Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs KKR: ನಿತೀಶ್ ರಾಣಾ ಅರ್ಧಶತಕ; ಡೆಲ್ಲಿ ಕ್ಯಾಪಿಟಲ್ಸ್‌ಗೆ 147 ರನ್‌ಗಳ ಗುರಿ ನೀಡಿದ ಕೆಕೆಆರ್

IPL 2022: Delhi Capitals need 147 runs to win against Kolkata Knight Riders

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 41ನೇ ಪಂದ್ಯ ಇಂದು ( ಏಪ್ರಿಲ್ 28 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.

ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 9 ವಿಕೆಟ್ ನಷ್ಟಕ್ಕೆ 146 ರನ್‌ ಗಳಿಸಿದ್ದು, ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 147 ರನ್‌ಗಳ ಗುರಿಯನ್ನು ನೀಡಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ 7.3 ಓವರ್‌ಗಳಲ್ಲಿ 35 ರನ್‌ಗಳಿಗೆ ತನ್ನ ಮೊದಲ 4 ವಿಕೆಟ್‍ಗಳನ್ನು ಕಳೆದುಕೊಂಡು ಆರಂಭಿಕ ಆಘಾತವನ್ನು ಅನುಭವಿಸಿತು. ಆರನ್ ಫಿಂಚ್ 3 ರನ್, ವೆಂಕಟೇಶ್ ಐಯ್ಯರ್ 6 ರನ್, ಸುನಿಲ್ ನರೈನ್ ಗೋಲ್ಡನ್ ಡಕ್ ಔಟ್ ಮತ್ತು ಬಾಬಾ ಇಂದ್ರಜಿತ್ 6 ರನ್ ಗಳಿಸಿ ಔಟ್ ಆದರು. ಹೀಗೆ ಒಂದೆಡೆ ವಿಕೆಟ್‍ಗಳು ಉರುಳುತ್ತಿದ್ದರೆ, ಮತ್ತೊಂದೆಡೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಂಡದ ನಾಯಕ ಶ್ರೇಯಸ್ ಐಯ್ಯರ್ 37 ಎಸೆತಗಳಲ್ಲಿ 42 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಇನ್ನುಳಿದಂತೆ ಆ್ಯಂಡ್ರೆ ರಸೆಲ್ ಡಕ್ ಔಟ್ ಆದರೆ, ಟಿಮ್ ಸೌಥಿ ಹಾಗೂ ಹರ್ಷಿತ್ ರಾಣಾ ಇಬ್ಬರೂ ಸಹ ಗೋಲ್ಡನ್ ಡಕ್ ಔಟ್ ಆದರು.

ಇನ್ನು ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ 34 ಎಸೆತಗಳಲ್ಲಿ 57 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ನಿತೀಶ್ ರಾಣಾರ ಈ ಉತ್ತಮ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಕೂಡ ಇದ್ದವು. ಡೆಲ್ಲಿ ಕ್ಯಾಪಿಟಲ್ಸ್ ಪರ 3 ಓವರ್ ಬೌಲಿಂಗ್ ಮಾಡಿ ಕೇವಲ 14 ರನ್ ನೀಡಿದ ಕುಲದೀಪ್ ಯಾದವ್ 4 ವಿಕೆಟ್ ಪಡೆದು ಮಿಂಚಿದರು. ನೆಲಕಚ್ಚಿ ನಿಂತಿದ್ದ ಎದುರಾಳಿ ತಂಡದ ನಾಯಕನ ವಿಕೆಟ್ ಪಡೆದ ಕುಲದೀಪ್ ಯಾದವ್ ಇನ್ನುಳಿದ ಪ್ರಮುಖ ಆಟಗಾರರಾದ ಸುನಿಲ್ ನರೇನ್, ಆ್ಯಂಡ್ರೆ ರಸೆಲ್ ಹಾಗೂ ಬಾಬಾ ಇಂದ್ರಜಿತ್ ಅವರ ವಿಕೆಟ್‍ಗಳನ್ನು ಪಡೆದು ಕೋಲ್ಕತಾ ನೈಟ್ ರೈಡರ್ಸ್ ತಂಡ ಒತ್ತಡಕ್ಕೆ ಒಳಗಾಗುವಂತೆ ಮಾಡಿದರು. ಇನ್ನುಳಿದಂತೆ ಮುಸ್ತಫಿಜರ್ ರಹಮಾನ್ 3 ವಿಕೆಟ್ ಪಡೆದರೆ, ಚೇತನ್ ಸಕಾರಿಯಾ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ ( ವಿಕೆಟ್ ಕೀಪರ್/ನಾಯಕ), ಲಲಿತ್ ಯಾದವ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ

ಕೋಲ್ಕತಾ ನೈಟ್ ರೈಡರ್ಸ್ ಆಡುವ ಬಳಗ: ಆರೋನ್ ಫಿಂಚ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್, ಬಾಬಾ ಇಂದರ್‌ಜಿತ್(ವಿಕೆಟ್ ಕೀಪರ್), ರಿಂಕು ಸಿಂಗ್, ಆಂಡ್ರೆ ರಸೆಲ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ

Story first published: Thursday, April 28, 2022, 23:43 [IST]
Other articles published on Apr 28, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+