For Quick Alerts
ALLOW NOTIFICATIONS  
For Daily Alerts
 

CSK vs SRH: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 ತಿಳಿದುಕೊಳ್ಳಿ

CSK VS SRH

ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸನ್‌ರೈಸರ್ಸ್ ಹೈದ್ರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಟಾಸ್‌ ಗೆದ್ದ ಎಸ್‌ಆರ್‌ಎಚ್‌ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಸಿಎಸ್‌ಕೆ ಮೊದಲು ಬ್ಯಾಟಿಂಗ್ ಮಾಡಲಿದೆ.

ಐಪಿಎಲ್ 2022ರ ಸೀಸನ್‌ನಲ್ಲಿ ಚೆನ್ನೈ ತಂಡವನ್ನ ಎರಡನೇ ಬಾರಿಗೆ ಎದುರಿಸುತ್ತಿರುವ ಸನ್‌ರೈಸರ್ಸ್ ಹೈದ್ರಾಬಾದ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಕಳೆದ ಪಂದ್ಯದಲ್ಲಿ ಆಡಿಸಿದ ತಂಡವನ್ನೇ ಕಣಕ್ಕಿಳಿಸಿದ್ದಾರೆ.

ಇನ್ನು ರವೀಂದ್ರ ಜಡೇಜಾ ನಾಯಕತ್ವವನ್ನು ಮಹೇಂದ್ರ ಸಿಂಗ್ ಧೋನಿಗೆ ಹಿಂದಿರುಗಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಆಲ್‌ರೌಂಡರ್‌ಗಳಾದ ಶಿವಂ ದುಬೆ ಮತ್ತು ಡ್ವೇನ್ ಬ್ರಾವೋ ಅನ್ನು ತಂಡದಿಂದ ಹೊರಗಿಟ್ಟು ಆಶ್ಚರ್ಯ ಮೂಡಿಸಿದೆ.

ಈ ಇಬ್ಬರು ಆಟಗಾರರ ಬದಲು ಮದುವೆಯ ಹಿನ್ನಲೆಯಲ್ಲಿ ರಜೆಯಲ್ಲಿ ತೆರಳಿದ್ದ ಡೆವೋನ್ ಕಾನ್ವೆ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಸಿಮರ್‌ಜೀತ್ ಸಿಂಗ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಈಗಾಗಲೇ ಆರು ಪಂದ್ಯಗಳಲ್ಲಿ ಸೋಲನ್ನ ಕಂಡಿರುವ ಸಿಎಸ್‌ಕೆ ಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದು, ಸನ್‌ರೈಸರ್ಸ್ ಹೈದ್ರಾಬಾದ್ ಕೂಡ ಪ್ಲೇ ಆಫ್‌ ಮೇಲೆ ಗುರಿಯಿಟ್ಟಿದ್ದು, ಗೆಲುವಿಗಾಗಿ ಕಾದಿದೆ. ಸಿಎಸ್‌ಕೆ ಮತ್ತು ಸನ್‌ರೈಸರ್ಸ್ ಹೈದ್ರಾಬಾದ್ ತಂಡದ ಪ್ಲೇಯಿಂಗ್ ಇಲೆವೆನ್ ಮಾಹಿತಿ ಈ ಕೆಳಗಿದೆ.

ಸನ್‌ರೈಸರ್ಸ್ ಹೈದ್ರಾಬಾದ್ ಪ್ಲೇಯಿಂಗ್ 11
ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್(ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್(ವಿಕೆಟ್ ಕೀಪರ್), ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ. ನಟರಾಜನ್

ಚೆನ್ನೈ ಸೂಪರ್ ಕಿಂಗ್ಸ್‌ ಪ್ಲೇಯಿಂಗ್ 11
ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಡೆವೊನ್ ಕಾನ್ವೇ, ಅಂಬಟಿ ರಾಯುಡು, ಸಿಮರ್ಜೀತ್ ಸಿಂಗ್, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಡ್ವೈನ್ ಪ್ರಿಟೋರಿಯಸ್, ಮುಖೇಶ್ ಚೌಧರಿ, ಮಹೇಶ್ ತೀಕ್ಷಣ

Story first published: Sunday, May 1, 2022, 19:12 [IST]
Other articles published on May 1, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+