Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs PBKS: ಇಂದು ಪಂಜಾಬ್‌ ಕಿಂಗ್ಸ್‌ ಗೆಲ್ಲುವ ಚಾನ್ಸ್ ಹೆಚ್ಚಿದೆ ಎಂದ ದೊಡ್ಡ ಗಣೇಶ್‌: ಕಾರಣ ಏನು?

Dodda Ganesh prediction

ಬ್ರಬೋರ್ನ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಪಿಎಲ್ 2022ರ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವರ್ಸಸ್ ಪಂಜಾಬ್ ಕಿಂಗ್ಸ್‌ ಮುಖಾಮುಖಿಯಾಗುತ್ತಿದ್ದು, ಇತ್ತಂಡಗಳು ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯವನ್ನ ಗೆಲ್ಲಲೇಬೇಕಾದ ಒತ್ತಡದಲ್ಲಿ ಕಣಕ್ಕಿಳಿಯಲಿವೆ.

ಪಾಯಿಂಟ್ಸ್ ಟೇಬಲ್‌ನಲ್ಲಿ ಎಂಟನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್, ಆಡಿರುವ 5 ಪಂದ್ಯಗಳಲ್ಲಿ 2 ಗೆಲುವು ಮತ್ತು 3 ಪಂದ್ಯಗಳಲ್ಲಿ ಸೋಲನ್ನ ಕಂಡಿದ್ದು, ಒಟ್ಟು 4 ಪಾಯಿಂಟ್ಸ್ ಕಲೆಹಾಕಿದೆ.
ಇನ್ನು ಪಂಜಾಬ್ ಕಿಂಗ್ಸ್ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು ಮತ್ತು 3 ಸೋಲನ್ನ ಕಂಡಿದ್ದು, 6 ಪಾಯಿಂಟ್ಸ್‌ನೊಂದಿಗೆ ಏಳನೇ ಸ್ಥಾನದಲ್ಲಿದೆ. ಹೀಗಿರುವಾಗ ಇವತ್ತಿನ ಪಂದ್ಯ ಎರಡೂ ತಂಡಗಳಿಗೆ ತುಂಬಾನೆ ಪ್ರಾಮುಖ್ಯತೆ ಪಡೆದಿದೆ.

ಭಾರತದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಮೈಖೇಲ್ ಕನ್ನಡದ ಜೊತೆಗೆ ಎಕ್ಸ್‌ಕ್ಲೂಸಿವ್ ಕಾರ್ಯಕ್ರಮ ''ಕ್ರಿಕ್‌ಹಂಟ್ ವಿತ್ ದೊಡ್ಡಗಣೇಶ್‌'' ಪಂದ್ಯ ಪೂರ್ವ ವಿಶ್ಲೇಷಣೆಯಲ್ಲಿ ಪಂಜಾಬ್ ಕಿಂಗ್ಸ್ ಮೇಲುಗೈ ಸಾಧಿಸಿಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರ ಸದ್ಯದ ಮನಸ್ಥಿತಿ.

ಕೋವಿಡ್‌-19 ಕಾರಣದಿಂದ ಹೈರಾಣಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರು ತಂಡದ ಬ್ಯಾಲೆನ್ಸ್‌ ವಿಚಾರದಲ್ಲಿ ಕಷ್ಟ ಎದುರಿಸಬಹುದೆಂದು ಅಂದಾಜಿಸಲಾಗಿದೆ. ಇತ್ತೀಚೆಗೆ ಬಂದ ವರದಿ ಪ್ರಕಾರ ಡೆಲ್ಲಿ ಕ್ಯಾಪಿಟಲ್ಸ್‌ನ ಮತ್ತೊಬ್ಬ ವಿದೇಶಿ ಆಟಗಾರನು ಕೋವಿಡ್-19 ದೃಢಪಟ್ಟಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾರು ಕಣಕ್ಕಿಳಿಯಬಹುದು ಎಂಬುದನ್ನ ಅಂದಾಜಿಸಲು ಕಷ್ಟಸಾಧ್ಯವಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಬುಧವಾರ (ಏಪ್ರಿಲ್ 20) ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಪುಣೆಯಲ್ಲಿ ಪಂದ್ಯವನ್ನಾಡಬೇಕಿತ್ತು. ಆದ್ರೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರಿಗೆ ಸೋಮವಾರ ಬೆಳಗ್ಗೆ ನಡೆಸಿದ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯಲ್ಲಿ ಕೋವಿಡ್ ಸೋಂಕು ತಗುಲಿರುವುದು ಧೃಡಪಟ್ಟಿರುವ ಬಳಿಕ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೀಗಾಗಿ ದೆಹಲಿಯ ಎಲ್ಲಾ ಆಟಗಾರರನ್ನ ಹೋಟೆಲ್ ರೂಂಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಜೊತೆಗೆ ಎರಡು ಬಾರಿ ಆರ್‌ಟಿಪಿಸಿಆರ್ ಟೆಸ್ಟ್‌ ನಡೆಸಲಾಗಿದೆ.

ಡೆಲ್ಲಿ vs ಪಂಜಾಬ್ ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಯಶ್ ಧುಲ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ರೋಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ನಾಯಕ), ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಒಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್‌ದೀಪ್ ಸಿಂಗ್

Story first published: Wednesday, April 20, 2022, 17:39 [IST]
Other articles published on Apr 20, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+