ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ ಕಹಿ ಸುದ್ದಿ; ಆಸಿಸ್ ಆಟಗಾರ ಮತ್ತಷ್ಟು ಪಂದ್ಯಗಳಿಗೆ ಅಲಭ್ಯ!

IPL 2022: Delhi Capitals in trouble, star cricketer Mitchell Marsh will miss out 3-4 more matches for DC

ಈ ಬಾರಿಯ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಟಿಲ್ಸ್ ತಂಡ ಸಾಧಾರಣ ಆರಂಭವನ್ನು ಪಡೆದುಕೊಂಡಿದ್ದು ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ಗೆಲುವು ಎರಡು ಸೋಲು ಅನುಭವಿಸಿದೆ. ಟೂರ್ನಿ ಮತ್ತಷ್ಟು ರೋಚಕತೆಯನ್ನು ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ವೇಗ ಹೆಚ್ಚಿಸಿಕೊಳ್ಳಲು ಯೋಜನೆ ರೂಪಿಸಿಕೊಳ್ಳುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈ ಹಂತದಲ್ಲಿ ಹಿನ್ನಡೆಯುಂಟಾಗಿದೆ. ಗಾಯದ ಕಾರಣದಿಂದಾಗಿ ತಡವಾಗಿ ತಂಡವನ್ನು ಸೇರ್ಪಡೆಗೊಳ್ಳುವ ನಿರೀಕ್ಷೆಯಿದ್ದ ಆಸಿಸ್ ಆಟಗಾರ ಮತ್ತಷ್ಟು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಲಭ್ಯವಾಗುವುದು ಮತ್ತಷ್ಟು ತಡವಾಗಲಿದೆ.

ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಮಿಚೆಲ್ ಮಾರ್ಶ್ ಇನ್ನೂ ಗಾಯದಿಂದ ಚೇತರಿಸಿಕೊಳ್ಳದಿರುವುದು ತಂಡಕ್ಕೆ ಹಿನ್ನಡೆಯಾಗಿದೆ. ಈ ಆಲ್‌ರೌಂಡರ್ ಕನಿಷ್ಠ ಮುಂದಿನ ಮೂರರಿಂದ ನಾಲ್ಕು ಪಂದ್ಯಗಳಿಗೆ ಅಲಭ್ಯವಾಗುವ ಸಾಧ್ಯತೆ ಹೆಚ್ಚಿದೆ. ಈ ಮೂಲಕ ಲೀಗ್ ಹಂತದ ಬಹುತೇಕ ಮೊದಲಾರ್ಧದ ಪಂದ್ಯಗಳಿಗೆ ಡೆಲ್ಲಿ ತಂಡಕ್ಕೆ ಲಭ್ಯವಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

IPL 2022: ಚೆನ್ನೈ ವಿರುದ್ಧ ಸೋತು ಅಂಕಟ್ಟಿಯಲ್ಲಿ ಕುಸಿದ ಆರ್‌ಸಿಬಿ; ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಚೆನ್ನೈ ಆಟಗಾರರದ್ದೇ ಅಬ್ಬರ!IPL 2022: ಚೆನ್ನೈ ವಿರುದ್ಧ ಸೋತು ಅಂಕಟ್ಟಿಯಲ್ಲಿ ಕುಸಿದ ಆರ್‌ಸಿಬಿ; ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಚೆನ್ನೈ ಆಟಗಾರರದ್ದೇ ಅಬ್ಬರ!

ಈ ಬಾರಿಯ ಐಪಿಎಲ್ ಟೂರ್ನಿಗೂ ಮುನ್ನ ನಡೆದ ಹರಾಜು ಪ್ರಕ್ರಿಯೆಯಲ್ಲಿ ಮಿಚೆಲ್ ಮಾರ್ಶ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 6.50 ಕೊಟಿ ನೀಡಿ ಖರೀದಿಸಿತ್ತು. ಆದರೆ ಐಪಿಎಲ್ ಟೂರ್ನಿಯ ಆರಂಭಕ್ಕೆ ಮುನ್ನ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದರು ಮಿಚೆಲ್ ಮಾರ್ಶ್. ಈ ಸರಣಿಯ ಸಂದರ್ಭದಲ್ಲಿ ಮಾರ್ಶ್ ಗಾಯಕ್ಕೆ ತುತ್ತಾಗಿದ್ದರು. ಆರಂಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಾರ್ಶ್ ಅವರ ಬದಲಿಗೆ ಬೇರೊಬ್ಬ ಆಟಗಾರನನ್ನು ಸೇರ್ಪಡೆಗೊಳಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಾರ್ಶ್ ಅವರ ಚೇತರಿಕೆಯನ್ನು ನಿರೀಕ್ಷಿಸುತ್ತಿರುವ ಡಿಸಿ ತಂಡ ಅವರ ಲಭ್ಯತೆಗಾಗಿ ಕಾಯುತ್ತಿದೆ.

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಏಪ್ರಿಲ್ 10ರಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ಮಿಚೆಲ್ ಮಾರ್ಶ್ ಲಭ್ಯವಾಗುವ ಸಾಧ್ಯತೆಯಿದೆ ಎಂದಿದ್ದರು. ಆದರೆ ಅದು ಅಸಾಧ್ಯವಾಗಿದೆ. ಮಾರ್ಶ್ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಮತ್ತಷ್ಟು ಕಾಲಾವಕಾಶದ ಅಗತ್ಯವಿರುವ ಕಾರಣ ಡಿಸಿ ತಂಡ ಹಿನ್ನಡೆಯನ್ನು ಅನುಭವಿಸುತ್ತಿದೆ. ಹೀಗಾಗಿ ಕನಿಷ್ಠ ಮೂರು ಪಂದ್ಯಗಳಿಂದ ಮಾರ್ಸ್ ಹೊರಗುಳಿಯಲಿದ್ದಾರೆ.

ಈ ಬಾರಿಯ ಟೂರ್ನಿಯಲ್ಲಿ ಡಿಸಿ ಮಿಶ್ರ ಫಲ ಕಂಡಿದೆ. ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿದ್ದರೂ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡದ ವಿರುದ್ಧಧ ಪಂದ್ಯದಲ್ಲಿ ಸೋಲು ಅನುಭವಿಸಿದೆ. ಹೀಗಾಗಿ ಮತ್ತಷ್ಟು ಗೆಲುವುಗಳು ತಂಡಕ್ಕೆ ಅಗತ್ಯವಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಮುಂದಿನ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡದ ವಿರುದ್ಧ ಆಡಲಿದೆ. ಏಪ್ರಿಲ್ 16 ಶನಿವಾರ ಈ ಪಂದ್ಯ ನಡೆಯಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಪಂದ್ಯಕ್ಕೆ ಕೂಡ ಮಿಚೆಲ್ ಮಾರ್ಶ್ ಅಲಭ್ಯವಾಗಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಲ್ಲೂ ಮಿಚೆಲ್ ಮಾರ್ಶ್ ಅಲಭ್ಯವಾಗಲಿದ್ದಾರೆ. ಏಪ್ರಿಲ್ 28ರಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ಮಿಚೆಲ್ ಮಾರ್ಶ್ ಲಭ್ಯವಾಗುವ ಸಾಧ್ಯತೆಗಳು ಇದೆ ಎನ್ನಲಾಗಿದೆ.

MI vs PBKS: ತನ್ನ ಮಾಜಿ ತಂಡ ಮುಂಬೈಗೆ ದೊಡ್ಡ ವಾರ್ನಿಂಗ್ ನೀಡಿದ ಸ್ಪಿನ್ನರ್ ರಾಹುಲ್ ಚಹರ್!MI vs PBKS: ತನ್ನ ಮಾಜಿ ತಂಡ ಮುಂಬೈಗೆ ದೊಡ್ಡ ವಾರ್ನಿಂಗ್ ನೀಡಿದ ಸ್ಪಿನ್ನರ್ ರಾಹುಲ್ ಚಹರ್!

Rohit Sharma ಅವರಿಗೆ ನಿನ್ನೆ ಪಂದ್ಯ ಸೋತಿದ್ದು ಹೇಗನ್ನಿಸಿತು | Oneindia Kannada

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶ್ರೀಕರ್, ಭರತ್ ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್

Story first published: Wednesday, April 13, 2022, 14:12 [IST]
Other articles published on Apr 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X