ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

DC vs PBKS: ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ದಾಳಿಗೆ ತತ್ತರಿಸಿ ಸೋತ ಪಂಜಾಬ್; ನಾಲ್ಕನೇ ಸ್ಥಾನಕ್ಕೇರಿದ ಡೆಲ್ಲಿ

IPL 2022: Delhi Capitals beats Punjab Kings by 17 runs and climbed to 4th spot in points table

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 17 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿ, ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿ ತನ್ನ ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ಸುಗಮವಾಗಿಸಿಕೊಂಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಪಂಜಾಬ್ ಕಿಂಗ್ಸ್ ತಂಡಕ್ಕೆ 160 ರನ್‌ಗಳ ಗುರಿಯನ್ನು ನೀಡಿತು. ಇನ್ನು ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 142 ರನ್ ಕಲೆಹಾಕಿತು.

ಇನ್ನು ಈ ಪಂದ್ಯಕ್ಕೂ ಮುನ್ನ ಎರಡೂ ತಂಡಗಳೂ ಸಹ ಸರಿಸಮನಾದ ಅಂಕಗಳನ್ನು ( 12 ) ಪಡೆದುಕೊಂಡಿದ್ದ ಕಾರಣ ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ನಾಲ್ಕನೇ ಸ್ಥಾನಕ್ಕೇರಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳುವ ಅವಕಾಶವಿತ್ತು. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ 14 ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನಕ್ಕೆ ಏರಿದ್ದು, ಟೂರ್ನಿಯಲ್ಲಿ ಉಳಿದಿರುವ ತನ್ನ ಇನ್ನೊಂದು ಲೀಗ್ ಪಂದ್ಯದಲ್ಲಿ ಗೆದ್ದರೆ ಯಾವ ತಂಡದ ಮೇಲೂ ಅವಲಂಬಿತವಾಗದೇ ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಡಲಿದೆ.

IPL 2022: ಟೂರ್ನಿಯಲ್ಲಿ ಮಿಂಚುತ್ತಿರುವ ಈ ಮೂವರಲ್ಲೊಬ್ಬರು ರೋಹಿತ್ ನಂತರ ಭಾರತದ ನಾಯಕನಾಗುವುದು ಪಕ್ಕಾ!IPL 2022: ಟೂರ್ನಿಯಲ್ಲಿ ಮಿಂಚುತ್ತಿರುವ ಈ ಮೂವರಲ್ಲೊಬ್ಬರು ರೋಹಿತ್ ನಂತರ ಭಾರತದ ನಾಯಕನಾಗುವುದು ಪಕ್ಕಾ!

ಇನ್ನು ಈ ಪಂದ್ಯದ ಫಲಿತಾಂಶ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಪರಿಣಾಮವನ್ನು ಬೀರಿದ್ದು, ನಾಲ್ಕನೇ ಸ್ಥಾನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್:

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಲಿವಿಂಗ್ ಸ್ಟನ್ ಎಸೆದ ಮೊದಲ ಎಸೆತಕ್ಕೆ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕೌಟ್ ಆದರು. ಡೇವಿಡ್ ವಾರ್ನರ್ ಜತೆ ಆರಂಭಿಕನಾಗಿ ಕಣಕ್ಕಿಳಿದ ಮತ್ತೋರ್ವ ಆಟಗಾರ ಸರ್ಫಾರಾಜ್ ಖಾನ್ 16 ಎಸೆತಗಳಲ್ಲಿ 32 ರನ್ ಬಾರಿಸಿದರು. ಡೇವಿಡ್ ವಾರ್ನರ್ ವಿಕೆಟ್ ಬೀಳುತ್ತಿದ್ದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಿಚೆಲ್ ಮಾರ್ಷ್ 48 ಎಸೆತಗಳಲ್ಲಿ 63 ರನ್ ಬಾರಿಸಿ ಆರಂಭಿಕ ಆಘಾತ ಅನುಭವಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸರೆಯಾದರು. ಇನ್ನುಳಿದಂತೆ ಲಲಿತ್ ಯಾದವ್ 24 ರನ್, ರಿಷಭ್ ಪಂತ್ 7 ರನ್, ರೋವ್ಮನ್ ಪೊವೆಲ್ 2 ರನ್, ಶಾರ್ದೂಲ್ ಠಾಕೂರ್ 3 ರನ್, ಅಕ್ಷರ್ ಪಟೇಲ್ ಅಜೇಯ 17 ರನ್ ಮತ್ತು ಕುಲದೀಪ್ ಯಾದವ್ ಅಜೇಯ 2 ರನ್ ಕಲೆಹಾಕಿದರು.

ಪಂಜಾಬ್ ಕಿಂಗ್ಸ್ ತಂಡದ ಪರ ಲಿಯಾಮ್ ಲಿವಿಂಗ್ ಸ್ಟನ್ ಮತ್ತು ಅರ್ಷದೀಪ್ ಸಿಂಗ್ ತಲಾ 3 ವಿಕೆಟ್ ಪಡೆದರೆ, ಕಗಿಸೋ ರಬಾಡ 1 ವಿಕೆಟ್ ಪಡೆದರು.

ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್:
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಪಂಜಾಬ್ ಕಿಂಗ್ಸ್ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಜಾನಿ ಬೈರ್ ಸ್ಟೋವ್ 28 ಮತ್ತು ಶಿಖರ್ ಧವನ್ 19 ರನ್ ಗಳಿಸಿದರೆ, ನಂತರ ಕಣಕ್ಕಿಳಿದ ಭಾನುಕ ರಾಜಪಕ್ಸ 4 ರನ್, ಲಿಯಾಮ್ ಲಿವಿಂಗ್ ಸ್ಟನ್ 3 ರನ್ ಮತ್ತು ಮಯಾಂಕ್ ಅಗರ್ವಾಲ್ ಶೂನ್ಯ ಸುತ್ತಿ ಮುಗ್ಗರಿಸಿದರು. ಹೀಗೆ ಪಂಜಾಬ್ ಕಿಂಗ್ಸ್ ಸಾಲುಸಾಲು ವಿಕೆಟ್ ಕಳೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜಿತೇಶ್ ಶರ್ಮಾ 34 ಎಸೆತಗಳಲ್ಲಿ 44 ರನ್ ಕಲೆಹಾಕಿ ತಂಡಕ್ಕೆ ಕೆಲಕಾಲ ಗೆಲುವಿನ ಭರವಸೆಯನ್ನು ಹುಟ್ಟುಹಾಕಿದ್ದರು. ಇನ್ನುಳಿದಂತೆ ಹರ್ ಪ್ರೀತ್ ಬ್ರಾರ್ 1 ರನ್, ರಿಷಿ ಧವನ್ 4 ರನ್, ಕಗಿಸೋ ರಬಾಡ 6 ರನ್, ರಾಹುಲ್‌ ಚಹರ್ ಅಜೇಯ 25 ರನ್ ಮತ್ತು ಅರ್ಷದೀಪ್ ಸಿಂಗ್ ಅಜೇಯ 2 ರನ್ ಕಲೆಹಾಕಿದರು.

Breaking News: ಅಜಿಂಕ್ಯ ರಹಾನೆಗೆ ಗಾಯ, ಐಪಿಎಲ್‌ 2022ನಿಂದ ಔಟ್Breaking News: ಅಜಿಂಕ್ಯ ರಹಾನೆಗೆ ಗಾಯ, ಐಪಿಎಲ್‌ 2022ನಿಂದ ಔಟ್

ಹೀಗೆ ಪಂಜಾಬ್ ಕಿಂಗ್ಸ್ ತಂಡದ ಪರ ಜಿತೇಶ್ ಶರ್ಮಾ ಬಿಟ್ಟರೆ ಉಳಿದ ಯಾವುದೇ ಆಟಗಾರ ಕೂಡ 30 ರನ್ ಗಡಿ ದಾಟದ ಕಾರಣ ಮಹತ್ವದ ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ.

ಜಿತೇಂದ್ರ ಶರ್ಮಾ ಇದ್ದಿದ್ರೆ ಗೆಲುವು ನಮ್ಮದೆ! | Oneindia Kannada

ಡೆಲ್ಲಿ ಕ್ಯಾಪಿಟಲ್ಸ್ ಪರ ಶಾರ್ದೂಲ್ ಠಾಕೂರ್ 4 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಮತ್ತು ಅನ್ರಿಚ್ ನಾರ್ಕಿಯಾ ಒಂದು ವಿಕೆಟ್ ಪಡೆದರು.

Story first published: Tuesday, May 17, 2022, 9:24 [IST]
Other articles published on May 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X