DC vs LSG Preview: ಪಂದ್ಯದ ಪಿಚ್ ವರದಿ, ಸಂಭಾವ್ಯ ಆಡುವ ಬಳಗ, ನೇರಪ್ರಸಾರದ ಮಾಹಿತಿ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 15ನೇ ಪಂದ್ಯ ಏಪ್ರಿಲ್ 7ರ ಗುರುವಾರದಂದು ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಲಿದ್ದು, ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ನೂತನ ತಂಡ ಲಕ್ನೋ ಸೂಪರ್ ಜೈಂಟ್ಸ್ ಸೆಣಸಾಟ ನಡೆಸಲಿವೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಫರ್ ಜೈಂಟ್ಸ್ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಉಳಿದೊಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಇತ್ತ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಒಂದು ಪಂದ್ಯದಲ್ಲಿ ಜಯ ಸಾಧಿಸಿ ಉಳಿದೊಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಇನ್ನು ಟೂರ್ನಿಯಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೋತಿದ್ದ ಲಕ್ನೋ ಸೂಪರ್ ಜೈಂಟ್ಸ್ ನಂತರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ವಿರುದ್ಧದ ಪಂದ್ಯಗಳಲ್ಲಿ ಜಯ ಸಾಧಿಸಿತು. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಇಂಡಿಯನ್ಸ್ ವಿರುದ್ಧದ ಪ್ರಥಮ ಪಂದ್ಯದಲ್ಲಿ ಜಯ ಸಾಧಿಸಿ ಶುಭಾರಂಭ ಮಾಡಿ ದ್ವಿತೀಯ ಪಂದ್ಯದಲ್ಲಿ ನೂತನ ತಂಡವಾದ ಗುಜರಾತ್ ಟೈಟನ್ಸ್ ವಿರುದ್ಧ ಸೋಲನ್ನು ಅನುಭವಿಸಿತು. ಹೀಗೆ ಸತತ ಎರಡು ಜಯ ಸಾಧಿಸಿರುವ ಲಕ್ನೋ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತನ್ನ ಗೆಲುವಿನ ಓಟವನ್ನು ಮುಂದುವರೆಸುತ್ತಾ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದು ಯಶಸ್ಸಿನ ಹಾದಿಗೆ ಮರಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಇನ್ನು ಇತ್ತಂಡಗಳ ನಡುವಿನ ಈ ಪಂದ್ಯದ ಪಿಚ್ ವರದಿ, ಸಂಭಾವ್ಯ ಆಡುವ ಬಳಗ ಹಾಗೂ ನೇರಪ್ರಸಾರದ ಮಾಹಿತಿ ಈ ಕೆಳಕಂಡಂತಿದೆ..
ಪಿಚ್ ವರದಿ: ಪುಣೆಯ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿರುವ ಪಿಚ್ ವೇಗಿಗಳಿಗೆ ಮತ್ತು ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡುವ ನಿರೀಕ್ಷೆಯಿದೆ. ವೇಗಿಗಳು ಆರಂಭದಲ್ಲಿ ಸ್ವಲ್ಪ ವೇಗ ಮತ್ತು ಬೌನ್ಸ್ ಪಡೆಯುತ್ತಾರೆ, ಆದರೆ ಬ್ಯಾಟ್ಸ್‌ಮನ್‌ಗಳು ಆಟದ ನಂತರದ ಭಾಗದಲ್ಲಿ ಸ್ವಲ್ಪ ಸಹಾಯವನ್ನು ಪಡೆಯುವ ನಿರೀಕ್ಷೆಯಿದೆ.

ಸಂಭಾವ್ಯ ಆಡುವ ಬಳಗ:
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ಕೆಎಸ್ ಭರತ್ / ಮನ್‌ದೀಪ್ ಸಿಂಗ್, ರಿಷಬ್ ಪಂತ್ (ನಾಯಕ/ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಮುಸ್ತಾಫಿಜುರ್ ರೆಹಮಾನ್
ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಆಂಡ್ರ್ಯೂ ಟೈ, ಅವೇಶ್ ಖಾನ್, ರವಿ ಬಿಷ್ಣೋಯ್.
ನೇರಪ್ರಸಾರ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಟಿವಿ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಇನ್ನು ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಸಹ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications