
ಪ್ರಮುಖ ಆಟಗಾರರ ವೈಫಲ್ಯ
ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಸಾಧಾರಣ ಆರಂಭ ದೊರೆಯಿತಾದರೂ ನಂತರ ಒಬ್ಬರ ನಂತರ ಮತ್ತೊಬ್ಬರು ಫೆವಿಲಿಯನ್ ಪೆರೇಡ್ ನಡೆಸಲು ಆರಂಭಿಸಿದರು. ಮೊದಲ ವಿಕೆಟ್‌ಗೆ 33 ರನ್‌ಗಳ ಜೊತೆಯಾಟ ಬಂತಾದರೂ ನಂತತ ಭಾರೀ ವೈಫಲ್ಯತೆ ಅನುಭವಿಸಿತು ಪಂಜಾಬ್. ನಾಯಕ ಮಯಾಂಕ್ ಅಗರ್ವಾಲ್ 24 ರನ್‌ಗಳ ಕೊಡುಗೆ ನೀಡಿದರೆ ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಲಿವಿಂಗ್‌ಸ್ಟನ್ ಅವರಂತಾ ಪ್ರಮುಖ ಆಟಗಾರರು ಒಂದಂಕಿಗೇ ವಿಕೆಟ್ ಒಪ್ಪಿಸಿದ್ದಾರೆ. ಶಾರೂಖ್ ಖಾನ್ ಕೂಡ 12 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಈ ಮೂಲಕ ನಿಗದಿತ 20 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 115 ರನ್‌ಗಳಿಸಲಷ್ಟೇ ಶಕ್ತವಾಯಿತು ಪಂಜಾಬ್ ಕಿಂಗ್ಸ್.

ಡೆಲ್ಲಿ ಬೌಲರ್‌ಗಳ ಸಾಂಘಿಕ ಪ್ರದರ್ಶನ
ಇನ್ನು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳು ಸಾಂಘಿಕ ಪ್ರದರ್ಶನ ನೀಡಿ ಮಿಂಚಿದ್ದಾರೆ. ಖಲೀಲ್ ಅಹ್ಮದ್, ಲಲಿತ್ ಯಾದವ್, ಅಕ್ಷರ್ ಪಟೇಲ್ ಹಾಗೂ ಕುಲ್‌ದೀಪ್ ಯಾದವ್ ತಲಾ 2 ವಿಕೆಟ್ ಪಡೆದು ಮಿಂಚಿದರು. ಮುಸ್ತಫಿಜುರ್ ಒಂದು ವಿಕೆಟ್ ಪಡೆದರು. ಈ ಮೂಲಕ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ತಂಡವನ್ನು ಕೇವಲ 115 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲರ್‌ಗಳು ಯಶಸ್ವಿಯಾದರು.

ಸುಲಭವಾಗಿ ಬೆನ್ನಟ್ಟಿದ ಡಿಸಿ
ಇನ್ನು ಪಂಜಾಬ್ ಕಿಂಗ್ಸ್ ತಂಡ ನೀಡಿದ 116 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಆರಂಭಿಕರಾದ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶಿಸಿದರು. ಪಂಜಾಬ್ ಬೌಲರ್‌ಗಳ ಮೇಲೆ ದಂಡೆತ್ತಿ ಹೋದ ಈ ಇಬ್ಬರು ಆಟಗಾರರು ಮೊದಲ ವಿಕೆಟ್‌ಗೆ ಕೇವಲ 6.3 ಓವರ್‌ಗಳಲ್ಲಿ 83 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟರು. ಪೃರ್ಥವು ಶಾ 20 ಎಸೆತಗಳಲ್ಲಿ 41 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಡೇವಿಡ್ ವಾರ್ನರ್ ನಂತರ ತಮ್ಮ ಸ್ಪೋಟಕ ಬ್ಯಾಟಿಂಗ್ ಮುಂದುವರಿಸಿದರು. 30 ಎಸೆತಗಳಲ್ಲಿ 60 ರನ್‌ಗಳಿಸಿ ವಾರ್ನರ್ ಅಜೇಯವಾಗುಳಿದರು. ಸರ್ಫರಾಜ್ ಖಾನ್ 12 ರನ್‌ಗಳಿಸಿ ಅಜೇಯವಾಗುಳಿದರು. ಅಂತಿಮವಾಗಿ ಕೇವಲ 10.3 ಓವರ್‌ಗಳಲ್ಲಿ ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ.

ಪ್ಲೇಯಿಂಗ್ XI
ಪಂಜಾಬ್ ಕಿಂಗ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಷ್‌ದೀಪ್ ಸಿಂಗ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಭ್ ಪಂತ್(ನಾಯಕ/ ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಸರ್ಫರಾಜ್ ಖಾನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್


Click it and Unblock the Notifications












