Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs KKR: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

IPL 2022: Delhi Capitals vs Kolkata Knight Riders head to head record details in Kannada

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 41ನೇ ಪಂದ್ಯ ನಾಳೆ ( ಏಪ್ರಿಲ್ 28 ) ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಲಿದ್ದು, ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇತ್ತ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನು ನೀಡಲಾಗದೇ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನವನ್ನು ಹೊಂದುವಲ್ಲಿ ವಿಫಲವಾಗಿದ್ದರೆ, ಅತ್ತ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನೂತನ ನಾಯಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನ ನೀಡಲಾಗದೇ ಅಂಕಪಟ್ಟಿಯಲ್ಲಿ ಕಳಪೆ ಸ್ಥಾನವನ್ನು ಪಡೆದುಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ 7 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು, ಉಳಿದ 4 ಪಂದ್ಯಗಳಲ್ಲಿ ಸೋತು, 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು, ಉಳಿದ 5 ಪಂದ್ಯಗಳಲ್ಲಿ ಸೋತು, 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

ಇನ್ನು ಇತ್ತಂಡಗಳು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇದು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಇದಕ್ಕೂ ಮುನ್ನ ಏಪ್ರಿಲ್ 10ರಂದು ನಡೆದಿದ್ದ ಟೂರ್ನಿಯ 19ನೇ ಪಂದ್ಯದಲ್ಲಿ ಮುಖಾಮುಖಿಯಾಗಿ, ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 44 ರನ್‌ಗಳ ಜಯ ಸಾಧಿಸಿತ್ತು. ಹೀಗೆ ಈ ಬಾರಿಯ ಐಪಿಎಲ್ ಟೂರ್ನಿಯ ಮುಖಾಮುಖಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೇಲುಗೈ ಸಾಧಿಸಿದ್ದು, ಐಪಿಎಲ್ ಇತಿಹಾಸದಲ್ಲಿ ಇತ್ತಂಡಗಳ ನಡುವೆ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಒಟ್ಟಾರೆ ಐಪಿಎಲ್ ಮುಖಾಮುಖಿ

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 30 ಪಂದ್ಯಗಳು ನಡೆದಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ 16 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಹೀಗೆ ಇತ್ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ

ಈ ಬಾರಿಯ ಐಪಿಎಲ್ ಟೂರ್ನಿಯ ಮುಖಾಮುಖಿ ಪಂದ್ಯವೂ ಸೇರಿದಂತೆ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಮುಖಾಮುಖಿ ಪಂದ್ಯಗಳಲ್ಲಿ ಕೋಲ್ಕತಾ ನೈಟ್ ರೈಡರ್ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 3 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಒಟ್ಟು 3 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಇತ್ತಂಡಗಳ ನಡುವೆ ನಡೆದ 2 ಲೀಗ್ ಪಂದ್ಯಗಳ ಪೈಕಿ ಮೊದಲನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಗೆಲುವು ಕಂಡಿತ್ತು. ಇನ್ನು ಈ ಎರಡೂ ತಂಡಗಳು ಪ್ಲೇ ಆಫ್ ಸುತ್ತಿನ ಎಲಿಮಿನೇಟರ್ 2 ಪಂದ್ಯದಲ್ಲಿ ಸೆಣಸಾಟ ನಡೆಸಿದ್ದವು ಹಾಗೂ ಆ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಜಯ ಸಾಧಿಸಿತ್ತು.

Story first published: Wednesday, April 27, 2022, 20:51 [IST]
Other articles published on Apr 27, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+