CSK vs RCB: ಇತ್ತಂಡಗಳ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಸೋತು ಹಿಂದುಳಿದಿರುವ ತಂಡ ಯಾವುದು?

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿನ ತನ್ನ ಮೊದಲ 4 ಪಂದ್ಯಗಳಲ್ಲಿಯೂ ಸಹ ಸೋಲನ್ನು ಅನುಭವಿಸುವುದರ ಮೂಲಕ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೊದಲ 4 ಪಂದ್ಯಗಳಲ್ಲಿ ಸೋತ ಕೆಟ್ಟ ಅನುಭವವನ್ನು ಪಡೆದುಕೊಂಡಿದೆ.
ಇತ್ತ ನೂತನ ನಾಯಕನನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ತನ್ನ ಪ್ರಥಮ ಪಂದ್ಯದಲ್ಲಿ ಸೋತು ಕಹಿ ಆರಂಭವನ್ನು ಪಡೆದುಕೊಂಡಿತ್ತು. ಆದರೆ ನಂತರ ನಡೆದ 3 ಪಂದ್ಯಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ತಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳಿಗೆ ಸೋಲುಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹ್ಯಾಟ್ರಿಕ್ ಜಯ ಪಡೆದುಕೊಂಡು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಇನ್ನು ಈ ಬಾರಿಯ ಟೂರ್ನಿಯಲ್ಲಿನ ತನ್ನ ಎಲ್ಲಾ 4 ಪಂದ್ಯಗಳಲ್ಲಿಯೂ ಸೋಲನ್ನು ಕಂಡಿರುವ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನ ಪಡೆದುಕೊಂಡಿದೆ. ಹೀಗೆ ಐಪಿಎಲ್ ಇತಿಹಾಸದಲ್ಲಿ ಹಿಂದೆಂದೂ ಕಂಡು ಕೇಳಿರದ ರೀತಿ ಸಾಲು ಸಾಲು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಟೂರ್ನಿಯ 22ನೇ ಪಂದ್ಯದಲ್ಲಿ ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಗೆಲುವಿನ ಖಾತೆ ತೆರೆಯುತ್ತಾ, ಅಥವಾ ಹ್ಯಾಟ್ರಿಕ್ ಜಯ ಸಾಧಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸುತ್ತಾ ಎಂಬುದರ ಕುರಿತಾದ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ. ಇನ್ನು ಇತ್ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ತಂಡ ಯಾವುದು ಎಂಬ ಚರ್ಚೆಗಳೂ ಸಹ ನಡೆಯುತ್ತಿದ್ದು, ಈ ಕುರಿತಾದ ವಿವರ ಈ ಕೆಳಕಂಡಂತಿದೆ.

ಒಟ್ಟಾರೆ ಐಪಿಎಲ್ ಮುಖಾಮುಖಿ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಟ್ಟು 28 ಪಂದ್ಯಗಳು ಜರುಗಿವೆ. ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 18 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 9 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಕೊನೆಯದಾಗಿ ನಡೆದಿರುವ 5 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಲ್ಲಿ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 1 ಪಂದ್ಯದಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಐಪಿಎಲ್ ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲೀಗ್ ಹಂತದ 2 ಪಂದ್ಯಗಳಲ್ಲಿ ಕಣಕ್ಕಿಳಿದು, ಎರಡರಲ್ಲಿಯೂ ಜಯ ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications