For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಡೆಲ್ಲಿ ಪ್ಲೇಆಫ್ ಕನಸು ಭಗ್ನಗೊಳಿಸಿದ ಮುಂಬೈ: ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್‌ಸಿಬಿ

IPL 2022: DC vs MI Highlights: Mumbai Indians beat Delhi Capitals by 5 wickets and RCB entered playoffs

ಐಪಿಎಲ್ 15ನೇ ಆವೃತ್ತಿಯಲ್ಲಿ ಪ್ಲೇಆಫ್‌ಗೇರುವ ಡೆಲ್ಲಿ ಕನಸು ಅಂತಿಮ ಪಂದ್ಯದಲ್ಲಿ ಭಗ್ನವಾಗಿದೆ. ಮುಂಬೈ ಇಂಡಿಯನ್ಸ ವಿರುದ್ಧ ಗೆಲ್ಲಲೇಬೇಕಿದ್ದ ಪಂದ್ಯದಲ್ಲಿ ಎಡವಿದ ರಿಷಭ್ ಪಂತ್ ಪಡೆ 5 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದ್ದು ಲೀಗ್ ಹಂತದಲ್ಲಿ ತನ್ನ ಹೋರಾಟವನ್ನು ಅಂತ್ಯಗೊಳಿಸಿದೆ. ಈ ಫಲಿತಾಂಶದಿಂದಾಗಿ ಆರ್‌ಸಿಬಿ ಈ ಬಾರಿಯ ಐಪಿಎಲ್‌ನಲ್ಲಿ ನಾಲ್ಕನೇ ತಂಡವಾಗಿ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿದೆ.

ಇನ್ನು ಇದಕ್ಕೂ ಮುನ್ನ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಕುಸಿತದ ಹೊರಾತಾಗಿಯೂ ಸವಾಲಿನ ಗುರಿ ನೀಡುವಲ್ಲಿ ಯಶಸ್ವಿಯಾಗಿತ್ತು. ನಿಗದಿತ 20 ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ 7 ವಿಕೆಟ್ ಕಳೆದುಕೊಂಡು 159 ರನ್‌ಗಳನ್ನು ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಬೌಲರ್‌ಗಳು ಆರಂಭದಲ್ಲಿ ಸಂಪೂರ್ಣ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು.

31 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಮುಂಬೈ 50 ರನ್‌ಗಳಿಸುವಷ್ಟರಲ್ಲಿ 4ನೇ ವಿಕೆಟ್ ಕಳೆದುಕೊಂಡಿತ್ತು. ಆದರೆ ಈ ಸಂದರ್ಭದಲ್ಲಿ ನಾಯಕ ರಿಷಭ್ ಪಂತ್ ಹಾಗೂ ರೋವ್ಮನ್ ಪೋವೆಲ್ ಅವರಿಂದ ಅದ್ಭುತ ಜೊತೆಯಾಟವೊಂದು ಬಂದಿತ್ತು. ಹೀಗಾಗಿ ಡಿಸಿ ಗೌರವಯುತ ಮೊತ್ತ ಸಂಪಾದಿಸುವಲ್ಲಿ ಯಶಸ್ವಿಯಾಗಿತ್ತು. ಇನ್ನು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ 33 ಎಸೆತಗಳಲ್ಲಿ 39 ರನ್‌ಗಳನ್ನು ಗಳಿಸಿದರೆ ರೋಮನ್ ಪೋವೆಲ್ 34 ಎಸೆತಗಳಲ್ಲಿ 43 ರನ್‌ಗಳಿಸಿದ್ದಾರೆ. ಅಕ್ಷರ್ ಪಟೇಲ್ 19 ರನ್‌ಗಳ ಕೊಡುಗೆ ನೀಡಿದರು.

ಇದನ್ನು ಬೆನ್ನಟ್ಗಟಿದ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ನಾಯಕ ರೋಹಿತ್ ಶರ್ಮಾ ಮತ್ತೊಂದು ಕಳಪೆ ಪ್ರದರ್ಶನ ನೀಡಿ ವಿಕೆಟ್ ಕಳೆದುಕೊಂಡರು. ಆದರೆ ಇಶಾನ್ ಕಿಶನ್ 48 ರನ್‌ಗಳ ಕೊಡುಗೆ ನಿಡುವ ಮೂಲಕ ತಂಡಕ್ಕೆ ಆಸರೆಯಾದರು. ಡೆವಾಲ್ಡ್ ಬ್ರೇವಿಸ್ ಕೂಡ 37 ರನ್‌ಗಳನ್ನು ಸಿಡಿಸಿದರು. ನಂತರ ತಿಲಕ್ ವರ್ಮ ಹಾಗೂ ಟಿಮ್ ಡೇವಿಡ್ ಅವರಿಂದ ನಿರ್ಣಾಯಕ ಜೊತೆಯಾಟ ಬಂದಿತು. ತಿಲಕ್ ವರ್ಮ 21 ರನ್‌ಗಳ ಕೊಡುಗೆ ನೀಡಿ ವಿಕೆಟ್ ಕಳೆದುಕೊಂಡರೆ ಟಿಮ್ ಟೇವಿಡ್ ಕೇವಲ 11 ಎಸೆತಗಳಲ್ಲಿ 34 ರನ್ ಸಿಡಿಸಿ ಮಿಂಚುಹರಿಸಿದರು. ಅಂತಿಮವಾಗಿ ಇನ್ನೂ ಐದು ಎಸೆತಗಳು ಬಾಕಿಯಿರುವಂತೆಯೇ ಮುಂಬೈ ಇಂಡಿಯನ್ಸ್ ಗೆದ್ದು ಬೀಗುವಲ್ಲಿ ಯಶಸ್ವಿಯಾಯಿತು.

ಪ್ಲೇಆಫ್‌ಗೆ ಆರ್‌ಸಿಬಿ ಎಂಟ್ರಿ: ಇನ್ನು ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡ ಪ್ಲೇಆಫ್‌ಗೆ ಅಧಿಕೃತವಾಗಿ ಎಂಟ್ರಿಕೊಟ್ಟಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದರೆ ಮಾತ್ರವೇ ಆರ್‌ಸಿಬಿ ತಂಡಕ್ಕೆ ಪ್ಲೇಆಫ್‌ಗೇರುವ ಅವಕಾಶ ಉಳಿದುಕೊಂಡಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಐದು ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿರುವ ಕಾರಣ 16 ಅಂಕಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿದೆ.

ಪ್ಲೇಯಿಂಗ್ XI ಹೀಗಿದೆ: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಜಸ್ಪ್ರೀತ್ ಬುಮ್ರಾ, ಮಯಾಂಕ್ ಮಾರ್ಕಂಡೆ

ಬೆಂಚ್: ಕೀರನ್ ಪೊಲಾರ್ಡ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಫ್ಯಾಬಿಯನ್ ಅಲೆನ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಕುಮಾರ್ ಕಾರ್ತಿಕೇಯ, ಆಕಾಶ್ ಮಾಧ್ವಲ್, ರಾಹುಲ್ ಬುದ್ಧಿ, ಟ್ರಿಸ್ಟಾನ್ ಸ್ಟಬ್ಸ್, ಸಂಜಯ್ ಯಾದವ್

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್
ಬೆಂಚ್: ಮನ್‌ದೀಪ್ ಸಿಂಗ್, ಶ್ರೀಕರ್ ಭರತ್, ಟಿಮ್ ಸೀಫರ್ಟ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಲಲಿತ್ ಯಾದವ್

Story first published: Saturday, May 21, 2022, 23:56 [IST]
Other articles published on May 21, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+