
ಇಂಡಿಯನ್ ಪ್ರೀಮಿಯರ್ ಲೀಗ್‌ನ 15ನೇ ಆವೃತ್ತಿಯ 50ನೇ ಪಂದ್ಯ ಮುಕ್ತಾಯವಾಗಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ ತಂಡ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿಯೂ ಮೇಲುಗೈ ಸಾಧಿಸಿದೆ.
ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದರೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಡೇವಿಡ್ ವಾರ್ನರ್ ಹಾಗೂ ರೋವ್ಮನ್ ಪೋವೆಲ್ ಅವರ ಸ್ಪೋಟಕ ಬ್ಯಾಟಿಂಗ್‌ನ ಕಾರಣದಿಂದಾಗಿ ಬೃಹತ್ ಮೊತ್ತವನ್ನು ಕಲೆಹಾಕಿತು ಡೆಲ್ಲಿ ಕ್ಯಾಪಿಟಲ್ಸ್. ಈ ಮೊತ್ತವನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಒಂದು ಹಂತದಲ್ಲಿ ಉತ್ತಮ ಪ್ರತಿರೋಧವೊಡ್ಡುವ ಸೂಚನೆ ನೀಡಿತಾದರೂ ಅದು ಯಶಸ್ವುಯಾಗಲಿಲ್ಲ. ಹೀಗಾಗಿ 21 ರನ್‌ಗಳ ಅಂತರದಿಂದ ಸೋಲು ಅನುಭವಿಸಿದೆ.
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ದಾಳಿಯನ್ನು ಪುಡಿಗಟ್ಟಿತು. ಹೀಗಾಗಿ 208 ರನ್‌ಗಳ ಬೃಹತ್ ಗುರಿಯನ್ನು ನಿಗದಿಪಡಿಸುವಲ್ಲಿ ಯಶಸ್ವಿಯಾಯಿತು. ಡೇವಿಡ್ ವಾರ್ನರ್ ಹಾಗೂ ರೋವ್ಮನ್ ಅಬ್ಬರದ ಮುಂದೆ ಎಸ್‌ಆರ್‌ಹೆಚ್ ಬೌಲರ್‌ಗಳ ಆಟ ನಡೆಯಲಿಲ್ಲ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭಿಕ ಆಘಾತವನ್ನು ಅನುಭವಿಸಿತು. ಮಂದೀಪ್ ಸಿಂಗ್ ಹಾಗೂ ಮಿಚೆಲ್ ಮಾರ್ಶ್ ಕನಿಷ್ಠ ಮೊತ್ತಕ್ಕೆ ವಿಕೆಟ್ ಕಳೆದುಕೊಂಡರು. ರಿಷಬ್ ಪಂತ್ ಕೂಡ 26 ರನ್‌ಗಳಿಗೆ ತಮ್ಮ ಇನ್ನಿಂಗ್ಸ್ ಮುಕ್ತಾಯಗೊಳಿಸಿದರು. ಆದರೆ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಹಾಗೂ ರೋವ್ಮನ್ ಪೋವೆಲ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಮುರಿಯದ ನಾಲ್ಕನೇ ವಿಕೆಟ್‌ಗೆ ಈ ಜೋಡಿ ಭರ್ಜರಿ 122 ರನ್‌ಗಳ ಜೊತೆಯಾಟವನ್ನು ನೀಡಿದ್ದಾರೆ. ಈ ಕಾರಣದಿಂದಾಗಿ ನಿಗದಿತ 20 ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ 3 ವಿಕೆಟ್ ಕಳೆದುಕೊಂಡು 207 ರನ್‌ಗಳಿಸಿತು.
ಈ ಸ್ಕೋರ್ ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆರಂಭಿಕ ಆಟಗಾರರಿಬ್ಬರು ಬೇಗನೆ ವಿಕೆಟ್ ಕಳೆದುಕೊಂಡರು. ರಾಹಿಲ್ ತ್ರಿಪಾಠಿ 22 ರನ್‌ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆದರೆ ಐಡೆನ್ ಮಾರ್ಕ್ರಮ್ ಹಾಗೂ ನಿಕೋಲಸ್ ಪೂರನ್ ಎಸ್‌ಆರ್‌ಹೆಚ್ ತಂಡಕ್ಕೆ ಆಸರೆಯಾದರು. ಮಾರ್ಕ್ರಮ್ 42 ರನ್‌ಗಳ ಕೊಡುಗೆ ನೀಡಿದ ಬಳಿಕ ವಿಕೆಟ್ ಕಳೆದುಕೊಂಡ ನಂತರ ಪೂರನ್ ಕೆಲ ಕಾಲ ಅದ್ಭುತ ಹೋರಾಟ ನೀಡಿದರು. 34 ಎಸೆತ ಎದುರಿಸಿದ ಪೂರನ್ 62 ರನ್‌ಗಳ ಕೊಡುಗೆ ನೀಡಿದ್ದಾರೆ. ಆದರೆ ಪೂರನ್‌ಗೆ ಮತ್ತೊಂದು ತುದಿಯಲ್ಲಿ ಬೆಂಬಲ ದೊರೆಯದ ಕಾರಣದಿಂದಾಗಿ ಎಸ್‌ಆರ್‌ಹೆಚ್ ಶರಣಾಯಿತು.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಮನ್‌ದೀಪ್ ಸಿಂಗ್, ಮಿಚೆಲ್ ಮಾರ್ಷ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಲಲಿತ್ ಯಾದವ್, ರೋವ್‌ಮನ್ ಪೊವೆಲ್, ರಿಪಾಲ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಜೆ
ಬೆಂಚ್: ಪೃಥ್ವಿ ಶಾ, ಅಕ್ಸರ್ ಪಟೇಲ್, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ, ಶ್ರೀಕರ್ ಭರತ್, ಸರ್ಫರಾಜ್ ಖಾನ್, ಟಿಮ್ ಸೀಫರ್ಟ್, ಲುಂಗಿ ಎನ್‌ಗಿಡಿ, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಯಶ್ ಧುಲ್, ವಿಕ್ಕಿ ಓಸ್ತ್ವಾಲ್
ಡೆಲ್ಲಿ ಕ್ಯಾಪಿಟಲ್ಸ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಶ್ರೇಯಸ್ ಗೋಪಾಲ್, ಭುವನೇಶ್ವರ್ ಕುಮಾರ್, ಸೀನ್ ಅಬಾಟ್, ಕಾರ್ತಿಕ್ ತ್ಯಾಗಿ, ಉಮ್ರಾನ್ ಮಲಿಕ್
ಬೆಂಚ್: ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಟಿ ನಟರಾಜನ್, ರವಿಕುಮಾರ್ ಸಮರ್ಥ್, ಜಗದೀಶ ಸುಚಿತ್, ಗ್ಲೆನ್ ಫಿಲಿಪ್ಸ್, ವಿಷ್ಣು ವಿನೋದ್, ಪ್ರಿಯಾಂ ಗಾರ್ಗ್, ರೊಮಾರಿಯೋ ಶೆಫರ್ಡ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ಸೌರಭ್ ದುಬೆ