ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

CSK vs RR Preview: ಚೆನ್ನೈ vs ರಾಜಸ್ಥಾನ್ ಪಂದ್ಯದ ಪ್ರಿವ್ಯೂ, ಪಿಚ್ ರಿಪೋರ್ಟ್, ಸಂಭಾವ್ಯ ಪ್ಲೇಯಿಂಗ್ XI

IPL 2022: CSK vs RR Preview, Playing 11, Weather Forecast and Pitch Report details

ಇಂಡಿಯನ್ ಪ್ರೀಮಿಯರ್ ಲೀಗ್‌ನ 15ನೇ ಆವೃತ್ತಿಯಲ್ಲಿ ಶುಕ್ರವಾರ 68ನೇ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ಧೋನಿ ಪಡೆಗೆ ಈ ಪಂದ್ಯದ ಫಲಿತಾಂಶ ಯಾವುದೇ ರೀತಿಯಲ್ಲೂ ಪರಿಣಾಮ ಬೀರದು. ಆದರೆ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇಆಫ್‌ಗೆ ಪ್ರವೇಶ ಪಡೆಯುವುದರ ಜೊತೆಗೆ ಟಾಪ್ 2 ಸ್ಥಾನದ ಮೇಲೆ ಕಣ್ಣಿಟ್ಟಿದೆ. ಹೀಗಾಗಿ ಆರ್‌ಆರ್ ತಂಡಕ್ಕೆ ಈ ಪಂದ್ಯ ಹೆಚ್ಚು ಮಹತ್ವದ್ದಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಈವರೆಗೆ 13 ಪಂದ್ಯಗಳನ್ನು ಆಡಿದ್ದು ಇದರಲ್ಲಿ 8 ಗೆಲುವು ಹಾಗೂ 5 ಸೋಲು ಅನುಭವಿಸಿದೆ. ಹೀಗಾಗಿ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಸಿಎಸ್‌ಕೆ ವಿರುದ್ಧಧ ಪಂದ್ಯವನ್ನು ಗೆದ್ದರೆ ನೆಟ್‌ ರನ್‌ರೇಟ್ ಉತ್ತಮವಿರುವ ಕಾರಣ ಟಾಪ್ 2 ತಂಡವಾಗಿ ಮುಂದಿನ ಹಂತಕ್ಕೇರುವ ಅವಕಾಶವನ್ನು ಹೊಂದಿದೆ. ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದು 13 ಅಂಕಗಳ ಪೈಕಿ 4 ಗೆಲುವು ಮಾತ್ರವೇ ಸಾಧ್ಯವಾಗಿದೆ. ಹೀಗಾಗಿ 8 ಅಂಕಗಳನ್ನು ಪಡೆದು 9ನೇ ಸ್ಥಾನದಲ್ಲಿರುವ ಧೋನಿ ಬಳಗ ಟೂರ್ನಿಯಿಂದ ಈಗಾಗಲೇ ಹೊರಬಿದ್ದಿದೆ.

RCB Playoff Chances 2022 : ಗುಜರಾತ್ ವಿರುದ್ಧ ಗೆದ್ದರೂ ಆರ್‌ಸಿಬಿ ಪ್ಲೇಆಫ್ ಪ್ರವೇಶಿಸುವುದು ಅನುಮಾನ! ಕಾರಣವೇನು?RCB Playoff Chances 2022 : ಗುಜರಾತ್ ವಿರುದ್ಧ ಗೆದ್ದರೂ ಆರ್‌ಸಿಬಿ ಪ್ಲೇಆಫ್ ಪ್ರವೇಶಿಸುವುದು ಅನುಮಾನ! ಕಾರಣವೇನು?

ಸ್ಕ್ವಾಡ್‌ಗಳು

ಸ್ಕ್ವಾಡ್‌ಗಳು

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಮೊಯಿನ್ ಅಲಿ, ಡ್ವೈನ್ ಪ್ರಿಟೋರಿಯಸ್

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ಮೇ 20 ರಂದು ಶುಕ್ರವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್‌ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ತಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿಮ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ.

ರೋಹಿತ್ ಶರ್ಮಾ ನೀಡಿದ ಈ ಹೇಳಿಕೆಯಿಂದ ರೊಚ್ಚಿಗೆದ್ದ RCB ಅಭಿಮಾನಿಗಳು | Oneindia Kannada
ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೇಟ್ಮರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ನಾರಾಯಣ್ ಜಗದೀಸನ್, ಮೊಯಿನ್ ಅಲಿ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಮತೀಶ ಪತಿರಣ

Story first published: Friday, May 20, 2022, 9:37 [IST]
Other articles published on May 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X