DC vs RR Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

ಈ ಬಾರಿಯ ಐಪಿಎಲ್‌ನ 34ನೇ ಪಂದ್ಯ ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮಧ್ಯೆ ನಡೆಯಲಿದೆ. ಆರಂಭಿಕ ಪಂದ್ಯಗಳಲ್ಲಿ ಸಾಧಾರಣ ಪ್ರದರ್ಶನ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟೂರ್ನಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡ ಅದ್ಭುತ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿದೆ. ಅದರಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸಾಧಿಸಿದ ಗೆಲುವು ತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.
ರಾಜಸ್ಥಾನ್ ರಾಯಲ್ಸ್ ತಂಡ ಆಡಿದ 6 ಪಂದ್ಯಗಳಲ್ಲಿ 4 ಗೆಲುವುಗಳನ್ನು ಸಾಧಿಸಿದೆ. ಈ ಮೂಲಕ 8 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಅದ್ಭುತ ಫಾರ್ಮ್‌ನಲ್ಲಿದ್ದು ಟೂರ್ನಿಯಲ್ಲಿ ಅಮೋಘ ಪ್ರದರ್ಶನದ ಮೂಲಕ ಮಿಂಚುತ್ತಿದ್ದಾರೆ. ಈಗಾಗಲೇ ಎರಡು ಶತಕಗಳು ಬಟ್ಲರ್ ಬ್ಯಾಟ್‌ನಿಂದ ಸಿಡಿದಿದೆ. ಇನ್ನು ಬೌಲಿಂಗ್‌ನಲ್ಲಿಯೂ ಸಂಜು ಸ್ಯಾಮ್ಸನ್ ಬಳಗ ಅತ್ಯುತ್ತಮ ಫಾರ್ಮ್‌ನಲ್ಲಿದೆ. ಯಜುವೇಂದ್ರ ಚಾಹಲ್ ಕಳೆದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಸಹಿತ 5 ವಿಕೆಟ್‌ಗಳನ್ನು ಕಬಳಿಸಿದ್ದು ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿದ್ದಾರೆ.
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಅಗ್ರ ಕ್ರಮಾಂಕದ ಆಟಗಾರರಾದ ಡೇವಿಡ್ ವಾರ್ನರ್, ಪೃಥ್ವಿ ಶಾ ಕೂಡ ಉತ್ತಮ ಫಾರ್ಮ್‌ನಲ್ಲಿದ್ದು ತಂಡದ ಆತ್ಮ ವಿಶ್ವಾಸ ಹೆಚ್ಚಿಸಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲಿಂಗ್ ವಿಭಾಗದಿಂದಲೂ ಸಂಘಟಿತ ಪ್ರದರ್ಶನ ಬಂದಿರುವುದು ಗಮನಾರ್ಹ ಅಂಶವಾಗಿದೆ.

ಸ್ಕ್ವಾಡ್‌ಗಳು
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶ್ರೀಕರ್, ಭರತ್ ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ
ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 22 ರಂದು ಶುಕ್ರವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್‌ಆರ್ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ದೊಡ್ಡ ಮೊತ್ತವನ್ನು ಇಲ್ಲಿ ನಿರೀಕ್ಷಿಸಲಾಗುತ್ತಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಇನ್ನು ಇಬ್ಬನಿ ಈ ಪಂದ್ಯದಲ್ಲಿಯೂ ಹೆಚ್ಚಿನ ಪರಿಣಾಮವನ್ನು ಬೀರಬಹುದು

ಸಂಭಾವ್ಯ ಆಡುವ ಬಳಗ
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಸರ್ಫರಾಜ್ ಖಾನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಕರುಣ್ ನಾಯರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications