For Quick Alerts
ALLOW NOTIFICATIONS  
For Daily Alerts
 

DC vs CSK: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ

IPL 2022: Delhi Capitals vs Chennai Super Kings Toss report and playing XI

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 55ನೇ ಪಂದ್ಯದಲ್ಲಿ ಇಂದು ( ಮೇ 8 ) ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಮುಂಬೈನ ಡಾ ಡಿ ವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದು, ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ 5 ಪಂದ್ಯಗಳಲ್ಲಿ ಗೆದ್ದು ಉಳಿದ 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದರೆ, 10 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಎರಡೂ ತಂಡಗಳಿಗೂ ಸಹ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇನ್ನೂ ಇದ್ದು ಇಂದಿನ ಪಂದ್ಯ ಇತ್ತಂಡಗಳಿಗೂ ಬಹುಮುಖ್ಯದ್ದಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಮೊಯಿನ್ ಅಲಿ, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್), ಶಿವಂ ದುಬೆ, ಡ್ವೇನ್ ಬ್ರಾವೋ, ಮಹೇಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್, ಶ್ರೀಕರ್ ಭರತ್, ಮಿಚೆಲ್ ಮಾರ್ಷ್, ರಿಷಭ್ ಪಂತ್ ( ನಾಯಕ ಮತ್ತು ವಿಕೆಟ್ ಕೀಪರ್ ), ರೋವ್‌ಮನ್ ಪೊವೆಲ್, ಅಕ್ಸರ್ ಪಟೇಲ್, ರಿಪಾಲ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಜೆ

Story first published: Sunday, May 8, 2022, 19:11 [IST]
Other articles published on May 8, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+