DC vs KKR: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ ಇಲ್ಲಿದೆ

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 41ನೇ ಪಂದ್ಯ ಇಂದು ( ಏಪ್ರಿಲ್ 28 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಫೀಲ್ಡಿಂಗ್ ಆಯ್ದುಕೊಂಡಿದ್ದು ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಆಡುವ ಬಳಗಗಳು:
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ ( ವಿಕೆಟ್ ಕೀಪರ್/ನಾಯಕ), ಲಲಿತ್ ಯಾದವ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ
ಕೋಲ್ಕತಾ ನೈಟ್ ರೈಡರ್ಸ್ ಆಡುವ ಬಳಗ: ಆರೋನ್ ಫಿಂಚ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್, ಬಾಬಾ ಇಂದರ್‌ಜಿತ್(ವಿಕೆಟ್ ಕೀಪರ್), ರಿಂಕು ಸಿಂಗ್, ಆಂಡ್ರೆ ರಸೆಲ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ
ಇತ್ತಂಡಗಳು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿವೆ. ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿರುವ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 3 ಪಂದ್ಯಗಳಲ್ಲಿ ಗೆದ್ದು ಉಳಿದ 4 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದರೆ, 8 ಪಂದ್ಯಗಳನ್ನಾಡಿರುವ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿ 5 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನವನ್ನು ಪಡೆದುಕೊಂಡಿದೆ.
ಹೀಗೆ ಗೆಲುವಿಗಿಂತ ಸೋಲನ್ನೇ ಹೆಚ್ಚಾಗಿ ಕಂಡಿರುವ ಈ 2 ತಂಡಗಳು ಪ್ಲೇ ಆಫ್ ಹಾದಿಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಈ ಪಂದ್ಯದಲ್ಲಿ ಜಯ ಸಾಧಿಸಲೇಬೇಕಾದ ಅನಿವಾರ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications