IPL 2022: ನೆಮ್ಮದಿಯ ನಿಟ್ಟುಸಿರು ಬಿಟ್ಟ ಡೆಲ್ಲಿ ಕ್ಯಾಪಿಟಲ್ಸ್; ಹಲವು ಆಟಗಾರರ ಕೊವಿಡ್ ವರದಿ ನೆಗೆಟಿವ್

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಕಳೆದ ಬಾರಿಯ ಐಪಿಎಲ್ ಟೂರ್ನಿಯ ಹಾಗೆ ಕೆಲ ಆಟಗಾರರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಹೌದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರಾದ ಮಿಚೆಲ್ ಮಾರ್ಷ್ ಮತ್ತು ಟಿಮ್ ಸೈಫರ್ಟ್ ಅವರ ಕೊರೋನಾ ವರದಿ ಪಾಸಿಟಿವ್ ಬಂದಿತ್ತು. ಇನ್ನು ಈ ಆಟಗಾರರ ಸಂಪರ್ಕದಲ್ಲಿದ್ದ ತಂಡದ ಇತರೆ 4 ಆಟಗಾರರನ್ನೂ ಸಹ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಈ ಆಟಗಾರರಿಗೆ ಇತ್ತೀಚಿಗಷ್ಟೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇಂದು ( ಏಪ್ರಿಲ್ 21 ) ಬೆಳಿಗ್ಗೆ ನಡೆಸಿದ ಪರೀಕ್ಷೆಯಲ್ಲಿ ಮಿಚೆಲ್ ಮಾರ್ಷ್ ಮತ್ತು ಟಿಮ್ ಸೈಫರ್ಟ್ ಹೊರತುಪಡಿಸಿ ಉಳಿದ ಆಟಗಾರರ ವರದಿ ನೆಗೆಟಿವ್ ಬಂದಿದೆ. ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಾಳೆ ನಡೆಯಲಿರುವ ಪಂದ್ಯದಲ್ಲಿ ಸೆಣಸಾಡುವ ಕಾರಣದಿಂದಾಗಿ ಪರೀಕ್ಷೆಯನ್ನು ವೇಗವಾಗಿ ನಡೆಸಲಾಗಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಈ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಪ್ರಯಾಣವನ್ನು ನಿಯಂತ್ರಿಸುವ ಸಲುವಾಗಿ ಈ ಪಂದ್ಯವನ್ನು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಅಷ್ಟೇ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ ಕೊನೆಯ ಪಂದ್ಯ ಕೂಡ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಿಂದ ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣಕ್ಕೆ ಇದೇ ಕಾರಣಕ್ಕಾಗಿ ಸ್ಥಳಾಂತರಿಸಲ್ಪಟ್ಟಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications