IPL 2022: ಡೆಲ್ಲಿ vs ಮುಂಬೈ ಹೆಡ್ ಟು ಹೆಡ್ ರೆಕಾರ್ಡ್, ಸಂಭಾವ್ಯ ಪ್ಲೇಯಿಂಗ್ 11

ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿಂದು ಬಲಿಷ್ಠ ಚಾಂಪಿಯನ್ ತಂಡವಾದ ಮುಂಬೈ ಇಂಡಿಯನ್ಸ್‌ಗೆ, ಯುವ ಆಟಗಾರರನ್ನ ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಒಂದೆಡೆ ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ, ಮತ್ತೊಂದೆಡೆ ಭಾರತದ ಯುವ ಹಾಗೂ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ನೇತೃತ್ವದ ಡೆಲ್ಲಿ ತಂಡವು ಅಖಾಡಕ್ಕಿಳಿಯಲಿದೆ.
ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಉಭಯ ತಂಡಗಳು 30 ಬಾರಿ ಮುಖಾಮುಖಿಯಾಗಿವೆ. ಯಾವ ತಂಡವು ಎಷ್ಟು ಪಂದ್ಯ ಗೆದ್ದಿದೆ ಎಂಬುದನ್ನ ಈ ಕೆಳಗೆ ನೋಡಬಹುದು.

ಡೆಡ್ ಟು ಹೆಡ್ ರೆಕಾರ್ಡ್
ಐಪಿಎಲ್ 14 ಸೀಸನ್‌ಗಳಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ 16 ಪಂದ್ಯಗಳಲ್ಲಿ ಜಯಿಸಿದೆ. ಆದ್ರೆ ಅದೇ ಡೆಲ್ಲಿ ಕ್ಯಾಪಿಟಲ್ಸ್ 14 ಪಂದ್ಯಗಳನ್ನ ಮಾತ್ರ ಗೆದ್ದಿದೆ.
ಮುಂಬೈ ಇಂಡಿಯನ್ಸ್ ಐಪಿಎಲ್‌ನಲ್ಲಿ ಅತ್ಯಧಿಕ 218 ರನ್ ಕಲೆಹಾಕಿದ್ದು, ಡೆಲ್ಲಿ ಕ್ಯಾಪಿಲಟ್ಸ್ 213 ರನ್‌ಗಳನ್ನ ಸಿಡಿಸಿದೆ.

2020 ನೇ ಸೀಸನ್‌ನಲ್ಲಿ ಡೆಲ್ಲಿ ಅಬ್ಬರ, 2021ರಲ್ಲಿ ಮುಂಬೈ ಮೇಲುಗೈ
ಕಳೆದ ಎರಡು ಐಪಿಎಲ್ ಸೀಸನ್‌ಗಳಲ್ಲಿ ಉಭಯ ತಂಡಗಳು ವಿಶೇಷವಾದ ಪ್ರದರ್ಶನ ಹೊಂದಿದೆ. 2020ರ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ತೀರಾ ಕಳಪೆ ಪ್ರದರ್ಶನ ತೋರಿದ್ದ ಡೆಲ್ಲಿ ಕ್ಯಾಪಿಟಲ್ಸ್ ಆಡಿದ್ದ ನಾಲ್ಕು ಪಂದ್ಯಗಳಲ್ಲಿ ಮುಗ್ಗರಿಸಿತ್ತು.
ಆದ್ರೆ ಅದೇ ಕಳೆದ 2021ರ ಸೀಸನ್‌ನಲ್ಲಿ ಮುಂಬೈ ವಿರುದ್ಧ ಕಂಬ್ಯಾಕ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ವಿರುದ್ಧ ಆಡಿದ ಎರಡು ಪಂದ್ಯಗಳನ್ನ ಜಯಿಸಿತು. ಮೊದಲ ಪಂದ್ಯದಲ್ಲಿ ರೋಹಿತ್ ಪಡೆ ವಿರುದ್ಧ 4 ವಿಕೆಟ್ ಜಯ ಸಾಧಿಸಿದ್ರೆ, ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಗೆದ್ದು ಬೀಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂಭಾವ್ಯ ಪ್ಲೇಯಿಂಗ್ 11:
ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ರಿಷಭ್ ಪಂತ್ (ನಾಯಕ), ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್

ಮುಂಬೈ ಇಂಡಿಯನ್ಸ್ ತಂಡದ ಸಂಭಾವ್ಯ ಪ್ಲೇಯಿಂಗ್ 11
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಜಯದೇವ್ ಉನಾದ್ಕಟ್, ರಿಲೆ ಮೆರೆಡಿತ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications