
ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ ೨೬ರಿಂದ ಆರಂಭವಾಗಲಿದ್ದು ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯ ಮೊದಲನೇ ದಿನ ಕೇವಲ ಒಂದು ಪಂದ್ಯ ಮಾತ್ರ ನಡೆಯಲಿದ್ದು ಎರಡನೇ ದಿನ ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಹೌದು, ಮಾರ್ಚ್ 27ರ ಭಾನುವಾರದಂದು ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಮಧ್ಯಾಹ್ನ 3.30ಕ್ಕೆ ನಡೆದರೆ, ಅದೇ ದಿನ ಸಂಜೆ 7.30ಕ್ಕೆ ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯ ನಡೆಯಲಿದೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಟ್ಟು ೧೨ ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, ಲೀಗ್ ಹಂತದ ಒಟ್ಟು 70 ಪಂದ್ಯಗಳು 58 ದಿನಗಳಲ್ಲಿ ನಡೆಯಲಿವೆ.
ಇನ್ನು ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕ್ವಾಲಿಫೈಯರ್ ಸುತ್ತಿಗೆ ಯಶಸ್ವಿಯಾಗಿ ಪ್ರವೇಶಿಸಿದ್ದ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕ್ವಾಲಿಫೈಯರ್ ಸುತ್ತಿನ ಎರಡೂ ಪಂದ್ಯಗಳಲ್ಲಿಯೂ ಸೋಲುವುದರ ಮೂಲಕ ಫೈನಲ್ ಪ್ರವೇಶಿಸುವ ಅವಕಾಶವನ್ನು ಕೈತಪ್ಪಿಸಿಕೊಂಡಿತ್ತು. ಇನ್ನು ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ನಂತರ ಸಾಕಷ್ಟು ಬದಲಾವಣೆಗಳಿಗೆ ಒಳಗಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ಮಾರ್ಚ್ 27ರ ಭಾನುವಾರದಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಟೂರ್ನಿಯಲ್ಲಿ ತನ್ನ ಪಯಣವನ್ನು ಆರಂಭಿಸಲಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯಾವ ತಂಡಗಳ ವಿರುದ್ಧ ಸೆಣಸಾಡಲಿದೆ ಎಂಬುದರ ಕುರಿತಾದ ಮಾಹಿತಿ ಇಲ್ಲಿದೆ.
27 ಮಾರ್ಚ್ 2022 - 3.30 pm ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್
2 ಏಪ್ರಿಲ್ 2022 - 7.30 pm - ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್
7 ಏಪ್ರಿಲ್ 2022 - 7.30 pm -ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್
10 ಏಪ್ರಿಲ್ 2022- 3.30 pm- ಕೋಲ್ಕತಾ ನೈಟ್ ರೈಡರ್ಸ್ vs ಡೆಲ್ಲಿ ಕ್ಯಾಪಿಟಲ್ಸ್
16 ಏಪ್ರಿಲ್ 2022-7.30 pm- ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
20 ಏಪ್ರಿಲ್ 2022- ರಾತ್ರಿ 7.30- ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್
22 ಏಪ್ರಿಲ್ 2022- ರಾತ್ರಿ 7.30- ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ ರಾಯಲ್ಸ್
28 ಏಪ್ರಿಲ್ 2022 - 7.30 pm- ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತಾ ನೈಟ್ ರೈಡರ್ಸ್
1 ಮೇ 2022- ಮಧ್ಯಾಹ್ನ 3.30- ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್
5 ಮೇ 2022- 7.30 pm- ಡೆಲ್ಲಿ ಕ್ಯಾಪಿಟಲ್ಸ್ vs ಸನ್ ರೈಸರ್ಸ್ ಹೈದರಾಬಾದ್
8 ಮೇ 2022- 7.30 pm - ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್
11 ಮೇ 2022-7.30 pm- ರಾಜಸ್ಥಾನ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್
16 ಮೇ 2022- ರಾತ್ರಿ 7.30- ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್
21 ಮೇ 2022- ಸಂಜೆ 7.30- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್
ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್, ಅಕ್ಷರ್ ಪಟೇಲ್, ಪೃಥ್ವಿ ಶಾ, ಅನ್ರಿಚ್ ನಾರ್ಟ್ಜೆ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ಕುಲದೀಪ್ ಯಾದವ್, ಅಶ್ವಿನ್ ಹೆಬ್ಬಾರ್, ಅಭಿಷೇಕ್ ಶರ್ಮಾ, ಕಮಲೇಶ್ ನಾಗರಕೋಟಿ, ಕೆಎಸ್ ಭರತ್, ಮನದೀಪ್ ಸಿಂಗ್, ಖಲೀಲ್ ಸದ್ಕಾವ್, ಚೇತನ್ ಸದ್ಕಾವ್, ಚೇತನ್ ಸದ್ಕಾವ್ , ರಿಪಾಲ್ ಪಟೇಲ್, ಯಶ್ ಧುಲ್, ರೋವ್‌ಮನ್ ಪೊವೆಲ್, ಪ್ರವೀಣ್ ದುಬೆ, ಲುಂಗಿ ಎನ್‌ಗಿಡಿ, ವಿಕಿ ಓಸ್ಟ್ವಾಲ್, ಸರ್ಫರಾಜ್ ಖಾನ್.