For Quick Alerts
ALLOW NOTIFICATIONS  
For Daily Alerts
 

RR vs DC: ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಲು 161 ರನ್‌ಗಳ ಗುರಿ ನೀಡಿದ ಆರ್‌ಆರ್

IPL 2022: Delhi Capitals Needs 161 Runs To Win Against Rajasthan Royals

ಸದ್ಯ ನಡೆಯುತ್ತಿರುವ 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ ಟೂರ್ನಿಯ 58ನೇ ಪಂದ್ಯದಲ್ಲಿ ಇಂದು (ಮೇ 11) ಮುಂಬೈನ ಡಾ. ಡಿವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿವೆ.

ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳ ನಡುವೆ ನಡೆಯಲಿರುವ ಎರಡನೇ ಪಂದ್ಯವಾಗಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡರು. ಹೀಗಾಗಿ ಎದುರಾಳಿ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡುವಂತಾಯಿತು.

ಮೊದಲು ಬ್ಯಾಟಿಂಗ್ ಮಾಡಿರುವ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಕಲೆಹಾಕಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಲು 161 ರನ್‌ಗಳ ಟಾರ್ಗೆಟ್ ನೀಡಿದೆ.

IPL 2022: Delhi Capitals Needs 161 Runs To Win Against Rajasthan Royals

ರಾಜಸ್ಥಾನ ರಾಯಲ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ಜಾಸ್ ಬಟ್ಲರ್ ಮೊದಲ ವಿಕೆಟ್‌ಗೆ ಉತ್ತಮ ಮೊತ್ತ ಕಲೆ ಹಾಕುವಲ್ಲಿ ಎಡವಿದರು. 2.5 ಓವರ್‌ಗಳಾಗಿದ್ದಾಗ ಜಾಸ್ ಬಟ್ಲರ್ 11 ಎಸೆತಗಳಲ್ಲಿ 7 ರನ್ ಬಾರಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದ ಆರ್. ಅಶ್ವಿನ್ 38 ಎಸೆತಗಳಲ್ಲಿ 50 ರನ್ ಕಲೆ ಹಾಕಿ ಔಟಾದರು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 19 ಎಸೆತಗಳಲ್ಲಿ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನುಳಿದಂತೆ ತಂಡದ ನಾಯಕ ಸಂಜು ಸ್ಯಾಮ್ಸನ್ 6 ರನ್ ಗಳಿಸಿ ಔಟಾದರೆ, ರಿಯಾನ್ ಪರಾಗ್ 5 ಎಸೆತಗಳಲ್ಲಿ 9 ರನ್ ಗಳಿಸಿ ಚೇತನ್ ಸಕರಿಯಾಗೆ ವಿಕೆಟ್ ಒಪ್ಪಿಸಿದರು. ದೇವದತ್ ಪಡಿಕ್ಕಲ್ 30 ಎಸೆತಗಳಲ್ಲಿ 48 ರನ್ ಗಳಿಸಿ ಔಟಾದರೆ, ರಸ್ಸೆ ವಾನ್ ಡೆರ್ ಡಸ್ಸೆನ್ 10 ಎಸೆತಗಳಲ್ಲಿ 12 ರನ್ ಗಳಿಸಿ ಅಜೇಯರಾಗುಳಿದರು.

ಹೀಗೆ ರಾಜಸ್ಥಾನ ರಾಯಲ್ಸ್ ತಂಡದ ಪರ ದೇವದತ್ ಪಡಿಕ್ಕಲ್, ಆರ್. ಅಶ್ವಿನ್ ಮತ್ತು ಯಶಸ್ವಿ ಜೈಸ್ವಾಲ್ ಹೊರತುಪಡಿಸಿ ಉಳಿದ ಯಾವುದೇ ಆಟಗಾರರು ಸಹ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾದರು.

IPL 2022: Delhi Capitals Needs 161 Runs To Win Against Rajasthan Royals

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಬೌಲರ್ ಅನ್ರಿಚ್ ನಾರ್ಟ್ಜೆ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 39 ರನ್ ನೀಡಿ 2 ವಿಕೆಟ್ ಪಡೆದರು. ಇನ್ನುಳಿದಂತೆ ಚೇತನ್ ಸಕರಿಯಾ, ಮಿಚೆಲ್ ಮಾರ್ಷ್ ಕೂಡ ತಲಾ ಎರಡು ವಿಕೆಟ್ ಪಡೆದಿದ್ದಾರೆ.

ಶಾರ್ಕ್‌ ದಾಳಿ ವಿಚಾರದಲ್ಲಿ ವಿವಾದ‌ ಮೈಮೇಲೆ‌ ಎಳೆದುಕೊಂಡ ಕಿರಣ್ ಬೇಡಿ | Oneindia Kannada

11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗಾಗಿ ಪ್ಲೇಆಫ್ ಪ್ರವೇಶಿಸಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಅದರಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ.

Story first published: Wednesday, May 11, 2022, 21:30 [IST]
Other articles published on May 11, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+