರ ಭಾನುವಾರದಂದು ನಡೆಯಲಿದ್ದು, ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7.30ಕ್ಕೆ ಶುರುವಾಗಲಿದೆ.
ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ ನೂತನ ನಾಯಕ ರವೀಂದ್ರ ಜಡೇಜಾ ನಾಯಕತ್ವದಡಿಯಲ್ಲಿ ಒಟ್ಟು 2 ಪಂದ್ಯಗಳನ್ನಾಡಿದ್ದು, ಈ ಎರಡೂ ಪಂದ್ಯಗಳಲ್ಲಿಯೂ ಸೋಲನ್ನು ಅನುಭವಿಸಿದೆ. ಈ ಬಾರಿಯ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿನ ತನ್ನ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನ್ನು ಅನುಭವಿಸಿತು. ಹೀಗೆ ಮೊದಲೆರಡು ಪಂದ್ಯದಲ್ಲಿ ನೆಲಕಚ್ಚಿರುವ ಚೆನ್ನೈ ಸೂಪರ್ ಕಿಂಗ್ಸ್ ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಗೆದ್ದು ಗೆಲುವಿನ ಖಾತೆ ತೆರೆಯುವ ಯೋಜನೆಯಲ್ಲಿದ್ದರೆ, ಇತ್ತ ಪಂಜಾಬ್ ಕಿಂಗ್ಸ್ ಕೂಡ ಟೂರ್ನಿಯಲ್ಲಿ ಇದುವರೆಗೂ ಒಟ್ಟು 2 ಪಂದ್ಯಗಳನ್ನಾಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ನಂತರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ದ್ವಿತೀಯ ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಇನ್ನು ಪಂಜಾಬ್ ಕಿಂಗ್ಸ್ ಕೂಡ ಈ ಬಾರಿ ನೂತನ ನಾಯಕ ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ಕಣಕ್ಕಿಳಿದಿದೆ.

ಹೀಗೆ ಭಾನುವಾರದ (ಏಪ್ರಿಲ್ 03) ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಯಾವ ಪಂದ್ಯ ಗೆಲ್ಲಬಹುದು ಎಂಬುದರ ಕುರಿತು ಹಾಗೂ ಐಪಿಎಲ್ ಇತಿಹಾಸದಲ್ಲಿ ಇತ್ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಜಯ ಸಾಧಿಸಿದೆ ಎಂಬುದರ ಕುರಿತು ಚರ್ಚೆಗಳು ನಡೆಯತ್ತಿದ್ದು, ಈ ಕುರಿತಾದ ಮಾಹಿತಿ ಕೆಳಕಂಡಂತಿದೆ ಓದಿ..
ಒಟ್ಟಾರೆ ಐಪಿಎಲ್ ಮುಖಾಮುಖಿ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 25 ಮುಖಾಮುಖಿ ಪಂದ್ಯಗಳು ನಡೆದಿದ್ದು, ಈ ಪಂದ್ಯಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ಉಳಿದ 10 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಮುಖಾಮುಖಿ ಹಣಾಹಣಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈಯನ್ನು ಸಾಧಸಿದೆ.
ಕೊನೆಯ ಐದು ಪಂದ್ಯಗಳ ಮುಖಾಮುಖಿ
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಕೊನೆಯ ಐದು ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ಉಳಿದೊಂದು ಪಂದ್ಯದಲ್ಲಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ ಐದು ಪಂದ್ಯಗಳ ಮುಖಾಮುಖಿಯಲ್ಲೂ ಸಹ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.
ಕಳೆದ ಆವೃತ್ತಿಯ ಮುಖಾಮುಖಿ ಫಲಿತಾಂಶ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆದ 2 ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಜಯ ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications