For Quick Alerts
ALLOW NOTIFICATIONS  
For Daily Alerts
 

DC vs SRH Preview : ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ತಂಡ

IPL 2022: DC vs SRH Preview, Predicted Playing XI, Pitch Report and Weather Forecast

ಇಂಡಿಯನ್ ಪ್ರೀಮಿಯರ್ ಲೀಗ್‌ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಸತತ ಪಂದ್ಯಗಳಲ್ಲಿ ಗೆದ್ದು ಮಿಂಚಿದ್ದ ಸನ್‌ರೈಸರ್ಸ್ ಹೈದರಾಬಾದ್ ನಂತರ ಮತ್ತೆ ಸತತ ಸೋಲಿನ ರುಚಿ ಅನುಭವಿಸಿದೆ. ಹೀಗಾಗಿ ಮತ್ತೆ ಗೆಲುವಿನ ಲಯಕ್ಕೆ ಮರಳಲು ಎಸ್‌ಆರ್‌ಹೆಚ್ ತಂಡ ಪ್ರಯತ್ನಿಸಲಿದೆ. ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಕಲ್ಸ್ ಕೂಡ ಈ ಬಾರಿ ಅಸ್ಥಿರ ಪ್ರದರ್ಶನ ನಿಡುತ್ತಿದ್ದು ಪ್ಲೇಆಫ್ ಸ್ಪರ್ಧೆಯನ್ನು ಮುಂದುವರಿಯಲು ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಅಗತ್ಯವಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿಯ ಟೂರ್ನಿಯಲ್ಲಿ ಆಡಿರುವ 9 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದ್ದರೆ 4 ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಎಸ್‌ಆರ್‌ಹೆಚ್ 4ನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ 9 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿದ್ದು ಐದು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಸಂಪೂರ್ಣ ಸ್ಕ್ವಾಡ್: ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶ್ರೀಕರ್, ಭರತ್ ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್

ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕರಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮೇ 5 ರಂದು ಗುರುವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್‌ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ತಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿಮ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ.

IPL 2022: DC vs SRH Preview, Predicted Playing XI, Pitch Report and Weather Forecast

ಸಂಭಾವ್ಯ ಆಡುವ ಬಳಗ: ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಶಾಂಕ್ ಸಿಂಗ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್

Story first published: Wednesday, May 4, 2022, 21:31 [IST]
Other articles published on May 4, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+