RR vs DC: ಹೋರಾಡಿ ಸೋತ ಡೆಲ್ಲಿ; ರಾಜಸ್ಥಾನ್ ರಾಯಲ್ಸ್‌ಗೆ ಭರ್ಜರಿ ಗೆಲುವು

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಜೋಸ್ ಬಟ್ಲರ್ ಸಿಡಿಸಿದ ಭರ್ಜರಿ ಶತಕ ಹಾಗೂ ಕನ್ನಡಿದ ದೇವದತ್ ಪಡಿಕ್ಕಲ್ ಅವರ ಅದ್ಬುತ ಅರ್ಧ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 222 ರನ್‌ಗಳನ್ನು ಗಳಿಸಿತು. ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪಡೆ 207 ರನ್‌ಗಳಿಗೆ ತನ್ನ ಹೋರಾಟವನ್ನು ಅಂತ್ಯಗೊಳಿಸಿದೆ.

ರಾಜಸ್ಥಾನ್ ರಾಯಲ್ಸ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮ ಹಂತದವರೆಗೂ ತನ್ನ ಹೋರಾಟವನ್ನು ಸಡಿಲಗೊಳಿಸಲಿಲ್ಲ. ಅಂತಿಮ ಓವರ್‌ನಲ್ಲಿ 36 ರನ್‌ಗಳಿಸುವ ಅಸಾಧ್ಯ ಗುರಿ ಮುಂದಿದ್ದರೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಪೋವೆಲ್ ಅಂತಿಮ ಓವರ್‌ನ ಆರಂಭಿಕ ಮೂರು ಎಸೆತಗಳನ್ನು ಭರ್ಜರಿಯಾಗಿ ಸಿಕ್ಸರ್‌ಗೆ ಅಟ್ಟಿದ್ದರು. ಹೀಗಾಗಿ ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಎಂಬ ಕುತೂಹಲ ಅಭಿಮಾನಿಗಳನ್ನು ಮೂಡಿತ್ತು. ಅಂತಿಮ ಮೂರು ಎಸೆತಗಳನ್ನು ಉತ್ತಮವಾಗಿ ಮಾಡಿದ ಆರ್ಆರ್ ವೇಗಿ ಒಬೆಡ್ ಮೆಕ್‌ಕಾಯ್ ಮೂರು ಎಸೆತಗಳಲ್ಲಿ ಕೂಡ ನಿಯಂತ್ರಣ ಸಾಧಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ಸಾಧಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್
ಬೆಂಚ್: ಮನ್‌ದೀಪ್ ಸಿಂಗ್, ಶ್ರೀಕರ್ ಭರತ್, ಲುಂಗಿ ಎನ್‌ಗಿಡಿ, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಅನ್ರಿಚ್ ನೋರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಕರುಣ್ ನಾಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಾಲ್
ಬೆಂಚ್: ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಡೆರಿಲ್ ಮಿಚೆಲ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+

Click it and Unblock the Notifications