For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಇಶಾನ್ ಭರ್ಜರಿ ಬ್ಯಾಟಿಂಗ್; ಡೆಲ್ಲಿಗೆ 178 ರನ್‌ಗಳ ಗುರಿ ನೀಡಿದ ಮುಂಬೈ

IPL 2022: DC vs MI, Delhi Capitals need 178 runs to win against Mumbai Indians

ಐಪಿಎಲ್ 2ನೇ ಆವೃತ್ತಿಯ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಸೆಣೆಸಾಡುತ್ತಿದ್ದು ಮೊದಲಿಗೆ ಬ್ಯಾಟಿಗ್ ನಡೆಸಿದ ರೋಹಿತ್ ಪಡೆ 178 ರನ್‌ಗಳ ಸವಾಲಿನ ಗುರಿ ನೀಡಿದೆ. ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಇಶಾನ್ ಕಿಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಮಿಂಚಿದರೆ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಬೌಲಿಂಗ್‌ನಲ್ಲಿ ಕುಲ್‌ದೀಪ್ ಯಾದವ್ ಭರ್ಜರಿ ಪ್ರದರ್ಶನ ನೀಡಿದರು.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ಮುಂಬೈ ಇಂಡಿಯನ್ಸ್ ಪರವಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 67 ರನ್‌ಗಳ ಕೊಡುಗೆ ನೀಡಿದ್ದಾರೆ. ರೋಹಿತ್ ಶರ್ಮಾ 41 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಇಶಾನ್ ಕಿಶನ್ ಅಂತಿಮ ಹಂತದವರೆಗೂ ಭರ್ಜರಿ ಹೋರಾಟವನ್ನು ನಡೆಸಿದ್ದು 81 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ. 48 ಎಸೆತ ಎದುರಿಸಿದ ಇಶಾನ್ ಕಿಶನ್ ಎರಡು ಸಿಕ್ಸರ್ ಹಾಗೂ 11 ಬೌಂಡರಿ ಸಿಡಿಸಿ ಮಿಂಚಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಇತರ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ. ತಿಲಕ್ ವರ್ಮ 22 ರನ್‌ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಕುಲ್‌ದೀಪ್ ಯಾದವ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ನಾಲ್ಕು ಓವರ್‌ಗಳ ತಮ್ಮ ಕೋಟಾದಲ್ಲಿ ಯಾದವ್ ಕೇವಲ 18 ರನ್ ನೀಡಿ 3 ವಿಕೆಟ್ ಸಂಪಾದಿಸಿದ್ದಾರೆ. ರೋಹಿತ್ ಶರ್ಮಾ ಅನ್ಮೋಲ್‌ಪ್ರೀತ್ ಸಿಂಗ್ ಹಾಗೂ ಕಿರಾನ್ ಪೊಲಾರ್ಡ್ ವಿಕೆಟ್‌ಗಳು ಕುಲ್ದೀಪ್ ಯಾದವ್ ಪಾಲಾದವು. ಖಲೀಲ್ ಅಹ್ಮದ್ 2 ವಿಕೆಟ್ ಕಿತ್ತು ಮಿಂಚಿದ್ದಾರೆ.

ಮುಂಬೈ ಇಂಡಿಯನ್ಸ್, ಪ್ಲೇಯಿಂಗ್ XI: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ಅನ್ಮೋಲ್ಪ್ರೀತ್ ಸಿಂಗ್, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಜಸ್ಪ್ರೀತ್ ಬುಮ್ರಾ, ಬೆಸಿಲ್ ಥಂಪಿ
ಬೆಂಚ್: ಆರ್ಯನ್ ಜುಯಲ್, ಡೆವಾಲ್ಡ್ ಬ್ರೆವಿಸ್, ಸಂಜಯ್ ಯಾದವ್, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ರಿಲೆ ಮೆರೆಡಿತ್, ಫ್ಯಾಬಿಯನ್ ಅಲೆನ್, ರಮಣದೀಪ್ ಸಿಂಗ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್

Faf Du Plessis ಪಂದ್ಯ ಮುಗಿದಾದ ನಂತರ ಹೀಗೇಕೆ ಹೇಳಿದರು | Oneindia Kannada

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ರಿಷಬ್ ಪಂತ್(ವಿಕೆಟ್ ಕೀಪರ್/ನಾಯಕ), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಕಮಲೇಶ್ ನಾಗರಕೋಟಿ
ಬೆಂಚ್: ಶ್ರೀಕರ್ ಭರತ್, ಸರ್ಫರಾಜ್ ಖಾನ್, ಚೇತನ್ ಸಕರಿಯಾ, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್

Story first published: Sunday, March 27, 2022, 19:50 [IST]
Other articles published on Mar 27, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+