IPL 2022: ಡೆಲ್ಲಿ ಕ್ಯಾಪಿಟಲ್ಸ್ ಸೇರಲು ಈ ಇಬ್ಬರು ಸಿದ್ಧ; ಮತ್ತಷ್ಟು ಬಲಿಷ್ಠವಾಗಲಿದೆ ತಂಡ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸುವುದರ ಮೂಲಕ ಶುಭಾರಂಭವನ್ನು ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಂತರ ನೂತನ ತಂಡ ಗುಜರಾತ್ ಜೈಂಟ್ಸ್ ವಿರುದ್ಧ ಸೋಲನ್ನು ಅನುಭವಿಸಿದೆ. ಹೀಗೆ ಟೂರ್ನಿಯಲ್ಲಿ ಇಲ್ಲಿಯವರೆಗೂ ಎರಡು ಪಂದ್ಯಗಳನ್ನಾಡಿ ಒಂದು ಪಂದ್ಯದಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ತನ್ನ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಕಣಕ್ಕಿಳಿಯಲಿದೆ.

ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು, ಉಳಿದೊಂದು ಪಂದ್ಯದಲ್ಲಿ ಸೋತಿರುವ ಲಕ್ನೋ ಸೂಪರ್ ಜೈಂಟ್ಸ್ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿಯೂ ಸಹ ಗೆಲ್ಲುವ ಯೋಜನೆಯಲ್ಲಿದೆ. ಆದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಈ ಯೋಜನೆಗೆ ಹಿನ್ನಡೆಯಾಗುವಂತಹ ಸುದ್ದಿಯೊಂದನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಶೇನ್ ವಾಟ್ಸನ್ ಹಂಚಿಕೊಂಡಿದ್ದು ತಮ್ಮ ತಂಡದ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್ ಮತ್ತು ಅನ್ರಿಚ್ ನಾರ್ಕಿಯಾ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ಮೂಲಕ ಕಣಕ್ಕಿಳಿಯಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತಾಗಿ ಶೇನ್ ವಾಟ್ಸನ್ ಮಾತನಾಡಿರುವ ವಿಡಿಯೋವನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, "ಡೇವಿಡ್ ವಾರ್ನರ್ ಕ್ವಾರಂಟೈನ್‌ನಿಂದ ಹೊರ ಬಂದಿದ್ದು ಮುಂದಿನ ಪಂದ್ಯಕ್ಕೆ ಆಯ್ಕೆ ಮಾಡಲು ಖಂಡಿತವಾಗಿಯೂ ಲಭ್ಯವಿರುತ್ತಾರೆ, ಇದು ತುಂಬಾ ಖುಷಿಯ ವಿಷಯವಾಗಿದೆ. ಅನ್ರಿಚ್ ನಾರ್ಕಿಯಾ ಅವರು ಭಾರತಕ್ಕೆ ಆಗಮಿಸಿದಾಗಿನಿಂದ ಕಳೆದ ಎರಡು ವಾರಗಳಿಂದ ನಂಬಲಾಗದಷ್ಟು ಉತ್ತಮವಾಗಿ ಸುಧಾರಿಸಿಕೊಳ್ಳುತ್ತಿದ್ದಾರೆ ಮತ್ತು ಆಯ್ಕೆಗೆ ಲಭ್ಯವಾಗಲು ಅವರು ತಮ್ಮ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ" ಎಂಬ ಹೇಳಿಕೆಯನ್ನು ಶೇನ್ ವಾಟ್ಸನ್ ಈ ವಿಡಿಯೋದಲ್ಲಿ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications