Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs SRH Head to Head: ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ಹೆಚ್ಚು ಗೆದ್ದಿರುವ ತಂಡ ಯಾವುದು?

IPL 2022, CSK vs SRH: Chennai Super Kings vs Sunrisers Hyderabad head to head records

ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಟ್ರೋಫಿ ಎತ್ತಿಹಿಡಿದು ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ನೂತನ ನಾಯಕ ರವೀಂದ್ರ ಜಡೇಜಾ ನಾಯಕತ್ವದಡಿಯಲ್ಲಿ ಕಣಕ್ಕಿಳಿದು ಕೆಟ್ಟ ಆರಂಭವನ್ನು ಪಡೆದುಕೊಂಡಿದೆ. ಹೌದು, ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿ ಎಲ್ಲಾ ಪಂದ್ಯಗಳಲ್ಲಿಯೂ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹ್ಯಾಟ್ರಿಕ್ ಸೋಲಿನ ಮುಖಭಂಗವನ್ನು ಅನುಭವಿಸಿದೆ.

ಅದರಲ್ಲಿಯೂ ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ 180 ರನ್‌ಗಳ ಗುರಿಯನ್ನು ಬೆನ್ನತ್ತಲು ಹೋಗಿ 126 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ ಬರೊಬ್ಬರಿ 54 ರನ್‌ಗಳ ಸೋಲನ್ನು ಅನುಭವಿಸಿತ್ತು. ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಯಾರೂ ಊಹಿಸಿರದ ರೀತಿ ನೆಲಕಚ್ಚಿರುವ ಚೆನ್ನೈ ಸೂಪರ್ ಕಿಂಗ್ಸ್ ತನ್ನ ನಾಲ್ಕನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ ಕೂಡ ಚೆನ್ನೈ ಸೂಪರ್ ಕಿಂಗ್ಸ್ ರೀತಿಯೇ ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ ಎಲ್ಲಾ ಪಂದ್ಯಗಳಲ್ಲಿಯೂ ಸೋಲನ್ನು ಅನುಭವಿಸಿದೆ.

ರಸ್ತೆಯಲ್ಲೇ ಬಸ್ ನಿಲ್ಲಿಸಿದ ಧೋನಿ ಜಾಹೀರಾತು ಬ್ಯಾನ್? ಏನಿದು ಕಿರಿಕ್?? | Oneindia Kannada

ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 2 ಪಂದ್ಯಗಳನ್ನಾಡಿರುವ ಸನ್ ರೈಸರ್ಸ್ ಹೈದರಾಬಾದ್ ಎರಡೂ ಪಂದ್ಯಗಳಲ್ಲಿಯೂ ಸಹ ಸೋಲನ್ನು ಅನುಭವಿಸಿದ್ದು, ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಎರಡೂ ತಂಡಗಳೂ ಸಹ ಗೆಲುವಿನ ಮೇಲೆ ಕಣ್ಣಿಟ್ಟಿದ್ದು ಗೆಲುವಿನ ಖಾತೆ ತೆರೆಯುವತ್ತ ಚಿತ್ತ ನೆಟ್ಟಿವೆ. ಇನ್ನು ಇತ್ತಂಡಗಳ ನಡುವೆ ಇದುವರೆಗೂ ಐಪಿಎಲ್ ಇತಿಹಾಸದಲ್ಲಿ ಒಟ್ಟು ಎಷ್ಟು ಮುಖಾಮುಖಿ ಪಂದ್ಯಗಳು ನಡೆದಿವೆ ಹಾಗೂ ಈ ಪೈಕಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಜಯ ಸಾಧಿಸಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಒಟ್ಟಾರೆ ಐಪಿಎಲ್ ಮುಖಾಮುಖಿ:

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಇದುವರೆಗೂ ಒಟ್ಟು 16 ಮುಖಾಮುಖಿ ಪಂದ್ಯಗಳು ನಡೆದಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 12 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ಕೇವಲ 4 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕಳೆದ 5 ಐಪಿಎಲ್ ಪಂದ್ಯಗಳ ಮುಖಾಮುಖಿ:
ಇತ್ತಂಡಗಳ ನಡುವೆ ನಡೆದಿರುವ ಕಳೆದ 5 ಐಪಿಎಲ್ ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ನಡುವೆ ನಡೆದಿರುವ ಕಳೆದ 5 ಐಪಿಎಲ್ ಪಂದ್ಯಗಳ ಮುಖಾಮುಖಿಯಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದೆ.

csk

ಕಳೆದ ಆವೃತ್ತಿಯ ಮುಖಾಮುಖಿ

ಕಳೆದ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳ ನಡುವೆ ನಡೆದ ಎರಡೂ ಪಂದ್ಯಗಳಲ್ಲಿಯೂ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿ ಮೇಲುಗೈ ಸಾಧಿಸಿದೆ.

Story first published: Friday, April 8, 2022, 18:42 [IST]
Other articles published on Apr 8, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+